ಪುತ್ತೂರು ನವೆಂಬರ್ 24 : ಪ್ರತಿಭಟನಾ ಸಭೆಯಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದು ಅಬ್ಬರಿಸಿದ ಹಿಂದೂ ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ದ ಪ್ರಕರಣ ದಾಖಲಾಗಿದೆ.
ಕಾರಂತ್ ಭಾಷಣ :
ಕಾರಿಂಜೇಶ್ವರ ಕ್ಷೇತ್ರದ ಸುತ್ತಮುತ್ತ ನಡೆಯುವ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಕಾರಿಂಜದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆದ ರುದ್ರಗಿರಿ ರಣಕಹಳೆ ಎಂಬ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಜಗದೀಶ್ ಕಾರಂತ್ ಕಾರಿಂಜದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸದೇ ಹೋದಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ನುಗ್ಗಿ ಕೊರಳು ಪಟ್ಟಿ ಹಿಡಿಯುವ ಎಚ್ಚರಿಕೆ ನೀಡಿದ್ದರು.
ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರರಿಂದ ಅವರು ಪೂಂಜಾಲುಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪದ ಮೇಲೆ ಜಗದೀಶ್ ಕಾರಂತ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಾರಂತ್ ಭಾಷಣ:
ಕಾರಂತ್ ಹೇಳಿದ್ದೇನು?:
ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆಯಿಟ್ಟು, ಜಿಲ್ಲಾಧಿಕಾರಿಯ ಕೊರಳ ಪಟ್ಟಿ ಹಿಡಿಯುತ್ತೇವೆ ಎಂದು ಹಿಂದೂ ಜಾಗರಣ ವೇದಿಕೆಯ ಕ್ಷೇತ್ರಿಯಾ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ ಬಹಿರಂಗ ಬೆದರಿಕೆ ಹಾಕಿದ್ದಾರೆ. ಬಂಟ್ವಾಳ ತಾಲೂಕಿನ ಕಾರಿಂಜ ದೇವಸ್ಥಾನದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ದೇವಸ್ಥಾನದ ಪವಿತ್ರ್ಯತೆಗೆ ದಕ್ಕೆ ಮಾಡುವುದರ ವಿರುದ್ಧ ಜನಜಾಗೃತಿ ಸಭೆಯ ಭಾಷಣದಲ್ಲಿ ಈ ಹೇಳಿಕೆ ನೀಡಿದ್ದಾರೆ. ಅಕ್ರಮ ಗಣಿಗಾರಿಕೆ ನಿಲ್ಲಿಸಲು ಜಿಲ್ಲಾಧಿಕಾರಿಗೆ 30 ದಿನಗಳ ಕಾಲಾವಕಾಶ ನೀಡುತ್ತಿದ್ದೇವೆ. ತಪ್ಪಿದ್ದಲ್ಲಿ ಡಿ.21ರಂದು ಸಾವಿರಾರು ಜನರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆ ಹಾಕಿ ಜಿಲ್ಲಾಧಿಕಾರಿಯ ಕೊರಳು ಪಟ್ಟಿಯನ್ನು ಹಿಡಿಯುತ್ತೇವೆ. ತಾಕತ್ತಿದ್ದರೆ ಗಣಿಗಾರಿಕೆ ನಿಲ್ಲಿಸು. ಇಲ್ಲದಿದ್ದರೆ ವರ್ಗಾವಣೆ ತೆಗೆದು ಹೊರಗೆ ಹೋಗು ಎಂದು ಜಗದೀಶ್ ಕಾರಂತ ಏಕವಚನದಲ್ಲೇ ಜಿಲ್ಲಾಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ. ಅಕ್ರಮ ಗಣಿಗಾರಿಕೆಯನ್ನು 24 ಗಂಟೆಯೊಳಗೆ ನಿಲ್ಲಿಸುವ ಅಧಿಕಾರ ಜಿಲ್ಲಾ ಉಸ್ತುವಾರಿ ಮಂತ್ರಿ ಮತ್ತು ಜಿಲ್ಲಾಧಿಕಾರಿಗೆ ಇದೆ. ಗಣಿಗಾರಿಕೆ ನಿಲ್ಲಿಸಲು ಅಸಾಧ್ಯವಾದರೆ ರಾಜೀನಾಮೆ ನೀಡಿ ಮನೆಗೆ ಹೋಗು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಶಾಸಕರಿಗೆ ಜಗದೀಶ್ ಕಾರಂತ ತಾಕೀತು ಮಾಡಿದ್ದಾರೆ.