ಪುತ್ತೂರು: ಸಂಘ ಪರಿವಾರವು ವಿದ್ಯಾರ್ಥಿಗಳನ್ನು ಬಳಸಿಕೊಂಡು ಪುತ್ತೂರಿನಲ್ಲಿ ಕೋಮುಗಲಭೆ ಸೃಷ್ಠಿಸುವ ಸಂಚು ರೂಪಿಸುತ್ತಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ.
ಪುತ್ತೂರಿನ ಸರಕಾರಿ ಪಿಯು ಕಾಲೇಜು ಕೊಂಬೆಟ್ಟುವಿನಲ್ಲಿ ಕಳೆದ ಒಂದು ವಾರಗಳಿಂದ ನಡೆಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಯುತ್ತಿದ್ದು, ಹಲ್ಲೆಯಲ್ಲಿ ಮೂರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ ತ್ರಿಶೂಲ ದಾಳಿ,ಬೆದರಿಕೆಗಳು ನಡೆಯಲು ಹಿಂದೂ ಸಂಘಟನೆಗಳ ನಾಯಕರಾದ ಅರುಣ್ ಕುಮಾರ್ ಪುತ್ತಿಲ, ಚಿನ್ಮಯ ಈಶ್ವರಮಂಗಲ ನೇರ ಹೊಣೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕುಂಬ್ರ ಆರೋಪಿಸಿದರು.
ಪತ್ರಿಕಾಗೋಷ್ಠಿ ದೃಶ್ಯ:
ಈ ಘಟನೆಗಳು ಪುನರಾವರ್ತಿಸಿದರೆ ಎಲ್ಲಾ ವಿದ್ಯಾರ್ಥಿ ಸಂಘಟನೆಗಳು ಸೇರಿ ಪುತ್ತೂರು ಚಲೋ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ ಅವರು ಈ ಘಟನೆಯಲ್ಲಿ ಪೋಲೀಸ್ ಇಲಾಖೆಯೂ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಪತ್ರಿಕಾಗೋಷ್ಠಿ ದೃಶ್ಯ: