Connect with us

ವರದಿಗಳು

‘ಯಂಗ್ ಇಂಡಿಯಾ ಕೇ ಬೋಲ್’ ರಾಷ್ಟ್ರಮಟ್ಟದ ಭಾಷಣದ ಮೂಲಕ ಕಾಂಗ್ರೇಸ್ ರಾಷ್ಟ್ರೀಯ ವಕ್ತಾರೆಯಾಗಿ ಆಯ್ಕೆಯಾದ ಮೊದಲ ಕರಾವಳಿಯ ಯುವತಿ ಸುರೈಯ್ಯ ಅಂಜುಮ್

Ad Widget

Ad Widget

Ad Widget

Ad Widget

Ad Widget

Ad Widget

ಉಡುಪಿ- ರಾಷ್ಟ್ರೀಯ ಮಟ್ಟದ ವಕ್ತಾರರ ಆಯ್ಕೆಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ರಾಷ್ಟ್ರೀಯ ಮಟ್ಟದ “ಯಂಗ್ ಇಂಡಿಯಾ ಕೇ ಬೋಲ್” ಭಾಷಣ ಸ್ಪರ್ಧೆ ಆಯೋಜಿಸಿತು. ದೇಶವ್ಯಾಪ್ತಿ 15,000 ಜನರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ದೇಶದಾದ್ಯಂತ 300 ಯುವ ಕಾಂಗ್ರೆಸ್ ವಕ್ತಾರರು ನವದೆಹಲಿಯ ಯುವ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಆಯ್ಕೆಯಾಗಿದ್ದರು.

Ad Widget

Ad Widget

Ad Widget

ಕರ್ನಾಟಕ ರಾಜ್ಯದ ಹತ್ತು ವಾಗ್ಮಿಗಳು ದೆಹಲಿಯ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Ad Widget

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೆಯಾದ ಪತ್ರಕರ್ತೆ ಸುರೈಯ್ಯ ಅಂಜುಮ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಿ, ರಾಜ್ಯ ಮಟ್ಟದ 180 ಸ್ಪರ್ಧಿಗಳಲ್ಲಿ ಆಯ್ಕೆಯಾಗಿ ರಾಷ್ಟ್ರೀಯ ಮಟ್ಟದ 300 ವಾಗ್ಮಿಗಳಲ್ಲಿ ಅತ್ಯುತ್ತಮ 30 ಸ್ಪರ್ಧಿಗಳಲ್ಲಿ‌ ಕೊನೆಯ ಸುತ್ತಿನಲ್ಲಿ ಆಯ್ಕೆಯಾಗಿ ಅಂತಿಮ ಹಂತದಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರೀಯ ಯುವ ವಾಗ್ಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.

Ad Widget

Ad Widget

ಫೈನಲ್ ನಲ್ಲಿ ಸುರ್ರಯ್ಯ ಭಾಷಣ:

ಇವರು ಉಡುಪಿ ಹಾಗೂ ಕರಾವಳಿಯ ಮೊದಲ ಯುವ ಕಾಂಗ್ರೆಸ್ ನ ಮಹಿಳಾ ವಕ್ತಾರೆಯಾಗಿ ಆಯ್ಕೆಯಾಗಿದ್ದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವೆಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading
Click to comment

Leave a Reply

ರಾಜ್ಯ

FRUITS ID ರೈತರಿಗೆ ಕಂದಾಯ ಸಚಿವರಿಂದ ಮಹತ್ವದ ಸೂಚನೆ : 15 ದಿನದೊಳಗೆ ಫ್ರೂಟ್ಸ್ ದತ್ತಾಂಶದಲ್ಲಿ ಜಮೀನಿನ ಮಾಹಿತಿಯನ್ನು ದಾಖಲಿಸುವಂತೆ ಸಚಿವ ಕೃಷ್ಣ ಬೈರೇಗೌಡ ಹೇಳಿದ್ಯಾಕೆ ?

Ad Widget

Ad Widget

ಸರ್ಕಾರಿ ಸೌಲಭ್ಯ ಪಡೆಯಲು ರೈತರು ಇನ್ನು ಮುಂದೆ ಪ್ರತಿ ಬಾರಿ ಜಮೀನಿನ ಪಹಣಿ, ಆಧಾರ್‌, ಬ್ಯಾಂಕ್‌ ಖಾತೆ ವಿವರಗಳನ್ನು ಒದಗಿ ಸುವ ಅಗತ್ಯವಿಲ್ಲ. ಕೃಷಿ ಇಲಾಖೆಯೇ ಈಗ ರೈತರ ವಿವರಗಳನ್ನು ಸಂಗ್ರಹಿಸಿ, ‘ಫ‌್ರೂಟ್ಸ್‌’ ತಂತ್ರಾಂಶದಲ್ಲಿ ದಾಖಲೀಕರಣ ಮಾಡಿಕೊಳ್ಳುತ್ತದೆ,

Ad Widget

Ad Widget

Ad Widget

Ad Widget

ಫ್ರೂಟ್ ಐಡಿಯಲ್ಲಿ (FRUITS ID) ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ರೈತರು ತಮ್ಮ ಜಮೀನಿನ ನಿಖರ ಮಾಹಿತಿಯನ್ನು ಮುಂದಿನ 15 ದಿನಗಳ ಒಳಗೆ ಫ್ರೂಟ್ಸ್ ದತ್ತಾಂಶದಲ್ಲಿ ಭರ್ತಿ ಮಾಡಿಸಬೇಕು. ಇದರಿಂದ ಅಕ್ರಮಗಳು ತಪ್ಪುವುದಲ್ಲದೆ, ನೈಜ ಫಲಾನುಭವಿಗಳಿಗೆ ಪರಿಹಾರದ ಹಣ ಬಿಡುಗಡೆಯಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Ad Widget

Ad Widget

Ad Widget

236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ ಪಟ್ಟಿಯಿಂದ ಹೊರಗುಳಿದಂತೆ ಆಗಿದೆ. ಈಗಾಗಲೇ ರಾಜ್ಯ ಸರ್ಕಾರ ಸಹ 324 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈಗ ರೈತರು ಬರ ಪರಿಹಾರವನ್ನು ಪಡೆಯಬೇಕೆಂದರೆ 15 ದಿನಗಳ ಒಳಗೆ ರಾಜ್ಯದ ಫ್ರೂಟ್ಸ್‌ ಪೋರ್ಟಲ್‌ನಲ್ಲಿ ಕೆಲವು ಮಾಹಿತಿಯನ್ನು ಭರ್ತಿ ಮಾಡಬೇಕಿದೆ. ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ಮಾಹಿತಿಯನ್ನು ಮುಂದಿನ 15 ದಿನಗಳೊಳಗೆ ದಾಖಲಿಸುವಂತೆ ಸರ್ಕಾರ ನಿರ್ದೇಶಿಸಿದೆ.

Ad Widget

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ (FID number) ಕಡ್ಡಾಯವಾಗಿದೆ. ಇದನ್ನು ಕೃಷಿ ಇಲಾಖೆಯಿಂದ ಮಾಡಿಸಿಕೊಳ್ಳಬೇಕು. ಬರ ಪರಿಹಾರ, ಬೆಳೆ ವಿಮೆ, ವಿವಿಧ ಯೋಜನೆಯಡಿ ಯಂತ್ರೋಪಕರಣಗಳ ಸಹಾಯಧನ ಪಡೆಯಲು ಹೀಗೆ ಅನೇಕ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಈ ನಂಬರ್ ಅತಿ ಅವಶ್ಯಕವಾಗಿದೆ.

Ad Widget

Ad Widget
Continue Reading

ಅಂತರ ರಾಜ್ಯ

K Surendran | ಮಂಜೇಶ್ವರ ಚುನಾವಣ ಲಂಚ ಪ್ರಕರಣ – ಕೋರ್ಟ್ ಗೆ ಹಾಜರಾಗಿ ಜಾಮೀನು ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್

Ad Widget

Ad Widget

ಮಂಜೇಶ್ವರ ಚುನಾವಣಾ ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ (K Surendran) ಸೇರಿದಂತೆ ಎಲ್ಲಾ ಆರೋಪಿಗಳು ಬುಧವಾರ ಕಾಸರಗೋಡು ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆರೋಪಿಗಳಿಗೆ ಜಾಮೀನು ನೀಡಲಾಗಿದ್ದು, ಮುಂದಿನ ವಿಚಾರಣೆಯನ್ನು ನ.15ಕ್ಕೆ ಮುಂದೂಡಲಾಗಿದೆ.

Ad Widget

Ad Widget

Ad Widget

Ad Widget

ಯುವ ಮೋರ್ಚಾ ರಾಜ್ಯ ಕೋಶಾಧಿಕಾರಿ ಸುನಿಲ್ ನಾಯ್ಕ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕೆ. ಸುರೇಶ್ ನಾಯ್ಕ್ , ಮಣಿಕಂಠ ರೈ, ಲೋಕೇಶ್ ನೋಂಡಾ ಇತರರು ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.

Ad Widget

Ad Widget

Ad Widget

ಈ ಹಿಂದೆ ಮೂರು ಬಾರಿ ನ್ಯಾಯಾಲಯ ಹಾಜರಾಗಲು ನೋಟಿಸ್ ನೀಡಿತ್ತು. ಆದರೆ ಆರೋಪಿಗಳು ಹಾಜರಾಗಿರಲಿಲ್ಲ.

Ad Widget

ಬುಧವಾರ ನಡೆದ ವಿಚಾರಣೆ ವೇಳೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. 2021 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ. ಸುರೇಂದ್ರ ನ್ ಬಿಎಸ್ಪಿ ಅಭ್ಯರ್ಥಿಯಾಗಿದ್ದ ಕೆ. ಸುಂದರರಿಂದ ನಾಮಪತ್ರ ಹಿಂತೆಗೆಯಲು ಎರಡೂವರೆ ಲಕ್ಷ ರೂ. ಹಾಗೂ ಮೊಬೈಲ್ ಫೋನ್ ನೀಡಿ ನಾಮಪತ್ರ ಹಿಂಪಡೆಯಲಾಗಿತ್ತು. ಚುನಾವಣೆ ಬಳಿಕ ಪ್ರಕರಣ ಬಳಿಕ ಬೆಳಕಿಗೆ ಬಂದಿತ್ತು. ಈ ಬಗ್ಗೆ ನ್ಯಾಯಾಲಯದ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Ad Widget

Ad Widget
Continue Reading

ವರದಿಗಳು

ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನವರಾತ್ರಿ ಪ್ರಯುಕ್ತ ‘ಜಿ.ಎಲ್ ಸ್ವರ್ಣ ಹಬ್ಬ’ – ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ : 9 ಚಿನ್ನದ ನಾಣ್ಯ ಗೆಲ್ಲುವ ಸುವರ್ಣವಕಾಶ

Ad Widget

Ad Widget

ಪುತ್ತೂರಿನ ಮುಖ್ಯರಸ್ತೆಯ ಕಾಂಪ್ಲೆಕ್ಸ್ ‌ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್ ಸ್ವರ್ಣ ಹಬ್ಬ ತಾ.15.10.2023 ರಿಂದ 24.10.2023ರ ವರೆಗೆ ನಡೆಯಲಿರುವುದು.

Ad Widget

Ad Widget

Ad Widget

Ad Widget

ಈ ಸ್ವರ್ಣ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ಬಂಗಾರದ ಚೈನ್ ಖರೀದಿಗೆ VA 6%ನಿಂದ ಆರಂಭ, ‘ಜಂಟ್ಸ್ ಕಡ ಖರೀದಿಗೆ VA 6%ನಿಂದ ಆರಂಭ, ಆ್ಯಂಟಿಕ್ ಟ್ಯುವಲ್ಲರ್ಸ್ ಖರೀದಿಗೆ VA 15%ನಿಂದ ಆರಂಭ, ಬ್ಯಾಂಗಲ್ಸ್ ಖರೀದಿಗೆ VA 8%ನಿಂದ ಆರಂಭ, ಗ್ರಾಹಕರಿಗೆ ನವರಾತ್ರಿಯ ಈ ಹಬ್ಬದ ಋತುವಿನಲ್ಲಿ ಚಿನ್ನಾಭರಣಗಳನ್ನು ಖರೀದಿಸಿ 9 ಚಿನ್ನದ ನಾಣ್ಯಗಳನ್ನು ಗೆಲ್ಲುವ ಅಮೂಲ್ಯ ಅವಕಾಶವಿದೆ.

Ad Widget

Ad Widget

Ad Widget

ಸ್ವರ್ಣ ಹಬ್ಬದ ಪ್ರತಿ ಖರೀದಿಯ ಮೇಲೆ ವಿಶೇಷ ರಿಯಾಯಿತಿ ಪಡೆಯವ ಸುವರ್ಣಾವಕಾಶವಿದೆ.

Ad Widget

ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ದವಾಗಿದ್ದು, ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಚಿನ್ನದ ಆಭರಣಗಳು, ವಜ್ರಾಭರಣಗಳು, ಬೆಳ್ಳಿಯ ಆಭರಣಗಳು, ಆ್ಯಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.

Ad Widget

Ad Widget

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಈ ಜಿ.ಎಲ್. ಸ್ವರ್ಣ ಹಬ್ಬ ಎಲ್ಲ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Continue Reading

Trending

error: Content is protected !!