Ad Widget

ಉಪ್ಪಿನಂಗಡಿ : ಓವರ್ ಟೆಕ್ ಮಾಡುವ ಭರದಲ್ಲಿ ಅಟೋ ರಿಕ್ಷಾಕ್ಕೆ ಗುದ್ದಿದ ಲಾರಿ | ವಿದ್ಯಾರ್ಥಿ ಮೃತ್ಯು – ಮೂವರಿಗೆ ಗಂಭೀರ ಗಾಯ

5
Ad Widget

Ad Widget

Ad Widget

ಉಪ್ಪಿನಂಗಡಿ: ನ 29 : ಲಾರಿ ಹಾಗೂ ಅಟೋ ರಿಕ್ಷಾದ ಮಧ್ಯೆ ನಡೆದ ಅಪಘಾತದಲ್ಲಿ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ  ಮೃತಪಟ್ಟು,  ಅಟೋ ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಬಳಿಯ ಮಠ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

Ad Widget

Ad Widget

Ad Widget

Ad Widget

ಹಿರ್ತಡ್ಕ ನಿವಾಸಿ ದಿ. ಅಶ್ರಫ್ ಎಂಬವರ ಪುತ್ರ, ಹಿರ್ತಡ್ಕ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಅಲ್ತಾಫ್ (12) ಮೃತ ಬಾಲಕ.  ರಿಕ್ಷಾದಲ್ಲಿದ್ದ ಈತನ ತಾಯಿ ಖತೀಜಮ್ಮ,  ಅಣ್ಣ ಆಶಿಕ್ ಮತ್ತು ಅಟೋ ರಿಕ್ಷಾ ಚಾಲಕ ಹಿರ್ತಡ್ಕ ನಿವಾಸಿ ಸಿದ್ದೀಕ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು,  ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget

Ad Widget

ಮೃತ ಅಲ್ತಾಫ್‍ನ ತಾಯಿ ಮಂಗಳೂರಿನ ಬೆಂಗರೆ ನಿವಾಸಿಯಾಗಿದ್ದು,  ತನ್ನ ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದವರು ಇಂದು ಬಸ್ಸಿನಲ್ಲಿ ಉಪ್ಪಿನಂಗಡಿಗೆ ಬಂದು, ಬಳಿಕ ಅಟೋ ರಿಕ್ಷಾದಲ್ಲಿ ಹಿರ್ತಡ್ಕಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ.  

ಹಾಸನ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಲಾರಿ ಮಠ ಮಸೀದಿಯ ಬಳಿಯ ತಿರುವಿನಲ್ಲಿ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಅತೀ ವೇಗದಿಂದ ಬಂದು ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆಯಿಂದ ಅಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

Ad Widget

Ad Widget

 ಮಾಹಿತಿ ತಿಳಿಯುತ್ತಲೇ,  ಘಟನಾ ಸ್ಥಳಕ್ಕೆ ಧಾವಿಸಿದ  ಪುತ್ತೂರು ಡಿವೈಎಸ್ಪಿ ಗಾನಾ ಪಿ. ಕುಮಾರ್ ,  ಸಂಚಾರಿ ಸಬ್ ಇನ್ಸ್ ಪೆಕ್ಟರ್ ರಾಮ ನಾಯ್ಕ್ ಮತ್ತು ಸಿಬ್ಬಂದಿ  ಪರಿಶೀಲನೆ ನಡೆಸಿ  ಪ್ರಕರಣ ದಾಖಲಿಸಿದ್ದಾರೆ.

Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: