ಧರ್ಮಸ್ಥಳ: ಇತಿಹಾಸ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು 29 ರಿಂದ ಡಿ.4ರ ವರೆಗೆ ನಡೆಯಲಿವೆ.
ಲಕ್ಷದೀಪೋತ್ಸವಕ್ಕೆ ಸಿದ್ಧಗೊಂಡಿರುವ ಧರ್ಮಸ್ಥಳ ದೇವಸ್ಥಾನ ವಿವಿಧ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕಾರಗೊಡು ಕಣ್ಮನ ಸೆಳೆಯುತಿದೆ.




ಡಿ. 3 ರಂದು ಲಕ್ಷ ದೀಪೋತ್ಸವ ನಡೆಯಲಿದೆ.
ಡಿ. 2 ರಂದು ಗುರುವಾರ ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸುವರು. ಡಿ. 3 ರಂದು ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಉದ್ಘಾಟಿಸುವರು.
ಪ್ರತಿ ದಿನ ರಾತ್ರಿ 9 ಗಂಟೆಯಿಂದ ಉತ್ಸವಗಳು ನಡೆಯಲಿವೆ.ಅಮೃತವರ್ಷಿಣಿ ಸಭಾ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಡಿ. 1 ರಂದು ಬೆಂಗಳೂರಿನ ಡಾ. ಪದ್ಮಿನಿ ಮತ್ತು ಬಳಗದವರಿಂದ ಗಾಯನ, ಮತ್ತು ರಾಘವೇಂದ್ರ ಸಂಗೀತ ಸೇವಾ ಪ್ರತಿಷ್ಠಾನದ ಕಲಾವಿದರಿಂದ ನೃತ್ಯ ರೂಪಕ
ಡಿ.2 ರಂದು: ತ್ರಿಶೂರ್‌ನ ಶ್ರೀಕೃಷ್ಣ ಮೋಹನ್ ಮತ್ತು ರಾಮ್ ಕುಮಾರ್ ಮೋಹನ್ ಬಳಗದವರಿಂದ ಶಾಸ್ತ್ರೀಯ ಸಂಗೀತ
ಮಂಗಳೂರಿನ ಸನಾತನ ನಾಟ್ಯಾಲಯ ಕಲಾವಿದರಿಂದ ನುಡಿನಾದ ನಾಟ್ಯಾಮೃತ
ಡಿ.3: ಶುಕ್ರವಾರ ಬೆಂಗಳೂರಿನ ಮಂಜುಳಾ ಪರಮೇಶ್ ನಿರ್ದೇಶನದಲ್ಲಿ ನೃತ್ಯ ಸಂಭ್ರಮ
ಶ್ವೇತಾ ದೇವನಹಳ್ಳಿ ಮತ್ತು ತಂಡದವರಿಂದದ ಗಾನ ಲಹರಿ ಕಾರ್ಯಕ್ರಮ ನಡೆಯಲಿದೆ.