ಮಂಗಳೂರು : ನರ್ಸಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಗಡ್ಡ ಬೋಳಿಸಿ, ಹಲ್ಲೆ ನಡೆಸಿದ ಕೇರಳ ಮೂಲದ ಸೀನಿಯರ್ಸ್ – 9 ಜನರ ಬಂಧನ | ಬಂಧಿತರ ಪೈಕಿ ಕೆಲವರು ಡ್ರಗ್ಸ್ ಸೇವಿಸಿದ್ದು ಧೃಡ

ragaging
Ad Widget

Ad Widget

Ad Widget

ಮಂಗಳೂರು ನಗರದ ನರ್ಸಿಂಗ್ ಕಾಲೇಜೊಂದರ ಕೇರಳ ಮೂಲದ ಕಿರಿಯ ವಿದ್ಯಾರ್ಥಿಗಳನ್ನು ತಮ್ಮ ಕೊಠಡಿಗೆ ಕರೆದೊಯ್ದು  ರ್ಯಾಗಿಂಗ್‌ ಮಾಡಿದ ಆರೋಪದಲ್ಲಿ ಇಲ್ಲಿನ ಎರಡು ಪ್ರತ್ಯೇಕ ನರ್ಸಿಂಗ್ ಕಾಲೇಜುಗಳ ಕೇರಳ ಮೂಲದ   9 ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

Ad Widget

ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಅಕ್ರಮ ಬಂಧನದಲ್ಲಿಟ್ಟು ಗಡ್ಡ ಬೋಳಿಸಿ, ಹಣ ನೀಡುವಂತೆ ಪೀಡಿಸಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳದ ಕಣ್ಣೂರು ಮೂಲದವರಾಗಿದ್ದು, ನಗರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ ಅಮಲ್ ಗಿರೀಶ್ ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Ad Widget

Ad Widget

Ad Widget

 ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಬಂಧಿತ ಆರೋಪಿಗಳು . ಇವರ ಪೈಕಿ 7 ಮಂದಿ ಗಾಂಜಾ ಸೇವಿಸಿರುವುದು  ವೈದ್ಯಕೀಯ ಪರೀಕ್ಷೆಯಲ್ಲಿ ಶ್ರುತ ಪಟ್ಟಿದೆ.  ರೈಲ್ವೇ ನಿಲ್ದಾಣ ಬಳಿ ತಪ್ಪಿಸಿಕೊಳ್ಳುವ ಯತ್ನದಲ್ಲಿ ಆರೋಪಿ ವಿದ್ಯಾರ್ಥಿಗಲನ್ನು  ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Ad Widget

 ದೂರುದಾರ  ಅಮಲ್ ಗಿರೀಶ್  ಮತ್ತು ಆತನ ಕಾಲೇಜ್‌ ಮೇಟ್‌ ಕೇರಳ ಮೂಲದ ಕಾರ್ತಿಕ್ ವಿಜಯನ್ ರವರು  ಅತ್ತಾವರದ ಡಿ ಮಾರ್ಟ್‌ನಿಂದ ಫಳ್ನೀರ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗೆ ಶುಕ್ರವಾರ ರಾತ್ರಿ 7.30ರ ವೇಳೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ.

Ad Widget

Ad Widget

ಈ ವೇಳೆ ಎದುರಿಗೆ ಸಿಕ್ಕ ಆರೋಪಿಗಳು  ಕಿರುಚಾಡಿಕೊಂಡು ಬಂದು ಇಬ್ಬರನ್ನು ಅವರ ರೂಮಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಹಾಡಿಸಿದ್ದಾರೆ. ಗಡ್ಡವನ್ನು ಬೋಳಿಸಿದ್ದಾರೆ. ಹಣ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. 270 ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹೆಲ್ಮೆಟ್ ಮತ್ತು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಅಮಲ್ ಗಿರೀಶ್ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ.

  ಪಾಂಡೇಶ್ವರ ಠಾಣಾ ಇನ್‌ಸ್ಪೆಕ್ಟರ್ ಲೋಕೇಶ್ ಎ.ಸಿ. ಹಾಗು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್‌ಐ ಶೀತಲ್ ಅಲಗೂರ್ ಅವರು ಸಿಬ್ಬಂದಿ ಜತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: