ಮಂಗಳೂರು :ನ 29 : ಕಛೇರಿಯಲ್ಲಿ ಗುತ್ತಿಗೆ ಅಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಹಾಗೂ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಬಂಧಿತನಾಗಿದ್ದ ದ.ಕ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಹಾಗೂ ಆಯುಷ್ಮಾನ್ ನೋಡಲ್ ಆಫಿಸರ್ ಡಾ ರತ್ನಾಕರ್ ಗೆ ಜಾಮೀನು ದೊರೆತಿದೆ.
ಮೂರು ದಿನಗಳ ಹಿಂದೆ ವೈದ್ಯಾಧಿಕಾರಿಯ ಅಸಭ್ಯ ವರ್ತನೆಯ ಫೋಟೋ ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯರು ದೂರು ನೀಡಲು ಮುಂದೆ ಬಾರದ ಹಿನ್ನಲೆಯಲ್ಲಿ ಮಹಿಳಾ ಸಂಘಟನೆಯ ಸದಸ್ಯೆಯೊಬ್ಬರು ಪಾಂಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದರು
ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಶನಿವಾರದಂದು ಆತನನ್ನು ಬಂಧಿಸಿ ನ್ಯಾಯಾಲಾಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯವೂ ಆರೋಪಿಗೆ ನ್ಯಾಯಾಲಾಯವೂ ಎರಡು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿತ್ತು. ಎರಡು ದಿನಗಳ ಬಳಿಕ ಪೊಲೀಸ್ ಕಸ್ಟಡಿ ಸೋಮವಾರ ಮುಗಿದದ್ದರಿಂದ ಮತ್ತೊಮ್ಮೆ ಇಂದು ಡಾ. ರತ್ನಾಕರನನ್ನು ಮೂರನೇ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜಾರುಪಡಿಸಲಾಯಿತು.

ಈ ವೇಳೆ ಆರೋಪಿಯೂ ಜಾಮೀನು ಅರ್ಜಿ ಸಲ್ಲಿಸಿದ್ದು, ಅದನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ.
ರತ್ನಾಕರ ಕಛೇರಿಯ ಸಿಬಂದಿಗಳ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ವಿಚಾರವೂ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ಬಂದಿದ್ದು, ಇಲಾಖಾ ವಿಚಾರಣೆ ನಡೆಸಿದ ಅದು , ಆರೋಪ ಮೇಲ್ನೋಟಕ್ಕೆ ಕಂಡು ಬಂದ ಹಿನ್ನಲೆಯಲ್ಲಿ ನವೆಂಬರ್ 8 ರಂದು ಆತನನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು.