ಉಪ್ಪಿನಂಗಡಿ, ನ. 29. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಮಠ ಎಂಬಲ್ಲಿ ಅಟೋರಿಕ್ಷಾ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜಾಗಿ ಅಟೋದಲ್ಲಿದ್ದ ಮಗು ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
