ಕೊಡಗು: ಹಿಂದು ಜಾಗರಣ ವೇದಿಕೆ ಕಾರ್ಯಕರ್ತನೊಬ್ಬನ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಎಲ್ಲರೂ ದೋಷಮುಕ್ತರಾಗಿದ್ದು, ಆ ಸಂಬಂಧಿತವಾಗಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಹಿಂದು ಜಾಗರಣ ವೇದಿಕೆ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ.
ಪ್ರವೀಣ್ ಪೂಜಾರಿ ಹತ್ಯೆ 2016ರ ಆಗಸ್ಟ್ 14ರಂದು ಕೊಡಗು ಜಿಲ್ಲೆ ಗುಡ್ಡೆಹೊಸೂರು ಬಳಿ ನಡೆದಿತ್ತು. ಅವರು ಅಖಂಡ ಭಾರತ ಸಂಕಲ್ಪ ಯಾತ್ರೆ ಪಂಜಿನ ಮೆರವಣಿಗೆ ಮುಗಿಸಿ ಹಿಂದಿರುಗುವಾಗ ಅವರನ್ನು ಕೊಲೆ ಮಾಡಲಾಗಿತ್ತು. ಈ ಸಂಬಂಧ ಒಂಬತ್ತು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.
ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಎಲ್ಲ ಒಂಬತ್ತು ಆರೋಪಿಗಳನ್ನು ದೋಷಮುಕ್ತಗೊಳಿಸಿ ಕೊಡಗು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಅವರ ವಿರುದ್ಧ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರನ್ನು ಆರೋಪಮುಕ್ತ ಗೊಳಿಸಿದೆ.
ಈ ಕೊಲೆ ಪ್ರಕರಣ ರಾಜಕೀಯ ಅಲ್ಲೋಲ ಕಲ್ಲೋಲ ಸೃಷ್ಟಿಸಿತು. ಆಗಿನ ಆಡಳಿತ ಪಕ್ಷದ ಮೇಲೆ ವಿರೋಧ ಪಕ್ಷವಾಗಿದ್ದ ಬಿಜೆಪಿ ಬಾರಿ ಪ್ರತಿಭಟನೆ ನಡೆಸಿತು.