ಪ್ರತಿಷ್ಠಿತ ಬಾಹ್ಯಾಕಾಶ ಸಂಸ್ಥೆ ‘ಇಸ್ರೋ’ ಖಾಸಗೀಕರಣ – ಕೇಂದ್ರ ಕಚೇರಿ ಬೆಂಗಳೂರಿನಿಂದ ಗುಜರಾತ್ ಗೆ ವರ್ಗಾಯಿಸಲು ಕೇಂದ್ರ ಸರ್ಕಾರ ನಿರ್ಧಾರ : ಕಾಂಗ್ರೇಸ್ ವಿರೋಧ

images (10)
Ad Widget

Ad Widget

Ad Widget

ಬೆಂಗಳೂರು: 1962 ರಲ್ಲಿ ನೆಹರು ನೇತೃತ್ವದ ಕೇಂದ್ರ ಸರ್ಕಾರ ವಿಕ್ರಮ್ ಸಾರಾಭಾಯಿ ನೇತೃತ್ವದಲ್ಲಿ ಸ್ಥಾಪಿಸಿದ  ಬೆಂಗಳೂರು  ನಗರದಲ್ಲಿ ಕೇಂದ್ರ ಕಚೇರಿ ಹೊಂದಿರುವ  ಇಸ್ರೋ ಕಛೇರಿಯನ್ನು ಗುಜರಾತ್ ರಾಜ್ಯಕ್ಕೆ ವರ್ಗಾಹಿಸುತ್ತಿರುವ ಹಾಗೂ ಇಸ್ರೋ ವನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರದ ನಿರ್ಧಾರ ಕೈಗೊಂಡಿದೆ.

Ad Widget

ಇದನ್ನು ಖಂಡಿಸಿ ಎನ್‍ಎಸ್‍ಯುಐ ವಿದ್ಯಾರ್ಥಿ ಕಾಂಗ್ರೆಸ್ ವತಿಯಿಂದ ಸಂಜಯನಗರದಲ್ಲಿರುವ ಇಸ್ರೋ ಕೇಂದ್ರ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Ad Widget

Ad Widget

Ad Widget

ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಮ್ಮ ಹಿರಿಯರು ಕಟ್ಟಿ ಬೆಳಸಿದ ಹಲವಾರು ಸಂಸ್ಥೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಖಾಸಗೀಕರಣ ಮಾಡಿದೆ. ಬೆಂಗಳೂರಿನ ಹವಮಾನ, ಉತ್ತಮ ಪರಿಸರದ ಕಾರಣದಿಂದ ಇಸ್ರೋ ಸಂಸ್ಥೆ ಸ್ಥಾಪಿಸಲಾಯಿತು. ಅದರೆ ಇಂದು ಗುಜರಾತ್ ರಾಜ್ಯಕ್ಕೆ ಇಸ್ರೋ ಸಂಸ್ಥೆ ವರ್ಗಾಯಿಸುವ ಹುನ್ನಾರ ನಡೆಯುತ್ತಿದೆ. ರಾಜ್ಯದ 25 ಬಿಜೆಪಿ ಲೋಕ ಸಭಾ ಸದಸ್ಯರು, 12 ರಾಜ್ಯ ಸಭಾ ಸದಸ್ಯರು ಪ್ರಧಾನಿರವರ ಬಳಿ ನಿಯೋಗ ತೆರಳಿ ಇಸ್ರೋ ಸಂಸ್ಥೆ ಇಲ್ಲಿಯೇ ಉಳಿಯುವಂತೆ ಮಾಡಬೇಕು. ನರೇಂದ್ರ ಮೋದಿಯೊಂದಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಿ ಇಸ್ರೋ ಸಂಸ್ಥೆ ಇಲ್ಲಿ ಉಳಿಯುವಂತೆ ಮನವಿ ಮಾಡಬೇಕು. ಅದಲ್ಲದೆ ವರ್ಗಾವಣೆಯಾದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Ad Widget

ಪ್ರತಿಭಟನೆಯಲ್ಲಿ ಶಾಸಕರಾದ ಕೃಷ್ಣಭೈರೇಗೌಡ, ಎನ್‍ಎಸ್‍ಯುಐ ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ಹಾಗೂ ಬೆಂಗಳೂರುನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಜಯಸಿಂಹ ಮತ್ತು ವಿದ್ಯಾರ್ಥಿ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Ad Widget

Ad Widget

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: