Ad Widget

ಮಂಗಳೂರು: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಸ್ಕೂಟರ್ ನಲ್ಲಿ ಬಂದು ಲೈಂಗಿಕ ಕಿರುಕುಳ ನೀಡಿದ ಕಿರಾತಕ – ದೂರು ದಾಖಲು

Screenshot_20211201-130244_Facebook
Ad Widget

Ad Widget

Ad Widget

ಮಂಗಳೂರು, ಡಿ 01 : ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಸ್ಕೂಟರಿನಲ್ಲಿ ಬಂದ ಕಿರಾತಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಲಪಾಡಿ ಅಲಂಕಾರುಗುಡ್ಡೆ ಬಳಿ ಡಿ . ೧ ರ ಬುಧವಾರ ಬೆಳಿಗ್ಗೆ ನಡೆದಿದೆ.

Ad Widget

Ad Widget

Ad Widget

Ad Widget

Ad Widget

ಕೋಟೆಕಾರು ಬಳಿಯ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ತಲಪಾಡಿ ಚೆಕ್ ಪೋಸ್ಟ್ ಬಳಿ ಬಸ್ಸು ಹತ್ತಲು ಒಳದಾರಿಯಾಗಿ ನಡೆಕೊಂಡು ಬರುವಾಗ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

Ad Widget

ವಿದ್ಯಾರ್ಥಿನಿ ಗಾಬರಿಗೊಂಡು ಬೊಬ್ಬಿಟ್ಟಾಗ ಸ್ಥಳೀಯರು ಜಮಾಯಿಸುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಸ್ಥಳೀಯರು ವಿದ್ಯಾರ್ಥಿನಿ ಗೆ ಧೈರ್ಯ ತುಂಬಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ತೆರಳಿ ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

Ad Widget

Ad Widget

Ad Widget

Ad Widget

ಸ್ಥಳೀಯವಾಗಿ ಹಲವು ಕಾರ್ಖಾನೆಗಳಿಗೆ ವಲಸೆ ಕಾರ್ಮಿಕರು ಬಂದಿದ್ದು, ಅವರ ದಾಖಲೆಗಳನ್ನು ಪೊಲೀಸ್ ಠಾಣೆಯಲ್ಲಿ ಮಾಲೀಕರು ದಾಖಲಿಸಿರುವುದಿಲ್ಲ.

ಅಲ್ಲದೆ ಈ ಭಾಗದಲ್ಲಿ ಇಂತಹ ಕೃತ್ಯಗಳು ಅನೇಕ ನಡೆಯುತ್ತಿದ್ದು, ಈ ಬಗ್ಗೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಗಮನಕ್ಕೆ ತಂದಿದ್ದರೂ, ಕ್ರಮ ವಹಿಸಿಲ್ಲ ಅನ್ನುವ ಆರೋಪ ಕೇಳಿಬಂದಿದೆ.
ಆರೋಪಿ ಕುರಿತಂತೆ ಸಿಸಿಟಿವಿಯಲ್ಲಿ ದಾಖಲೆಯಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: