ಪುತ್ತೂರು: ಡಿ 2 : ಪುತ್ತೂರು ಬಸ್ಸು ನಿಲ್ದಾಣದಲ್ಲಿ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಸಂಭವಿಸಿದ ತಳ್ಳಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ವಿದ್ಯಾರ್ಥಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಧ್ಯಾಹ್ನ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಯೊಬ್ಬ ಪೋಸ್ಟ್ ಹಾಕಿದ ವಿಚಾರವಾಗಿ ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮಕಿ ನಡೆದಿತ್ತು ಎಂದು ಹೇಳಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತನಿಖೆ ನಡೆಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಂ ಹ್ಯಾರೀಸ್, ಮೊಹಮ್ಮದ್ ಆದಿಲ್, ಇರ್ಫಾನ್, ಮೊಹಮ್ಮದ್ ಮುಸ್ತಫಾ, ಮೊಹಮ್ಮದ್ ಅಸ್ಪಾಕ್ ಹಾಗೂ ನಿತೇಶ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಇವರ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಐಪಿಸಿ 160 ರಂತೆ ಪ್ರಕರಣ ದಾಖಲಾಗಿದೆ.
ಪುತ್ತೂರು ಬಸ್ ನಿಲ್ದಾಣದ ಬಳಿ ಡಿ .2 ರಂದು ಬೆಳಿಗ್ಗೆ ಸುಮಾರು 6-7 ಮಂದಿ ವ್ಯಕ್ತಿಗಳು ಪರಸ್ಪರ ದೂಡಾಡಿಕೊಂಡು, ಮಾತಿನ ಚಕಮಕಿ ನಡೆಸುತ್ತಿದ್ದರು. ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಹಾಗೂ ನೆಮ್ಮದಿಗೆ ಭಂಗವನ್ನುಂಟು ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸ್ತನ ಕ್ಯಾನ್ಸರ್ – ಲಕ್ಷಣಗಳು ಆಧುನಿಕ ಚಿಕಿತ್ಸಾ ವಿಧಾನ ಮತ್ತು ತಡೆಗಟ್ಟುವ ಬಗೆ ಇಲ್ಲಿದೆ ಮಾಹಿತಿ : ಮಹಿಳೆಯರು/ ಯುವತಿಯರು ನೋಡಲೇಬೇಕಾದ ವಿಡಿಯೋ