ಮಂಗಳೂರು : ಡಿ 3 : ಆಟೋ ಚಾಲನೆಯ ಸಂದರ್ಭ ಹೃದಯಾಘಾತಕ್ಕಿಡಾಗಿ ಚಾಲಕ ಮೃತಪಟ್ಟ ಘಟನೆ ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಬೆಳಗ್ಗೆ ನಡೆದಿದೆ.
ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ (46) ಹೃದಯಘಾತಕ್ಕೆ ತುತ್ತಾಗಿ ಮೃತ ಪಟ್ಟ ಆಟೋ ರಿಕ್ಷಾ ಚಾಲಕ. ಪ್ರಯಾಣಿಕರೊಬ್ಬರನ್ನು ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಗೆ ಕರೆದೊಯ್ಯುತ್ತಿದ್ದ ಸಂದರ್ಭ ಹಠಾತ್ ಆಗಿ ಅವರಿಗೆ ಹೃದಯಾಘಾತವಾಗಿದೆ.
ರಿಕ್ಷಾವೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಪ್ಪಿನಮೊಗರು ತಲುಪಿದಾಗ ಚಾಲಕ ಹನೀಫ್ ಅವರಿಗೆ ಕಣ್ಣು ಮಂಜಾದಂತೆ ಆಗಿದೆ. ಕೆಲವೇ ಕ್ಷಣಗಳಲ್ಲಿ ಅವರು ಚಲಾಯಿಸುತ್ತಿದ್ದ ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದನ್ನು ಗಮನಿಸಿದ ಸಾರ್ವಜನಿಕರು ಹನೀಫ್ ಅವರನ್ನು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಬಳಿಕ ಸ್ವಲ್ಪ ಸಾವರಿಸಿಕೊಂಡ ಅವರು ಸ್ವಲ್ಪ ದೂರು ರಿಕ್ಷಾ ಚಲಾಯಿಸಿಕೊಂಡು ಹೋಗಿದ್ದಾರೆ. ಆದರೇ ನೇತ್ರಾವತಿ ಸೇತುವೆ ತಲುಪುತ್ತಿದ್ದಂತೆ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.
ಈ ಕುರಿತು ಕಂಕನಾಡಿ ನಗರ ಠಾಣೆಗೆ ದೂರು ನೀಡಲಾಗಿದೆ̤

ಸ್ತನ ಕ್ಯಾನ್ಸರ್ – ಲಕ್ಷಣಗಳು ಆಧುನಿಕ ಚಿಕಿತ್ಸಾ ವಿಧಾನ ಮತ್ತು ತಡೆಗಟ್ಟುವ ಬಗೆ ಇಲ್ಲಿದೆ ಮಾಹಿತಿ : ಮಹಿಳೆಯರು/ ಯುವತಿಯರು ನೋಡಲೇಬೇಕಾದ ವಿಡಿಯೋ