ಬೆಂಗಳೂರು :ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ (Omicron Variant) ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಒಮಿಕ್ರಾನ್ ತಡೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಇಂದು ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು.
ನಂತ್ರ ಕಂದಾಯ ಸಚಿವ ಆರ್. ಅಶೋಕ್ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದ್ರು.
ಸಚಿವ ಆರ್.ಅಶೋಕ್, ‘ ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಹೆಚ್ಚಿನ ಮಟ್ಟದ ಪ್ರಕರಣಗಳು ಪತ್ತಯಾಗ್ತಿವೆ ಹಾಗಾಗಿ ಶಾಲಾ ಕಾಲೇಜುಗಳಲ್ಲಿ ಅಧ್ಯಾಪಕರಿಗೆ ಮತ್ತು ಮಕ್ಕಳ ಪೋಷಕರಿಗೆ 2 ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ. ಇನ್ನು ಚಿತ್ರಮಂದಿರ, ಮಾಲ್‌ಗಳ ಪ್ರವೇಶಕ್ಕೆ 2 ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ’ ಎಂದರು.
ಶಾಲಾ ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನ ಮಾಡಬಾರದು. ಮದುವೆಯಲ್ಲಿ 500 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಇನ್ನು ವಿಮಾನ ನಿಲ್ದಾಣದಲ್ಲಿ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ ಎಂದರು.

ರಾಜ್ಯದಲ್ಲಿ ಹೊಸ ಕೋವಿಡ್ ರೂಪಾಂತರಿ ಪತ್ತೆ ಹಿನ್ನೆಲೆ, ಅಧಿಕಾರಿಗಳು ಮತ್ತು ತಜ್ಞರ ಜೊತೆ ಸಾಕಷ್ಟು ಚರ್ಚೆ ಮಾಡಲಾಗಿದೆ. ಈ ವೈರಸ್ ಅಷ್ಟೊಂದು ಪರಿಣಾಮಕಾರಿಯಲ್ಲ. ಆದರೂ ಕೆಲವೊಂದಿಷ್ಟು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.