ಲಸಿಕೆ ಹಾಕಿಸಿಕೊಳ್ಳದ ಕೊವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ಇಲ್ಲ : ಕೇರಳ ಸರಕಾರದ ಮಹತ್ವದ ಘೋಷಣೆ

pinarayi-vijayan
Ad Widget

Ad Widget

Ad Widget

ಕೊಚ್ಚಿನ್: ಲಸಿಕೆ (Covid-19 Vaccine) ಹಾಕಿಸಿಕೊಳ್ಳದ ಕೊವಿಡ್ ರೋಗಿ (Covid Patients)ಗಳಿಗೆ ರಾಜ್ಯದಲ್ಲಿ ಉಚಿತ ಚಿಕಿತ್ಸೆ ನೀಡುವುದಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಹೇಳಿದ್ದಾರೆ.

Ad Widget

ಓಮಿಕ್ರಾನ್ ರೂಪಾಂತರ(Omicron variant) ಭೀತಿಯ ನಡುವೆಯೇ ದೇಶದಲ್ಲಿ ಲಸಿಕೆ ನೀಡಿಕೆ ಪ್ರಮಾಣದ ಕುರಿತು ಭಾರಿ ಚರ್ಚೆಗಳು ನಡೆಯುತ್ತಿರುವಾಗಲೇ ಇತ್ತ ಕೇರಳ ಸರ್ಕಾರ ಲಸಿಕೆ ಕುರಿತು ದಿಟ್ಟ ನಿರ್ಧಾರ ಕೈಗೊಂಡಿದ್ದು, ಲಸಿಕೆ ಹಾಕಿಸಿಕೊಳ್ಳದ ಕೊವಿಡ್ ರೋಗಿಗಳಿಗೆ ಕೇರಳ ಸರ್ಕಾರ ಉಚಿತ ಚಿಕಿತ್ಸೆ ನೀಡುವುದಿಲ್ಲ ಎಂದು ಘೋಷಣೆ ಮಾಡಿದೆ.

Ad Widget

Ad Widget

ನಿನ್ನೆ ನಡೆದ ಕೋವಿಡ್-19 ಪರಿಶೀಲನಾ ಸಭೆಯ ಬಳಿಕ ಸಿಎಂ ಪಿಣರಾಯಿ ವಿಜಯನ್ ಇಂತಹುದೊಂದು ನಿರ್ಧಾರಕ್ಕೆ ಬಂದಿದ್ದು, ‘ರಾಜ್ಯದ ಕೊವಿಡ್ ನಿಯಂತ್ರಣ ಕ್ರಮಗಳೊಂದಿಗೆ ಸಹಕರಿಸದ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುವುದಿಲ್ಲ. ಲಸಿಕೆಯನ್ನು ತೆಗೆದುಕೊಳ್ಳದವರಿಗೆ ಚಿಕಿತ್ಸಾ ವೆಚ್ಚವನ್ನೂ ಸರ್ಕಾರ ಭರಿಸುವುದಿಲ್ಲ. ಅಲರ್ಜಿ ಅಥವಾ ಯಾವುದೇ ಕಾಯಿಲೆಯ ಹಿನ್ನೆಲೆಯಲ್ಲಿ ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕುವವರು ಸರ್ಕಾರಿ ಸೇವೆಯಲ್ಲಿರುವ ವೈದ್ಯರು ನೀಡಿರುವ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು. ಇದು  ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರು ಮತ್ತು ಶಿಕ್ಷಕರಿಗೂ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ. 

Ad Widget

ಅಂತೆಯೇ ಲಸಿಕೆ ಹಾಕಿಸಿಕೊಳ್ಳದಿದ್ದರೆ ಅವರು ಪ್ರತಿ ವಾರ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ, ಅದಕ್ಕಾಗಿ ಅವರೇ ವೆಚ್ಚವನ್ನು ಭರಿಸಬೇಕಾಗುತ್ತದೆ. ಪರೀಕ್ಷಾ ವರದಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು. ಕಚೇರಿಗೆ ತೆರಳುವವರಿಗೂ ಇದು ಕಡ್ಡಾಯವಾಗಿದೆ. ಹೀಗೆ ತೆಗೆದುಕೊಂಡ ಕ್ರಮಗಳು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದು ವಿಜಯನ್ ಹೇಳಿದ್ದಾರೆ.

Ad Widget

Ad Widget

ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

ಅಂತೆಯೇ ಸಭೆಯಲ್ಲಿ ಓಮಿಕ್ರಾನ್ ರೂಪಾಂತರದಿಂದ ಉಂಟಾಗುವ ಅಪಾಯದ ಹಿನ್ನೆಲೆಯಲ್ಲಿ ಜಾಗರೂಕತೆಯನ್ನು ಹೆಚ್ಚಿಸಲು ಆರೋಗ್ಯ ಇಲಾಖೆಯನ್ನು ಸಿಎಂ ವಿಜಯನ್ ಕೇಳಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರ ಪ್ರಯಾಣದ ಇತಿಹಾಸವನ್ನು ವಿಮಾನ ನಿಲ್ದಾಣಗಳಲ್ಲಿ ಸೂಕ್ಷ್ಮವಾಗಿ ಪರಿಶೀಲಿಸಬೇಕು ಮತ್ತು ಪ್ರೋಟೋಕಾಲ್ ಪ್ರಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಸ್ಥಳೀಯ ಸ್ವಯಂ ಆಡಳಿತ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿರುವ ಅರ್ಹ ಜನಸಂಖ್ಯೆಗೆ ಸಂಪೂರ್ಣ ಲಸಿಕೆ ಹಾಕುವಂತೆ ನೋಡಿಕೊಳ್ಳಬೇಕು. ಡಿಸೆಂಬರ್ 1 ರಿಂದ 15 ದಿನಗಳ ಕಾಲ ಕೇರಳದಲ್ಲಿ ವಿಶೇಷ ಲಸಿಕೆ ಅಭಿಯಾನ ನಡೆಯಲಿದೆ ಎಂದು ಹೇಳಿದ್ದಾರೆ.

Leave a Reply

Recent Posts

error: Content is protected !!
%d bloggers like this: