ಮಂಗಳೂರು : ಡಿ 3 : ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಡಿಗೆ ಕಾಲು ಜಾರಿ ಬೀಳುತ್ತಿದ್ದ ವಿದ್ಯಾರ್ಥಿನಿಯನ್ನು ಕಾಲೇಜು ವಿದ್ಯಾರ್ಥಿಯೊಬ್ಬ ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ಗುರುವಾರ ನಡೆದಿದೆ.
ಮಂಜೇಶ್ವರ ಮನೀಷ್ ಎಂಬಾತ ವಿದ್ಯಾರ್ಥಿನಿಯನ್ನು ರಕ್ಷಿಸಿದ ವಿದ್ಯಾರ್ಥಿ. ಈತ ಮಂಗಳೂರಿನ ಕಾರ್‌ಸ್ಪೀಟ್ ಬಳಿಯ ಕಾಲೇಜಿನ ವಿದ್ಯಾರ್ಥಿ.
ಮನೀಷ್ ಕಾಲೇಜು ಮುಗಿದ ಬಳಿಕ ತನ್ನ ಮನೆ ಮಂಜೇಶ್ವರಕ್ಕೆ ತೆರಳಲು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತಿದ್ದಾನೆ. ಈ ಸಂದರ್ಭ ರೈಲು ಚಲಿಸಲಾರಂಭಿಸಿದೆ. ಇದೇ ರೈಲನ್ನು ಹತ್ತಲು ವಿದ್ಯಾರ್ಥಿನಿಯೊಬ್ಬಳು ಪ್ರಯತ್ನಪಟ್ಟಾಗ ಕಾಲು ಜಾರಿ ಬಿದ್ದಿದ್ದಾಳೆ.

ಈ ವೇಳೆ ಸಮಯ ಪ್ರಜ್ಞೆ ಮೆರೆದ ಮನೀಷ್ ಕೂಡಲೇ ವಿದ್ಯಾರ್ಥಿನಿಯನ್ನು ಹಿಡಿದು ಎಳೆದಿದ್ದಾನೆ. ಇದರಿಂದ ವಿದ್ಯಾರ್ಥಿನಿ ಸಂಭಾವ್ಯ ಅಪಾಯದಿಂದ ಪಾರಾಗಿದ್ದಾಳೆ. ಮನೀಷ್‌ನ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಪ್ರಯಾಣಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಸ್ತನ ಕ್ಯಾನ್ಸರ್ – ಲಕ್ಷಣಗಳು ಆಧುನಿಕ ಚಿಕಿತ್ಸಾ ವಿಧಾನ ಮತ್ತು ತಡೆಗಟ್ಟುವ ಬಗೆ ಇಲ್ಲಿದೆ ಮಾಹಿತಿ : ಮಹಿಳೆಯರು/ ಯುವತಿಯರು ನೋಡಲೇಬೇಕಾದ ವಿಡಿಯೋ :