Connect with us

ಬಿಗ್ ನ್ಯೂಸ್

Mangalore | BIG BREAKING – ಮಂಗಳೂರಿನ ಗೋಡೆಗಳಲ್ಲಿ ಉಗ್ರರಿಗೆ ಬೆಂಬಲಿಸಿ ಬರೆದವರಿಗೆ ಉಗ್ರರ ನಂಟು – ಶಿವಮೊಗ್ಗ ಪೊಲೀಸರಿಂದ ಇಬ್ಬರ ಬಂಧನ

Ad Widget

Ad Widget

Ad Widget

Ad Widget

ಶಿವಮೊಗ್ಗ: ನಿಷೇಧಿತ ಉಗ್ರ ಸಂಘಟನೆಯೊಂದಿಗೆ (Terrorist) ಸಂಪರ್ಕ ಹೊಂದಿರುವ ಆರೋಪದಡಿ ಇಬ್ಬರನ್ನು ಶಿವಮೊಗ್ಗ (Shimogga) ಪೊಲೀಸರ ವಿಶೇಷ ತನಿಖಾ ತಂಡ ಬಂಧಿಸಿದ್ದು, ಮತ್ತೋರ್ವನಿಗಾಗಿ ಶೋಧ ನಡೆಸಿದೆ.

Ad Widget

Ad Widget

Ad Widget

2020 ರಲ್ಲಿ ಮಂಗಳೂರಿನ ಕೆಲವು ಗೋಡೆಗಳ ಮೇಲೆ ಉಗ್ರವಾದಿಗಳನ್ನು (Mangalore Terrorist Support) ಬೆಂಬಲಿಸಿ ಬರೆದಿದ್ದ ಆರೋಪದಡಿ ಬಂಧಿತರಾಗಿರುವ ಇಬ್ಬರು ಆರೋಪಿಗಳಿಗೆ ಐಸಿಸ್ ನಂಟು ಹೊಂದಿರುವುದಾಗಿ ಶಿವಮೊಗ್ಗದ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.

vAd Widget

Ad Widget

ಸೆ.20ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2020ರಲ್ಲಿ ಮಂಗಳೂರಿನ ಕೆಲವು ಬಡಾವಣೆಗಳಲ್ಲಿನ ಗೋಡೆಗಳ ಮೇಲೆ ಉಗ್ರವಾದಿಗಳನ್ನು ಬೆಂಬಲಿಸಿದ ಬರಹಗಳನ್ನು ಬರೆದ ಹಿನ್ನೆಲೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಆಗಲೇ, ತೀರ್ಥಹಳ್ಳಿಯ ಮೊಹಮ್ಮದ್ ಶಾರಿಖ್ ಹಾಗೂ ಮಾಜ್ ಮುನೀರ್ ಅಹ್ಮದ್ ಎಂಬುವರನ್ನು ಬಂಧಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಯಾಸಿನ್ ಎಂಬಾತನನ್ನೂ ಬಂಧಿಸಲಾಗಿದೆ. ಇವರಲ್ಲಿ ಶಾರಿಖ್ ಎಂಬಾತ ಪರಾರಿಯಾಗಿದ್ದು ಆತನಿಗಾಗಿ ಶೋಧ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

ಅತ್ತ, ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಮಂಗಳೂರು ಉಗ್ರ ಗೋಡೆ ಬರಹಗಳಿಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳಿಗೆ ಉಗ್ರರಿಗೆ ನಂಟು ಇರುವುದು ತಿಳಿದುಬಂದಿದೆ. ಅದರಲ್ಲೂ ಐಸಿಸ್ ಉಗ್ರರ ಜೊತೆಗೆ ನಂಟು ಹೊಂದಿರುವ ವಿಚಾರ ಬೆಳಕಿಗೆ ಬಂದಿದೆ. ಆ ಕುರಿತಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Ad Widget

Ad Widget

Ad Widget

ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ಕೋರ್ಟ್ ರಸ್ತೆಯ ಪಕ್ಕದ ಕಟ್ಟಡವೊಂದರ ಕಾಂಪೌಂಡ್ ಮೇಲೆ ಉಗ್ರರನ್ನು ಬೆಂಬಲಿಸಿದ ಬರಹವನ್ನು ಬರೆದಿದ್ದರು. ಆನಂತರ, ಕದ್ರಿ ರಸ್ತೆಯಲ್ಲಿರುವ ಗೋಡೆಯೊಂದರ ಮೇಲೂ ಅಂಥದ್ದೇ ಬರಹ ಬರೆಯಲಾಗಿತ್ತು. ಹಾಗಾಗಿ, ಬಂದರು ಠಾಣೆ ಹಾಗೂ ಕದ್ರಿ ಠಾಣೆಗಳಲ್ಲಿ ಪ್ರತ್ಯೇಕವಾಗಿ ಪ್ರಕರಣಗಳು ದಾಖಲಾಗಿದ್ದವು.

ಆಗ ನಡೆದ ಪ್ರಾಥಮಿಕ ತನಿಖೆಯ ವೇಳೆ, ಶಾರಿಖ್ ಹಾಗೂ ಮಾಜ್ ಮುನೀರ್ ಎಂಬುವರನ್ನು ಪೊಲೀಸರು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದು, ಅದು ವಿವಿಧ ಮಾಧ್ಯಮಗಳಲ್ಲಿಯೂ ಪ್ರಕಟವಾಗಿತ್ತು. ಇವರಲ್ಲಿ ಶಾರಿಖ್ ಪರಾರಿಯಾಗಿದ್ದಾನೆಂದು ಹೇಳಲಾಗಿದೆ. ಆತನಿಗಾಗಿ ಶೋಧ ಮುಂದುವರಿದಿದೆ ಎಂದೂ ಹೇಳಲಾಗಿದೆ.

Click to comment

Leave a Reply

ಬಿಗ್ ನ್ಯೂಸ್

Vasanth Bangera | ಯಡಿಯೂರಪ್ಪ ಜೊತೆ ಪ್ರಥಮ ಬಾರಿ ಬಿಜೆಪಿಯಿಂದ ವಿಧಾನಸೌಧ ಪ್ರವೇಶಿಸಿ ಬೆಳ್ತಂಗಡಿಯಲ್ಲಿ ಮೂರು ಪಕ್ಷದಿಂದ ಐದು ಬಾರಿ ಶಾಸಕರಾಗಿದ್ದ ದಕ್ಷಿಣ ಕನ್ನಡದ ಅಪರೂಪದ ರಾಜಕಾರಣಿ ವಸಂತ ಬಂಗೇರ ಇನ್ನಿಲ್ಲ

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಪ್ರಥಮ ಬಾರಿ ಬಿಜೆಪಿಯಿಂದ ಯಡಿಯೂರಪ್ಪ ಜೊತೆ ವಿಧಾನಸೌದಕ್ಕೆ ಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ (Vasanth Bangera) (79ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮೇ 8 ರಂದು ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Ad Widget

Ad Widget

Ad Widget

ಕುವೆಟ್ಟು ಗ್ರಾಮದ ಕೇದೆ ಸುಬ್ಬ ಪೂಜಾರಿ ಮತ್ತು ದೇವಕಿ ದಂಪತಿಯ ಪುತ್ರರಾಗಿರುವ ಬಂಗೇರರು 15 ಜನವರಿ 1946ರಂದು ಜನಿಸಿದ್ದರು. ವಸಂತ ಬಂಗೇರ ಅವರು ಬೆಳ್ತಂಗಡಿಯ ಬೋರ್ಡ್‌ ಹೈಸ್ಕೂಲ್‌ನಲ್ಲಿ ಎಸ್‌. ಎಸ್. ಎಲ್. ಸಿ. ಯನ್ನು ಮಾಡಿದರು. ಮುಲ್ಕಿ ಮತ್ತು ಉಜಿರೆಯ ಎಸ್. ಡಿ.ಎಂ. ಕಾಲೇಜುಗಳಲ್ಲಿ ವ್ಯಾಸಂಗವನ್ನು ಮಾಡಿ 1962 ರಲ್ಲಿ ಪಿ.ಯು.ಸಿ ವ್ಯಾಸಂಗ ಮಾಡಿದರು.

vAd Widget

Ad Widget

1972 ರಲ್ಲಿ ಕುವೆಟ್ಟು ಗ್ರಾಮ ಪಂಚಾಯತ್‌ನ ಚುನಾವಣೆಯಲ್ಲಿ ಅವಿರೋಧವಾಗಿ ಸದಸ್ಯರಾಗಿ ಆಯ್ಕೆಯಾಗಿ ನಂತರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1983 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾಯಿತರಾಗಿ ಪ್ರಥಮ ಬಾರಿಗೆ ವಿಧಾನ ಸಭೆಯನ್ನು ಪ್ರವೇಶಿಸಿದ್ದರು. ಬಿಜೆಪಿಯ ಯಡಿಯೂರಪ್ಪ ಮತ್ತು ವಸಂತ ಬಂಗೇರ ಮಾತ್ರ ಬಿಜೆಪಿಯಿಂದ 1983ರಲ್ಲಿ ಆಯ್ಕೆಯಾಗಿದ್ದರು.

Ad Widget

Ad Widget

ಬಂಗೇರರು ದಕ್ಷಿಣ ಕನ್ನಡದಲ್ಲಿ ಬಿಜೆಪಿ , ಜೆಡಿಎಸ್, ಕಾಂಗ್ರೇಸ್ ಮೂರು ಪಕ್ಷದಿಂದ ಶಾಸಕರಾದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದರು ನೇರ ನಡೆ ನುಡಿಯ ವ್ಯಕ್ತಿತ್ವದ ಬಂಗೇರರು ದಕ್ಷಿಣ ಕನ್ನಡ ಕಂಡಂತಹ ಅಪರೂಪದ ರಾಜಕಾರಣಿಯಾಗಿದ್ದರು.

Ad Widget

Ad Widget

Ad Widget
Continue Reading

ಬಿಗ್ ನ್ಯೂಸ್

SSLC RESULT -2024 ಫಲಿತಾಂಶ ದಿನಾಂಕ ಘೋಷಿಸಿದ ಶಿಕ್ಷಣ ಇಲಾಖೆ

Ad Widget

Ad Widget

Ad Widget

Ad Widget

ಬೆಂಗಳೂರು : 2023-24 ನೇ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಫಲಿತಾಂಶದ ದಿನಾಂಕ ಸಾರ್ವಜನಿಕ ಶಿಕ್ಷಣ ಇಲಾಖೆ ಘೋಷಿಸಿದೆ.

Ad Widget

Ad Widget

Ad Widget

ಮೇ.9ರಂದು ಬೆಳಿಗ್ಗೆ 10.30 ಕ್ಕೆ ಆನ್ ಲೈನ್ ನಲ್ಲಿ ಫಲಿತಾಂಶ ಘೋಷಣೆಯಾಗಲಿದೆ ಎಂದು ಇಲಾಖೆ ಘೋಷಿಸಿದೆ.

vAd Widget

Ad Widget

ಲಕ್ಷಾಂತರ ವಿದ್ಯಾರ್ಥಿಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾಯತ್ತಿದ್ದ ವಿದ್ಯಾರ್ಥಿಗಳಿಗೆ ನಾಳೆ ಮಹತ್ವದ ದಿನವಾಗಲಿದೆ.

Ad Widget

Ad Widget
Continue Reading

ಬಿಗ್ ನ್ಯೂಸ್

Covishield | ವಿಶ್ವದಾದ್ಯಂತ ಕೊವಿಡ್ -19 ಲಸಿಕೆ ಹಿಂಪಡೆದ ಅಸ್ಟ್ರಾಜೆನೆಕ – ಔಷಧಿ ತಯಾರಿಸಲ್ಲ ಮಾರಟ ಮಾಡಲ್ಲ ಎಂದ ಜೌಷಧಿ ದೈತ್ಯ

Ad Widget

Ad Widget

Ad Widget

Ad Widget

ಕೋವಿಶೀಲ್ಡ್ (Covishield) ಬಗ್ಗೆ ಆತಂಕದ ನಡುವೆ ಔಷಧೀಯ ದೈತ್ಯ ಅಸ್ಟ್ರಾಜೆನೆಕಾದ ಕೋವಿಡ್-19 ಲಸಿಕೆ ಅಪರೂಪದ ಮತ್ತು ಅಪಾಯಕಾರಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ನ್ಯಾಯಾಲಯದ ದಾಖಲೆಗಳಲ್ಲಿ ಕಂಪನಿಯು ಒಪ್ಪಿಕೊಂಡ ನಂತರ ಜಾಗತಿಕವಾಗಿ ಹಿಂತೆಗೆದುಕೊಳ್ಳಲಾಗುತ್ತಿದೆ. ಆದರೆ, ವಾಣಿಜ್ಯ ಕಾರಣಗಳಿಗಾಗಿ ಲಸಿಕೆಯನ್ನು ಮಾರುಕಟ್ಟೆಯಿಂದ ತೆಗೆದುಹಾಕಲಾಗುತ್ತಿದೆ ಎಂದು ಫಾರ್ಮಾ ತಿಳಿಸಿದೆ. ಲಸಿಕೆಯನ್ನು ಇನ್ನು ಮುಂದೆ ತಯಾರಿಸಲಾಗುವುದಿಲ್ಲ ಎಂದು ಕಂಪನಿ ಹೇಳಿದೆ.

Ad Widget

Ad Widget

Ad Widget

ಲಸಿಕೆ ಹಿಂತೆಗೆದುಕೊಳ್ಳುವಿಕೆಯು TTS-ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್‌ಗೆ ಕಾರಣವಾಗಬಹುದು ಎಂಬ ಆರೋಪದೊಂದಿಗೆ ಸಂಬಂಧ ಹೊಂದಿಲ್ಲ ಎಂದು ತಿಳಿಸಿದೆ. ಕಂಪೆನಿಯು ತನ್ನ ‘ಮಾರ್ಕೆಟಿಂಗ್ ಅಧಿಕಾರ’ ವನ್ನು ಸ್ವಯಂಪ್ರೇರಣೆಯಿಂದ ಹಿಂತೆಗೆದುಕೊಂಡಿರುವುದರಿಂದ, ಲಸಿಕೆಯನ್ನು ಇನ್ನು ಮುಂದೆ ಯುರೋಪಿಯನ್ ಒಕ್ಕೂಟದಲ್ಲಿ ಬಳಸಲು ಅಧಿಕೃತಗೊಳಿಸಲಾಗಿಲ್ಲ. ಹಿಂಪಡೆಯಲು ಅರ್ಜಿಯನ್ನು ಮಾರ್ಚ್ 5ರಂದು ಸಲ್ಲಿಸಲಾಗಿದ್ದು, ಮಂಗಳವಾರದಿಂದ ಜಾರಿಗೆ ಬಂದಿದೆ.

vAd Widget

Ad Widget

ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ರಕ್ತದ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಅಪರೂಪದ ಅಡ್ಡ ಪರಿಣಾಮದಿಂದಾಗಿ ವ್ಯಾಕ್ಸೆವ್ರಿಯಾ ಜಾಗತಿಕ ಪರಿಶೀಲನೆಯಲ್ಲಿದೆ. ಫೆಬ್ರವರಿಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ ನ್ಯಾಯಾಲಯದ ದಾಖಲೆಗಳಲ್ಲಿ, ಲಸಿಕೆ “ಅಪರೂಪದ ಸಂದರ್ಭಗಳಲ್ಲಿ, ಟಿಟಿಎಸ್‌ಗೆ ಕಾರಣವಾಗಬಹುದು ಎಂದು ಅಸ್ಟ್ರಾಜೆನೆಕಾ ಒಪ್ಪಿಕೊಂಡಿತು. TTS ಯುಕೆಯಲ್ಲಿ ಕನಿಷ್ಠ 81 ಸಾವುಗಳೊಂದಿಗೆ ಹಲವಾರು ಗಂಭೀರ ಗಾಯಗಳಿಗೆ ಕಾರಣವಾಗಿದೆ.

Ad Widget

Ad Widget

‘ಜಾಗತಿಕ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವಲ್ಲಿ ವ್ಯಾಕ್ಸೆವ್ರಿಯಾ ವಹಿಸಿದ ಪಾತ್ರದ ಬಗ್ಗೆ ನಾವು ನಂಬಲಾಗದಷ್ಟು ಹೆಮ್ಮೆಪಡುತ್ತೇವೆ. ಅಂದಾಜಿನ ಪ್ರಕಾರ, ಬಳಕೆಯ ಮೊದಲ ವರ್ಷದಲ್ಲಿಯೇ 6.5 ಮಿಲಿಯನ್‌ಗಿಂತಲೂ ಹೆಚ್ಚು ಜೀವಗಳನ್ನು ಉಳಿಸಲಾಗಿದೆ ಮತ್ತು ಜಾಗತಿಕವಾಗಿ ಮೂರು ಬಿಲಿಯನ್ ಡೋಸ್‌ಗಳನ್ನು ಪೂರೈಸಲಾಗಿದೆ. ನಮ್ಮ ಪ್ರಯತ್ನಗಳನ್ನು ಪ್ರಪಂಚದಾದ್ಯಂತದ ಸರ್ಕಾರಗಳು ಗುರುತಿಸಿವೆ ಮತ್ತು ಜಾಗತಿಕ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ನಿರ್ಣಾಯಕ ಅಂಶವೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ’ ಎಂದು ಅಸ್ಟ್ರಾಜೆನೆಕಾ ಸಂಸ್ಥೆ ತಿಳಿಸಿದೆ.

Ad Widget

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading