Connect with us

ಸ್ಥಳೀಯ

Kantara : ಭೂತ ಕೋಲದ ಸಮಯ ದೈವ ಬರೋದು ಸತ್ಯವಲ್ಲ – ದೈವ ನರ್ತಕರಿಗೆ ಮಾಶಸನ ನೀಡಿದ್ದು ತಪ್ಪು : ಬಿಟಿ ಲಲಿತಾ ನಾಯಕ್ – ಮಾಜಿ ಸಚಿವೆಯ ಹೇಳಿಕೆ ಖಂಡಿಸಿದ ಖಾದರ್

Ad Widget

Ad Widget

Ad Widget

Ad Widget Ad Widget

ಹುಬ್ಬಳಿ ನ : 5 :  ಸಾಮಾಜಿಕ ಕಾರ್ಯಕರ್ತೆ, ರಾಜಕಾರಣಿ, ಲೇಖಕಿ, ಚಲನಚಿತ್ರ ನಟಿ ಹಾಗೂ ಮಾಜಿ ಕನ್ನಡ, ಸಂಸ್ಕೃತಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಬಿಟಿ ಲಿಲಿತಾ ನಾಯಕ್, ಭೂತಾರಾಧನೆಯ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದು ದೈವಾರಾದಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.   ಇಂದು  ಬೆಳಿಗ್ಗೆ ಹುಬ್ಬಳಿಯಲ್ಲಿ ಮಾಧ್ಯಮಗಳ ಜತೆ  ಮಾತನಾಡಿದ    ಬಿ.ಟಿ.ಲಲಿತಾ ನಾಯಕ್ (BT Lalitha Nayak) ಅವರು ದೈವ ನರ್ತಕರಿಗೆ ಸರ್ಕಾರ (Government) ಮಾಸಾಶನ ನೀಡಬಾರದಿತ್ತು ಎಂದು ಹೇಳಿದ್ದರು.

Ad Widget

Ad Widget

Ad Widget

Ad Widget

Ad Widget

ರಿಷಭ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಇತ್ತೀಚೆಗೆ ಬಿಡುಗಡೆಗೊಂಡಿದ್ದು ದೇಶಾದ್ಯಂತ ಚಿತ್ರ ರಸಿಕರ ಮೆಚ್ಚುಗೆ ಪಡೆದಿತ್ತು . ಈ ಸಿನಿಮಾದಲ್ಲಿ ಕರಾವಳಿ ಕರ್ನಾಟಕದಲ್ಲಿ ಆರಾಧಿಸಲ್ಪಡುವ ದೈವರಾಧನೆಯನ್ನು ವಿಶೇಷವಾಗಿ ತೋರಿಸಲಾಗಿತ್ತು. ಈ ಸಿನಿಮಾ ಬಿಡುಗಡೆಗೊಂಡ ಬಳಿಕ 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಮಾಶಾಸನ ನೀಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನೀಲ್‌ ಕುಮಾರ್ ಘೋಷಿಸಿದ್ದರು. ಆದರೇ ಇದೀಗ ಲಲಿತಾ ನಾಯಕ್‌ ಅವರು ಇದಕ್ಕೆ ಖ್ಯಾತೆ ತೆಗೆದಿದ್ದಾರೆ.

Ad Widget

Ad Widget

ಭೂತ ಕೋಲದ  ಸಮಯದಲ್ಲಿ ದೈವ  ಬರೋದು ಸತ್ಯ ಅಲ್ಲವೇ ಅಲ್ಲ. ದೈವ ನರ್ತಕ ಚೀರಾಡುವುದರ, ಕುಣಿಯುವುದರ ಹಿಂದೆ ಬೇರೆಯದೇ ಕಾರಣವಿದೆ. ಭೂತಾರಾಧನೆಯ ಸಮಯದಲ್ಲಿ ದೇವರು ಬರುತ್ತಾರೆ ಅನ್ನೋದೆಲ್ಲಾ ಸುಳ್ಳು. ದೈವ ನರ್ತಕರು ಓಹೋ ಎಂದು ಚೀರಾಟ ಮಾಡುವುದು ಹಿಂದೆ ಬೇರೆಯದೇ ಆದ ಕಾರಣವಿದೆ.  ದಮನಿತ ಜನಾಂಗ ತಮ್ಮ ಅಸಹಾಯಕತೆಯನ್ನು ಚೀರಾಟ ಹಾಗೂ ಕುಣಿತದ ಮೂಲಕ ವ್ಯಕ್ತ ಪಡಿಸುತ್ತದೆ

Ad Widget

Ad Widget

ಈ ಚಿತ್ರದ ಸ್ಫೂರ್ತಿಯೊಂದಿಗೆ ಸರ್ಕಾರ ಕೂಡ ದೈವ ನರ್ತಕರಿಗೆ 2 ಸಾವಿರ ರೂಪಾಯಿ ಸಹಾಯಧನ ನೀಡುವ ತೀರ್ಮಾನ ಮಾಡಿರುವುದು ತಪ್ಪು . ಇದು ಸರಕಾರ ಮೂಢ ನಂಬಿಕೆಯನ್ನು ಬೆಳೆಸಿದಂತೆ. ಇದರ ಬದಲು ದೈವ ನರ್ತಕರನ್ನು ಆ ವೃತ್ತಿಯಿಂದ ಬಿಡಿಸಿ, ಅವರನ್ನು ಉದ್ಯೋಗ ಮಾಡಲು ಸರಕಾರ ಪ್ರೇರೆಪಿಸಬೇಕು ಎಂದಿದ್ದಾರೆ.

Ad Widget

Ad Widget

ಖಾದರ್ ಆಕ್ರೋಶ

 ಆದರೇ ಲಲಿತಾ ನಾಯಕ್‌ ಹೇಳಿಕೆಗೆ  ಕಾಂಗ್ರೆಸ್‌ ಮುಖಂಡ ಹಾಗೂ ವಿಧಾನಸಭೆಯ ವಿಪಕ್ಷ ನಾಯಕ  ಯು ಟಿ ಖಾದರ್‌ (UT Khader) ಆಕ್ರೋಶ ವ್ಯಕ್ತಪಡಿಸಿದ್ದಾರೆ . ಈ ಕುರಿತು  ಟ್ವೀಟ್‌ ಮಾಡಿರುವ ಅವರು  , ಬಿ.ಟಿ.ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ. ಮೊದಲು ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ (Karavali) ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು ಎಂದು ತಿರುಗೇಟು ನೀಡಿದ್ದಾರೆ.

Click to comment

Leave a Reply

ದಕ್ಷಿಣ ಕನ್ನಡ

Bird Flu HIgh Alert in DK ಕೇರಳದಲ್ಲಿ ಹಕ್ಕಿ ಜ್ವರ – ದಕ್ಷಿಣ ಕನ್ನಡದಲ್ಲಿ ಆರೋಗ್ಯ ಇಲಾಖೆ  ಕಟ್ಟೆಚ್ಚರ; ಹಕ್ಕಿಜ್ವರ ಇರುವಾಗ  ಕೋಳಿ ಮಾಂಸ ತಿನ್ನಬಹುದಾ ?

Ad Widget

Ad Widget

Ad Widget

Ad Widget Ad Widget

ಮಂಗಳೂರು: ನೆರೆರಾಜ್ಯ ಕೇರಳದ ಆಲಪ್ಪುಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹೀಗಾಗಿ  ದಕ್ಷಿಣ ಕನ್ನಡದ ಗಡಿ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆ  ಕಟ್ಟೆಚ್ಚರ ವಹಿಸಿದೆ. ಜಿಲ್ಲಾಡಳಿತ ಮತ್ತು ಪಶುಸಂಗೋಪನೆ ಇಲಾಖೆಯು ಕೇರಳ-ಕರ್ನಾಟಕ ಗಡಿಯ ಚೆಕ್‌ ಪೋಸ್ಟ್‌ಗಳಲ್ಲಿ ಕಣ್ಗಾವಲು ಹೆಚ್ಚಿಸಿವೆ. ರೋಗ ಬಾಧಿತ ಆಲಪ್ಪುಳವು ದಕ್ಷಿಣ ಕನ್ನಡ  ಜಿಲ್ಲೆಯಿಂದ ಸುಮಾರು 400 ಕಿಲೊಮೀಟರ್ ದೂರದಲ್ಲಿದೆ.

Ad Widget

Ad Widget

Ad Widget

Ad Widget

Ad Widget

ಕೇರಳ ಗಡಿಭಾಗ ಸುಳ್ಯದ ಜಾಲ್ಸೂರು, ಬಂಟ್ವಾಳದ ಸಾರಡ್ಕ, ಉಳ್ಳಾಲದ ತಲಪಾಡಿಯಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಉತ್ಪಾದನೆಯಾಗುವ ಮಾಂಸದ ಕೋಳಿಗಳಲ್ಲಿ ಬಹುಪಾಲನ್ನು ಕೇರಳದಲ್ಲಿ ಮಾರಾಟ ಮಾಡಲಾಗುತ್ತಿದೆ. ಕೇರಳದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬಳಿಕ  ಈ ಕೋಳಿ  ಸಾಗಾಟದ ವಾಹನಗಳನ್ನು ಗಡಿಭಾಗಗಳಲ್ಲಿ ಸ್ಯಾನಿಟೈಜ್ ಮಾಡಲಾಗುತ್ತದೆ. ಕೇರಳದಿಂದ ಖಾಲಿ ವಾಹನಗಳು ಬರುತ್ತವೆ. ಈ ವಾಹನಗಳನ್ನು ಕೂಡ ಗಡಿಯಲ್ಲಿ ಸ್ಯಾನಿಟೈಜ್ ಮಾಡಿದ ನಂತರವೇ ಒಳಗೆ ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಸಿದ್ದಾರೆ.

Ad Widget

Ad Widget

 ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಈ ಕರಿತಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ಹಕ್ಕಿಜ್ವರ ಹೆಚ್ಚಾಗಿ ವಲಸೆ ಹಕ್ಕಿಗಳಿಂದ ಹರಡುತ್ತದೆ. ದಕ್ಷಿಣ ಕನ್ನಡ ಜಿಲ್ಲೆಗೆ ವಿದೇಶದಿಂದ ಹಕ್ಕಿಗಳ ವಲಸೆ ಇಲ್ಲ. ಕೇರಳ ಮತ್ತು ಸುತ್ತಮುತ್ತಲಿಂದ ಬರುತ್ತವೆ. ಆದರೆ ಈಗ ಕಡು ಬೇಸಿಗೆ ಇರುವುದರಿಂದ ಹಕ್ಕಿಗಳ ವಲಸೆ ತೀರಾ ಅಪರೂಪ. ಹೀಗಾಗಿ ಹಕ್ಕಿ‌ಜ್ವರದ ಸೋಂಕು ಹರಡುವ ಸಾಧ್ಯತೆ ಕಡಿಮೆ. ಆದರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದಿದ್ದಾರೆ.

Ad Widget

Ad Widget

 ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವ ಲಕ್ಷಣವೂ ಕಂಡುಬಂದಿಲ್ಲ. ಆದರೂ ಇಲಾಖೆ ಜಾಗರೂಕವಾಗಿದೆ. ಹಕ್ಕಿಜ್ವರ  ಕೋಳಿ ಮಾಂಸ ಸೇವನೆಯಿಂದ ಹರಡುವುದಿಲ್ಲ. ಆದ್ದರಿಂದ ಮಾಂಸ ತಿನ್ನುವುದನ್ನು ಬಿಡಬೇಡಿ. ಸೋಂಕು ಕಾಲಿಟ್ಟರೂ ಕೋಳಿ ಸಾಕಣೆ ಕೇಂದ್ರದಲ್ಲಿ ಮತ್ತು ಮಾಂಸ ಸಂಸ್ಕರಣೆ ಮಾಡುವವರಿಗೆ ಮಾತ್ರ ತಗಲುತ್ತದೆ. ಮತ್ತೊಂದು ವಿಶೇಷವೆಂದರೆ ಈ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುವುದಿಲ್ಲ. ಹಕ್ಕಿಗಳಿಂದ ಮಾತ್ರ ಹರಡುತ್ತದೆ. ಆದ್ದರಿಂದ ಯಾರೂ ಗಾಬರಿಯಾಗಬೇಕಾದ ಅಗತ್ಯವಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget

Ad Widget

‘ಹೊರಗಿನವರು ಮತ್ತು ಅಪರಿಚಿತರನ್ನು ಕೋಳಿ ಸಾಕಣೆ ಕೇಂದ್ರದೊಳಗೆ ಬಿಡಬಾರದು ಎಂದು ಕೇಂದ್ರಗಳ ಮಾಲೀಕರಿಗೆ ಸೂಚಿಸಲಾಗಿದೆ. ಸೋಂಕು ಹರಡುವುದನ್ನು ತಡೆಯುವುದಕ್ಕಾಗಿ ಹೊರರಾಜ್ಯದಿಂದ ಬರುವ ವಾಹನವನ್ನು ಕೇಂದ್ರದೊಳಗೆ ಬಿಡುವ ಮೊದಲು ಕಡ್ಡಾಯವಾಗಿ ಸ್ಯಾನಿಟೈಜ್ ಮಾಡಬೇಕು ಎಂದು ಕೋಳಿ ಸಾಕಾಣೆದಾರರಿಗೆ  ಪಶುಸಂಗೋಪನೆ ಇಲಾಖೆ  ಸೂಚಿಸಿದೆ.

ಹಕ್ಕಿಗಳು ಅಥವಾ ಕೋಳಿಗಳು ಶಂಕಾಸ್ಪದವಾಗಿ ಸಾವಿಗೀಡಾಗಿರುವುದು ಕಂಡುಬಂದರೆ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು ಎಂದು ರೈತರಿಗೆ ತಿಳಿಸಲಾಗಿದೆ. ಹಕ್ಕಿಜ್ವರ ಹರಡುವುದರ ಕುರಿತು ಮತ್ತು ಅದನ್ನು ತಡೆಯುವ ಕ್ರಮಗಳ ಬಗ್ಗೆ ಪಶುವೈದ್ಯರು ರೈತರಿಗೆ ಮಾಹಿತಿ ನೀಡಿದ್ದಾರೆ. ಕೋಳಿ ಸಾಕಣೆ ಕೇಂದ್ರ ಮತ್ತು ಮಾಂಸ ಸಂಸ್ಕರಣೆ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹಕ್ಕಿಜ್ವರದ ಸೋಂಕು ತಗಲುವ ಸಾಧ್ಯತೆ ಹೆಚ್ಚು ಇರುವುದರಿಂದ ಜಾಗೃತರಾಗಿರುವಂತೆ ತಿಳಿಸಲಾಗಿದೆ ಎಂದು ಡಾ.ಅರುಣ್ ಕುಮಾರ್ ಹೇಳಿದರು.

Continue Reading

ಅಪರಾಧ

Bantwal-ಬಂಟ್ವಾಳ : ಬಾಲಕಿಯೊಂದಿಗೆ ಅನುಚಿತ ವರ್ತನೆ – ಯುವಕನ ವಿರುದ್ಧ ಪ್ರಕರಣ ದಾಖಲು

Ad Widget

Ad Widget

Ad Widget

Ad Widget Ad Widget

ಬಂಟ್ವಾಳ: ಪೊಳಲಿಯಲ್ಲಿ ಬಾಲಕಿಯನ್ನು ಅಪ್ಪಿ ಹಿಡಿದು ಅನುಚಿತವಾಗಿ ವರ್ತಿಸಿದ ಘಟನೆಯು ಎ. 24ರಂದು ನಡೆದಿದ್ದು, ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

Ad Widget

ಬಡಕಬೈಲು ನಿವಾಸಿ ಅಮೀನ್ ಯಾನೆ ಮೊಹಮ್ಮದ್ ಅಮೀನ್ ಪ್ರಕರಣ ಆರೋಪಿಯಾಗಿದ್ದು, ಆತ ಬಾಲಕಿಯ ಹಿಂದಿನಿಂದ ಬಂದು ಜೋರಾಗಿ ಎದೆ ಭಾಗವನ್ನು ಅಪ್ಪಿ, ಕೈಯನ್ನು ಬಲವಾಗಿ ಹಿಡಿದು ತಿರುಗಿ ನೋಡಲು ಕೂಡ ಅವಕಾಶ ನೀಡದೆ ನಿನ್ನ ಮೊಬೈಲ್ ನಂಬರ್ ಕೊಡಬೇಕು, ಇಲ್ಲದಿದ್ದರೇ ನಿನ್ನನ್ನು ರೇಪ್ ಮಾಡದೇ ಬಿಡುವುದಿಲ್ಲ, ನೀನು ನನಗೆ ಬೇಕು ಎಂದು ಹೇಳಿದಾಗ ನೊಂದ ಬಾಲಕಿಯು ಬೊಬ್ಬೆ ಹಾಕಿದ್ದಾಳೆ.

Ad Widget

Ad Widget

ಈ ವೇಳೆ ಸಂಬಂಧಿಕನೋರ್ವ ಬರುವುದನ್ನು ನೋಡಿ ಆರೋಪಿಯು ಸ್ಕೂಟರ್‌ನಲ್ಲಿ ಪರಾರಿಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget
Continue Reading

ರಾಜಕೀಯ

Priyanka Gandhi-ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನೆ ತ್ಯಾಗ ಮಾಡಿದ್ದಾರೆ, ಅಜ್ಜಿ ಯುದ್ದ ಕಾಲದಲ್ಲಿ ತನ್ನ ಚಿನ್ನವನ್ನೆ ದೇಶಕ್ಕೆ ನೀಡಿದ್ದಾರೆ : 60 ವರ್ಷದ ಆಡಳಿತದಲ್ಲಿ ಕಾಂಗ್ರೆಸ್ ಯಾವತ್ತೂ ಮಹಿಳೆಯರ ಮಂಗಳಸೂತ್ರ ಕೀಳುವ ಕೆಲಸ ಮಾಡಿಲ್ಲ : ಪ್ರಿಯಾಂಕಾ ಗಾಂಧಿ

Ad Widget

Ad Widget

Ad Widget

Ad Widget Ad Widget

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕ್ರಿಕೆಟ್ ಮೈದಾನದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರವಾಗಿ ಮತಯಾಚನೆ ಮಾಡಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ʻಮಂಗಳಸೂತ್ರದ ಮಹತ್ವದ ಬಗ್ಗೆ ಅರಿವಿಲ್ಲದವರು ಅಸಂಬದ್ಧವಾಗಿ ಮಾತನಾಡುತ್ತಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಿತ್ತುಕೊಳ್ಳುತ್ತದೆ ಎಂದು ಹೇಳುತ್ತಾರೆ. 60ಕ್ಕೂ ಹೆಚ್ಚಿನ ವರ್ಷ ದೇಶವನ್ನಾಳಿದ ಕಾಂಗ್ರೆಸ್ ಯಾವತ್ತೂ ಮಹಿಳೆಯರ ಮಂಗಳಸೂತ್ರ ಕೀಳುವ ಕೆಲಸ ಮಾಡಿಲ್ಲ’ ಎಂದರು.
ಈ ದೇಶಕ್ಕಾಗಿ ನನ್ನ ತಾಯಿ ತಮ್ಮ ಮಂಗಳಸೂತ್ರವನ್ನೇ ತ್ಯಾಗ ಮಾಡಿದವರು. ನನ್ನ ಅಜ್ಜಿ ಇಂದಿರಾಗಾಂಧಿ ಅವರು ಯುದ್ಧದ ಸಂದರ್ಭದಲ್ಲಿ ತಮ್ಮ ಚಿನ್ನವನ್ನೆಲ್ಲ ದೇಶಕ್ಕೆ ನೀಡಿದವರು. ಮಹಿಳೆಯರ ಸೇವೆ, ಸಂಘರ್ಷಗಳ ಬಗ್ಗೆ ಅರಿವಿಲ್ಲದ ನರೇಂದ್ರ ಮೋದಿ ಅವರು ಮಂಗಳಸೂತ್ರದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ಅವರು ಮಹಿಳೆಯರ ಭಾವನೆಗಳಿಗೆ ಘಾಸಿ ಮಾಡುತ್ತಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ಮಾಡಿದರು.

Ad Widget

Ad Widget

Ad Widget

Ad Widget

Ad Widget

ಚುನಾವಣೆಗಾಗಿ ಮೋದಿಗೆ ಮಂಗಳಸೂತ್ರ ನೆನಪಾಗಿದೆ
ನಮ್ಮ ದೇಶದ ಪರಂಪರೆಯು ಮಹಿಳೆಯರ ಸೇವೆ, ಸಂಘರ್ಷದ ಮೇಲೆ ನಿಂತಿದೆ. ನೋಟ್ ಬ್ಯಾನ್ ಮಾಡಿದಾಗ ಮಹಿಳೆಯರು ಕೂಡಿಟ್ಟಿದ್ದ ಹಣವನ್ನೆಲ್ಲ ಕಿತ್ತುಕೊಳ್ಳುವಾಗ ನರೇಂದ್ರ ಮೋದಿ ಅವರಿಗೆ ಮಂಗಳಸೂತ್ರದ ನೆನಪಾಗಲಿಲ್ಲ. ಲಾಕ್ ಡೌನ್ ಮಾಡಿ ಕಾರ್ಮಿಕರು ಮತ್ತು ಕುಟುಂಬ ಬರಿಗಾಲಲ್ಲಿ ತಮ್ಮ ಊರಿಗೆ ಸಾಗುವಾಗ ಮಂಗಳಸೂತ್ರದ ನೆನಪಾಗಲಿಲ್ಲ. ಕೃಷಿಕರು ಆಂದೋಲನ ಮಾಡಿದಾಗ 600ಕ್ಕೂ ಹೆಚ್ಚಿನ ಕೃಷಿಕರು ಸಾವನ್ನಪ್ಪಿದರು. ಅವರ ಪತ್ನಿಯರ ಮಂಗಳಸೂತ್ರದ ಬಗ್ಗೆ ಯೋಚಿಸಲಿಲ್ಲ. ಮಣಿಪುರದಲ್ಲಿ ಯೋಧನ ಪತ್ನಿಯನ್ನು ವಿವಸ್ತ್ರಗೊಳಿಸಿ ಬೀದಿಯಲ್ಲಿ ಮೆರವಣಿಗೆ ಮಾಡುವಾಗ ನರೇಂದ್ರ ಮೋದಿ ಅವರಿಗೆ ಆಕೆಯ ಮಂಗಳಸೂತ್ರದ ಬಗ್ಗೆ ಯೋಚನೆ ಬರಲಿಲ್ಲ. ಆದರೀಗ, ಚುನಾವಣೆಗಾಗಿ ಮಂಗಳಸೂತ್ರದ ನೆನಪಾಗಿದೆ.- ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನಾಯಕಿ

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading