Connect with us

ಸ್ಥಳೀಯ

Bellare : ಬೆಳ್ಳಾರೆ : ಸಾಮೂಹಿಕ ಗೋಪೂಜೆ ಕಾರ್ಯಕ್ರಮದ ಸಂದರ್ಭ ಬಾಲಕಿಗೆ ಕಿರುಕುಳ – ಯುವಕನ ವಿರುದ್ದ ಪ್ರಕರಣ ದಾಖಲು

Ad Widget

Ad Widget

Ad Widget

Ad Widget

ಸುಳ್ಯ : ನ 7 :  ಸುಳ್ಯ ತಾಲೂಕಿನ  ಅಮರ ಪಡ್ನೂರು ಗ್ರಾಮದಲ್ಲಿ  ಇತ್ತೀಚೆಗೆ ಆಯೋಜಿಸಿಲಾಗಿದ್ದ ಸಾಮೂಹಿಕ ಗೋಪೂಜೆ ಕಾರ್ಯಕ್ರಮದ ಸಂದರ್ಭ ಯುವಕನೋರ್ವ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯತಿ ಗೌಡ ಪ್ರಕರಣದ ಆರೋಪಿ

Ad Widget

Ad Widget

Ad Widget

  ಸಂತ್ರಸ್ತ ಬಾಲಕಿಯು ತಂಗಿ , ಮಾವ ಹಾಗೂ  ಅಜ್ಜಿಯ ಜೊತೆಗೆ ಅಮರ ಪಡ್ನೂರು ಗ್ರಾಮದ ಚೊಕ್ಕಾಡಿಯಲ್ಲಿ  ಗೋಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ಬಾಲಕಿಯ ಮಾವ ಮತ್ತು ಅಜ್ಜಿ ಊಟಕ್ಕೆ ತೆರಳಿದ ಸಂದರ್ಭ ಅಲ್ಲೇ ಹಿಂಬದಿಯಲ್ಲಿ ಕುಳಿತಿದ್ದ ಸ್ಥಳೀಯ ಯುವಕ ಯತಿ ಎಂಬಾತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ” ಎಂದು ಬಾಲಕಿ ಆರೋಪಿಸಿದ್ದಾಳೆ.

Ad Widget

ನಂತರ ತನಗೆ ನ್ಯಾಯ ಕೊಡಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ದೂರು ನೀಡಿದ್ದು,ಅಂಬೇಡ್ಕರ್ ರಕ್ಷಣಾ ವೇದಿಕೆ ರಾಜ್ಯ ಅಧ್ಯಕ್ಷ ಪಿ.ಸುಂದರ ಪಾಟಾಜೆ ನೊಂದ ಬಾಲಕಿಯ ಮತ್ತು ತಂಗಿ,ಹಾಗೂ ಅಜ್ಜಿ,ಮಾವ ಇವರನ್ನೆಲ್ಲಾ ಜೊತೆಯಾಗಿ ಸೇರಿಸಿಕೊಂಡು ಬೆಳ್ಳಾರೆ ಪೊಲೀಸ್ ಠಾಣೆಗೆ ಕರೆತಂದು ಯುವಕನ ಮೇಲೆ ದೂರು ನೀಡಿರುವುದಾಗಿ ತಿಳಿದು ಬಂದಿದೆ .

Ad Widget

Ad Widget

ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

ಘಟನೆಯ ನಂತರ ಬಾಲಕಿಯು ಮಕ್ಕಳ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಿ ಅಲ್ಲಿಂದಲೇ ಬೆಳ್ಳಾರೆ ಠಾಣೆಗೆ ದೂರು ಬಂದಿದ್ದು ಈ ಮೇರೆಗೆ ಬೆಳ್ಳಾರೆ ಠಾಣಾಧಿಕಾರಿಯವರು ಯತಿ ಗೌಡ ಎಂಬವರ ಮೇಲೆ ಎಫ್ಐಆರ್ ದಾಖಲಿಸಿ ತನಿಖೆ ಪ್ರಾಂರಂಭಿಸಿರುವುದಾಗಿ ತಿಳಿದುಬಂದಿದೆ.

Ad Widget

Ad Widget

Ad Widget
Click to comment

Leave a Reply

ಉಡುಪಿ

Kapu: Pili Kola-ಕಾಪು : ಪಿಲಿ ಕೋಲ – ನಗರ ಪ್ರದಕ್ಷಿಣೆ ವೇಳೆ ಓರ್ವನ ಸ್ಪರ್ಶಿಸಿ ದೈವಸ್ಥಾನಕ್ಕೆ ಓಡಿ ಬಂದ ದೈವ..!

Ad Widget

Ad Widget

Ad Widget

Ad Widget

ಕಾಪು, ಮೇ 14: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾಗಿರುವ ಕಾಪು ಶ್ರೀ ಬ್ರಹ್ಮಮುಗ್ಗೆರ್ಕಳ-ಪಿಲಿಚಂಡಿ ದೈವಸ್ಥಾನದಲ್ಲಿ ದೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ ಮೇ 4ರಂದು ಸಂಪನ್ನಗೊಂಡಿತು.

Ad Widget

Ad Widget

Ad Widget

2 ಗಂಟೆಯ ಬಣ್ಣಗಾರಿಕೆಯ ಬಳಿಕ ಅಬ್ಬರದೊಂದಿಗೆ ಪಂಜರದೊಳಗಿಂದ ಹೊರಗೆ ಬಂದ ಹುಲಿಚಂಡಿ ದೈವವು ಬ್ರಹ್ಮರ ಗುಂಡಕ್ಕೆ ಮೂರು ಸುತ್ತು ಬಂದು, ಮಾರಿಯಮ್ಮ ಗುಡಿಯ ಮುಂಭಾಗದಲ್ಲಿನೆಡಲಾಗಿದ್ದ ಬಂಟ ಕಂಬವನ್ನೇರಿ ಜೀವಂತ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಮುಂದೆ ಗ್ರಾಮ ಭೇಟಿಗೆ ತೆರಳುವುದು ಸಂಪ್ರದಾಯವಾಗಿದೆ.

Ad Widget

ಈ ಬಾರಿಯ ನಗರ ಪ್ರದಕ್ಷಿಣೆ ಮತ್ತು ಗ್ರಾಮ ಸಂಚಾರದ ವೇಳೆ ಪಿಲಿ ಭೂತವು ಓರ್ವನನ್ನು ಸ್ಪರ್ಶಿಸಿದ್ದು ಸ್ಪರ್ಶದ ಬಳಿಕ ದೈವಸ್ಥಾನಕ್ಕೆ ಓಡಿ ಬಂದು ಪೂರ್ವ ಸಂಪ್ರದಾಯದ ಪದ್ಧತಿಗಳನ್ನು ನೆರವೇರಿಸಲಾಯಿತು. ”

Ad Widget

Ad Widget

ಸಹಸ್ರಾರು ಮಂದಿ ಭಾಗಿ
ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಮತ್ತು ಮುಂಬಯಿ ಸೇರಿದಂತೆ ದೇಶ-ವಿದೇಶಗಳಿಂದ ಬಂದಿರುವ ಸಹಸ್ರಾರು ಸಂಖ್ಯೆಯ ಭಕ್ತರು ಮತ್ತು ಜಾನಪದಾಸಕ್ತರು ಪಿಲಿ ಕೋಲಕ್ಕೆ ಸಾಕ್ಷಿಯಾದರು.

Ad Widget

Ad Widget

Ad Widget
Continue Reading

ರಾಜಕೀಯ

Fake posts-ಸಿಎಂ ವಿರುದ್ದ ನಕಲಿ ಪೋಸ್ಟ್ ಹಾಕಿದ ವಿಕ್ರಮ್ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆಯೊಡ್ಡಿದ ಹೈಕೋರ್ಟ್‌

Ad Widget

Ad Widget

Ad Widget

Ad Widget

ಬೆಂಗಳೂರು, ಮೇ 4: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡುವಂತಹ ನಕಲಿ ಪೋಸ್ಟ್ ಹಾಕಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಪೋಸ್ಟ್‌ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಮ್ ಹೆಗ್ಡೆ ಮತ್ತು ವಸಂತ್ ಗಿಳಿಯಾರ್ ಅವರನ್ನು ಸದ್ಯ ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದೆ.

Ad Widget

Ad Widget

Ad Widget

ಪ್ರಕರಣ ಸಂಬಂಧ ನಿರೀಕ್ಷಣ ಜಾಮೀನು ಕೋರಿ ಮಹೇಶ್ ವಿಕ್ರಮ್ ಹೆಗ್ಡೆ ಮತ್ತು ವಸಂತ್ ಗಿಳಿಯಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.

Ad Widget

ಅರ್ಜಿಯ ವಿಚಾರಣೆ ವೇಳೆ ಪೊಲೀಸರ ಪರ ಹೆಚ್ಚುವರಿ ಸರಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮೇ 2ಕ್ಕೆ ವಿಚಾರಣೆ ಮುಂದೂಡಿತು.

Ad Widget

Ad Widget
Continue Reading

ಬಿಗ್ ನ್ಯೂಸ್

Birth and death certificates-ಇನ್ನು ಮುಂದೆ ಗ್ರಾಮ ಪಂಚಾಯತ್ ನಲ್ಲೇ ಸಿಗಲಿದೆ ಜನನ -ಮರಣ ಪ್ರಮಾಣ ಪತ್ರ

Ad Widget

Ad Widget

Ad Widget

Ad Widget

ಬೆಂಗಳೂರು: ಇನ್ಮುಂದೆ ಡಿಜಿಟಲ್ ಸಹಿ ಆಧಾರಿತ ಜನನ, ಮರಣ ನೋಂದಣಿ ಪ್ರಮಾಣ ಪತ್ರವನ್ನು ಗ್ರಾಮ ಪಂಚಾಯಿತಿಯಲ್ಲೇ ನೀಡಲಾಗುತ್ತದೆ. ಜನನ, ಮರಣ ಸಂಭವಿಸಿದ 30 ದಿನದ ಒಳಗೆ ನೋಂದಾಯಿಸಿ ಇ-ಜನ್ಮ ತಂತ್ರಾಂಶದ ಮೂಲಕ ಪ್ರಮಾಣಪತ್ರ ವಿತರಿಸಲು ಡಿಜಿಟಲ್ ಸಹಿ ಬಳಸಲಾಗುವುದು. ಇದರಿಂದ ಅಧಿಕಾರಿಗಳು ಕಾರ್ಯದ ಒತ್ತಡದಲ್ಲಿದ್ದಾರೆ, ಇನ್ನೂ ಸಹಿ ಹಾಕಿಲ್ಲ ಎಂದು ಸಬೂಬು ಹೇಳುವಂತಿಲ್ಲ. ಜನರು ಪದೇಪದೆ ಕಚೇರಿಗಳಿಗೂ ಅಲೆಯಬೇಕಾಗಿಲ್ಲ. ನೋಂದಣಿಯೂ ಬೇಗ ನಡೆಯಲಿದೆ. ನಂತರ ಪ್ರಮಾಣ ಪತ್ರವೂ ಸಿಗಲಿದೆ.

Ad Widget

Ad Widget

Ad Widget

ಗ್ರಾಮ ಪಂಚಾಯಿತಿ ಕಾರ್ಯದರ್ಶಿಯವರೇ ಉಪನೋಂದಣಾಧಿಕಾರಿ ಆಗಿರುತ್ತಾರೆ. ಜನನ, ಮರಣ ಸಂಭವಿಸಿದ 30 ದಿನದ ಒಳಗೆ ಪ್ರಮಾಣಪತ್ರ ಬೇಕಾದಲ್ಲಿ ಇವರೇ ವಿತರಿಸುವರು. 30 ದಿನಗಳ ನಂತರವಾದರೆ ಗ್ರಾಮ ಲೆಕ್ಕಾಧಿಕಾರಿಗಳು ನೋಂದಣಾಧಿಕಾರಿ ಆಗಿರುತ್ತಾರೆ. ಇವರ ಬಳಿ ನೋಂದಣಿ ಮಾಡಿಸಿ, ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ. ಈ ಸಂಬಂಧ ಚುನಾವಣೆ ಬಳಿಕ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Ad Widget

ರಾಜ್ಯಾದ್ಯಂತ 5,950 ಗ್ರಾಮ ಪಂಚಾಯಿತಿಗಳಿವೆ. ಎಲ್ಲಾಪಂಚಾಯಿತಿಗಳಲ್ಲೂ ಈ ಸೇವೆ ಕಲ್ಪಿಸಲಾಗುವುದು. ಜತೆಗೆ, ವಿವಾಹ ನೋಂದಣಿಯೂ ಗ್ರಾಪಂಗಳಲ್ಲೇ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಪಿಡಿಒಗಳನ್ನು ಜನನ ಮರಣ ಪ್ರಮಾಣ ಪತ್ರ ವಿತರಣಾಧಿಕಾರಿಗಳನ್ನಾಗಿ ನೇಮಿಸುವ ಬದಲು ಕಾರ್ಯದರ್ಶಿಯವರನ್ನು ಗ್ರಾಪಂ ಉಪನೋಂದಣಾಧಿಕಾರಿಯನ್ನಾಗಿ ನೇಮಿಸಲಾಗಿದೆ.

Ad Widget

Ad Widget

ಈ ಸಂಬಂಧ ಇ-ಜನ್ಮ ತಂತ್ರಾಂಶದಲ್ಲಿ ಜನನ, ಮರಣ ನೋಂದಾಯಿಸಿ, ಪ್ರಮಾಣ ಪತ್ರಗಳನ್ನು ಡಿಜಿಟಲ್ ಸಹಿ ಮೂಲಕ ವಿತರಿಸಲು ಗ್ರಾಪಂ ಕಾರ್ಯದರ್ಶಿಗಳು ಡಿಜಿಟಲ್ ಕೀಗಳನ್ನು ಹೊಂದಿರಬೇಕು. ಈ ಬಗ್ಗೆ ಹಂತಹಂತವಾಗಿ ಮಾಹಿತಿ ನೀಡುವುದರ ಜತೆಗೆ, ಸಿಬ್ಬಂದಿಗೆ ತರಬೇತಿಯನ್ನೂ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ಧರಿಸಿದೆ.

Ad Widget

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading