ಮಂಗಳೂರು: ಚಲಿಸುತ್ತಿದ್ದ ಅಟೋದಲ್ಲಿ ನಿಗೂಢ ರೀತಿಯಲ್ಲಿ ಬ್ಲಾಸ್ಟ್ ಸಂಭವಿಸಿದ ಘಟನೆ ಮಂಗಳೂರಿನಲ್ಲಿ (Mangalore Blast) ನ.19 ರ ಸಂಜೆ ನಡೆದಿದೆ.
ಕಂಕನಾಡಿ ಪೊಲೀಸ್ ಠಾಣೆಯ ಬಳಿ ಘಟನೆ ನಡೆದಿದ್ದು, ಆಟೋದಲ್ಲಿದ್ದ ಪ್ರಯಾಣಿಕನ ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಮೊದಲು ಬೆಂಕಿ ಕಾಣಸಿದೆ. ಪ್ರಾರಂಭದಲ್ಲಿ ಅಟೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ನಾಗುರಿ ಎಂಬಲ್ಲಿಂದ ಪಂಪ್ ವೆಲ್ ಕಡೆ ಸಾಗುತಿದ್ದ ಶ್ರೀ ದುರ್ಗಾಪರಮೇಶ್ವರಿ ಎಂಬ ಹೆಸರಿನ ಅಟೋ ಸಂಜೆ 4.30ರ ಸಮಯಕ್ಕೆ ಒಮ್ಮೆಲೆ ಬ್ಲಾಸ್ಟ್ ಆಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಾಗುರಿಯಿಂದ ಹತ್ತಿದ ಪ್ರಯಾಣಿಕನ ಕೈಯಲ್ಲಿದ್ದ ಪ್ಲ್ಯಾಸ್ಟಿಕ್ ಬ್ಯಾಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಬ್ಯಾಗ್ ಹಿಡಿದುಕೊಂಡ ವ್ಯಕ್ತಿಗೆ ಬೆಂಕಿ ತಗುಲಿದೆ , ಬೆಂಕಿ ತಗುಲಿದ ಸಂದರ್ಭ ಅಟೋ ಒಳಭಾಗ ಒಮ್ಮೆಲೆ ಸುಟ್ಟು ಹೋಗಿದೆ.
ಪ್ರಯಾಣಿಕ ಹಾಗೂ ಅಟೋ ಚಾಲಕನಿಗೆ ಫಾದರ್ ಮುಲ್ಲಾರ್ಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ, ಬೆಂಕಿಕಾಣಿಸಿಕೊಂಡಿದೆ ಎಂದು ಅಟೋ ಚಾಲಕ ಹೇಳುತ್ತಿದ್ದಾನೆ, ಸಮಗ್ರವಾದ ವಿಚಾರಣೆ ನಡೆಸಲಾಗುತ್ತದೆ. ಬ್ಲಾಸ್ಟ್ ಆದ ಬಗ್ಗೆ ಪ್ರತ್ಯಕ್ಷ ಸಾಕ್ಷಿಗಳು ಏನು ಹೇಳಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.