ರಾಜಕೀಯ
BJP MLA Kumaraswamy | ಮೃತಪಟ್ಟ ಮನೆಯವರಿಗೆ ಸಾಂತ್ವನ ಹೇಳಲು ಹೋದಾಗ ನನಗೆ ಹಲ್ಲೆ ನಡೆದಿದೆ – ಪೊಲೀಸರ ವೈಫಲ್ಯವೇ ಕಾರಣ – ಅಂಗಿ ಹರಿದ ಸ್ಥಿತಿಯಲ್ಲಿ ಮೂಡಿಗೆರೆ ಶಾಸಕ ಗಂಭೀರ ಆರೋಪ : ಗಲಾಟೆ ಸ್ಥಳದಿಂದ ಸುರಕ್ಷಿತವಾಗಿ ಹೋದ ಶಾಸಕರು 45 ನಿಮಿಷ ಬಳಿಕ ಅಂಗಿ ಹರಿದುಕೊಂಡು ಪ್ರತ್ಯಕ್ಷ..? ರಕ್ಷಿಸಿದ ಪೊಲೀಸರ ಮೇಲೆಯೇ ಆರೋಪ ..!

ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ (BJP MLA Kumaraswamy) ಜನರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ಭಾನುವಾರ ಬೆಳಗ್ಗೆ ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ ವೇಳೆ ಈ ಘಟನೆ ನಡೆದಿದೆ. ಪೊಲೀಸರು ಅವರನ್ನು ಸುರಕ್ಷಿತವಾಗಿ ಕಳುಹಿಸಿದಾಗ ಅವರ ಅಂಗಿ ಹರಿದಿರುವುದು ಕಂಡುಬಂದಿಲ್ಲ. ಆದರೆ, ಘಟನೆ ನಡೆದು ಮೂಕ್ಕಾಲು ಗಂಟೆ ಬಳಿಕ ವಿಡಿಯೋ ಒಂದು ವೈರಲ್ ಆಗಿದ್ದು, ಶಾಸಕರು ಹರಿದ ಅಂಗಿಯಲ್ಲಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರ ಮೇಲೆ ಜನರು ಹಲ್ಲೆ ನಡೆಸಿದ್ರಾ? ಶರ್ಟ್ ಹರಿದು ಹಾಕಿ ನಡು ರೋಡಲ್ಲಿ ನಿಲ್ಲಿಸಿದ್ರಾ? ಹೀಗೊಂದು ಪ್ರಶ್ನೆ ಈಗ ಎಲ್ಲರಲ್ಲೂ ಮೂಡಿದೆ. ಯಾಕಂದ್ರೆ ಶಾಸಕ ಎಂಪಿ ಕುಮಾರಸ್ವಾಮಿ ಹರಿದ ಅಂಗಿಯಲ್ಲಿ ಇರುವ ವಿಡಿಯೋ ಒಂದು ವೈರಲ್ ಆಗಿದ್ದು, ಆ ವಿಡಿಯೋದಲ್ಲಿ ಸಂಚು ಮಾಡಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಾಸಕರು ಗಂಭೀರ ಆರೋಪ ಮಾಡಿದ್ದಾರೆ.
ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ಭಾನುವಾರ ಬೆಳಗ್ಗೆ ಕಾಡಾನೆ ದಾಳಿ ನಡೆಸಿ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಈ ಹಿನ್ನೆಲೆ ಮೃತದೇಹ ನೋಡಲು ಶಾಸಕ ಎಂಪಿ ಕುಮಾರಸ್ವಾಮಿ ಭಾನುವಾರ ಸಂಜೆ 4.30ರ ಸುಮಾರಿಗೆ ಗ್ರಾಮಕ್ಕೆ ಭೇಟಿ ನೀಡಲು ತೆರಳಿದ್ದರು. ಶಾಸಕರು ಗ್ರಾಮಕ್ಕೆ ತಡವಾಗಿ ಹೋಗಿದ್ದನ್ನು ಗ್ರಾಮದ ಜನ ಪ್ರಶ್ನೆ ಮಾಡಿದ್ದಾರೆ. ಆನೆ ದಾಳಿಗೆ ಶಾಶ್ವತ ಪರಿಹಾರ ಕಲ್ಪಿಸುತ್ತಿಲ್ಲ ಎಂದು ಶಾಸಕರ ವಿರುದ್ಧ ಈ ವೇಳೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಶಾಸಕರು ಮತ್ತು ಜನರ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು ಲಘು ಲಾಠಿಪ್ರಹಾರ ನಡೆಸಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದೆ ಎಂದು ಅರಿತ ಪೊಲೀಸರು ಅರಣ್ಯ ಇಲಾಖೆಯ ವಾಹನದಲ್ಲಿ ಶಾಸಕ ಎಂಪಿ ಕುಮಾರಸ್ವಾಮಿ ಅವರನ್ನು ಸುರಕ್ಷಿತವಾಗಿ ಮೂಡಿಗೆರೆಗೆ ಕಳುಹಿಸಿದ್ದಾರೆ.
ಹುಲ್ಲೆಮನೆ ಕುಂದೂರು ಗ್ರಾಮದಿಂದ ಶಾಸಕರನ್ನು ಪೊಲೀಸರು ವಾಹನದಲ್ಲಿ ಕಳುಹಿಸುವಾಗ ಯಾವುದೇ ರೀತಿಯ ಬಟ್ಟೆ ಹರಿದ ಬಗ್ಗೆ ಕುರುಹು ಕಂಡಿದ್ದಿಲ್ಲ. ಆದರೆ, ಘಟನೆ ನಡೆದು ಮುಕ್ಕಾಲು ಗಂಟೆಯ ಬಳಿಕ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಹರಿದ ಅಂಗಿಯನ್ನು ತೋರಿಸುತ್ತಾ ಶಾಸಕ ಎಂಪಿ ಕುಮಾರಸ್ವಾಮಿ ಪ್ರತಿಭಟನಾ ನಿರತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಶಾಸಕರು ಹೇಳಿದ್ದೇನು?
ಬೇಕು ಅಂತಲೇ ಕೆಲ ಗುಂಪು ರೆಡಿ ಮಾಡಿ ಸಂಚು ಮಾಡಿದ್ದರು. ಶಾಸಕರೇ ಆನೆ ಸಾಕಿದ್ದಾರೆ ಎಂಬ ಅಭಿಪ್ರಾಯವನ್ನು ಜನ ವ್ಯಕ್ತಪಡಿಸಿದರು. ಕೋರ್ಟ್, ಸರ್ಕಾರ ಆನೆ ಬಗ್ಗೆ ಏನು ಹೇಳುತ್ತದೆ ಎಂದು ಇಡೀ ರಾಜ್ಯಕ್ಕೆ, ದೇಶಕ್ಕೆ ಗೊತ್ತು. ಈ ರೀತಿ ಸಂಚು ಮಾಡಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಪೊಲೀಸರ ವೈಫಲ್ಯ ಇದೆ. ಸ್ಥಳದಲ್ಲಿ 10 ಜನ ಪೊಲೀಸರು ಮಾತ್ರ ಇದ್ದರು. ನಾನು ಅಲ್ಲಿಯೇ ಇರ್ತಿದ್ದೆ. ಆದರೆ, ಪೊಲೀಸರು ನನ್ನ ಮಿಸ್‌ಗೈಡ್ ಮಾಡಿ ಕಳುಹಿಸಿದ್ರು. ಇಲ್ಲ ಅಂದ್ರೇ ನಾನು ಆ ಜಾಗ ಬಿಟ್ಟು ಕದಲುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಆನೆ ದಾಳಿಗೆ ಮಹಿಳೆ ಬಲಿ:
ಭಾನುವಾರ ಬೆಳಗ್ಗೆ ಅಡಕೆ ತೋಟದಲ್ಲಿ ಹುಲ್ಲುಕೊಯ್ಯುತ್ತಿದ್ದ ವೇಳೆ ಹುಲ್ಲೆಮನೆ ಕುಂದೂರಿನಲ್ಲಿ ಶೋಭಾ ಎಂಬುವವರ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಶೋಭಾ ಅವರು ತೋಟದಿಂದ ರಸ್ತೆಗೆ ದಾಟುವ ಸಂದರ್ಭ ಆನೆ ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ಸಾಯಿಸಿತ್ತು. ಕಾಡಾನೆ ದಾಳಿಯಿಂದ ಈ ವರ್ಷ ಮೂಡಿಗೆರೆ ತಾಲೂಕಲ್ಲಿ ಸಂಭವಿಸಿದ ಮೂರನೇ ಸಾವು ಇದಾಗಿದೆ.
ರಾಜಕೀಯ
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?

ಬೆಳಗಾವಿ: ತನ್ನ ಮೇಲೆ ಎಫ್‌ಐಆರ್ ಹಾಕಿದ ಅರಣ್ಯಾಧಿಕಾರಿಗಳ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Belthangady MLA Harish Poonja) ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ಹಕ್ಕು ಚ್ಯುತಿ ಮಂಡಿಸಿದ್ದಾರೆ. ಇದನ್ನು ಸ್ಪೀಕರ್ ಯು.ಟಿ. ಖಾದರ್ ಅವರು ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ವರ್ಗಾಯಿಸಿದ್ದಾರೆ.
2 ತಿಂಗಳ ಹಿಂದೆ ಬೆಳ್ತಂಗಡಿಯ ಕಳೆಂಜ ಗ್ರಾಮದ ಅಮ್ಮಿನಡ್ಕದಲ್ಲಿ ರೈತರೊಬ್ಬರ ಮನೆಯನ್ನು ಕಿತ್ತು ಹಾಕಲು ಮುಂದಾದಾಗ ಅರಣ್ಯ ಅಧಿಕಾರಿಗಳ ಕ್ರಮವನ್ನು ಶಾಸಕ ಹರೀಶ್ ಪೂಂಜಾ ರೈತರ ಪರ ನಿಂತಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೂಂಜಾ ಮದ್ಯೆ ಮಾತಿನ ಚಕಮಕಿ ನಡೆದಿತ್ತು.ಇದನ್ನೆ ಮುಂದಿಟ್ಟು ಅರಣ್ಯ ಅಧಿಕಾರಿಗಳು ಪುಂಜಾ ವಿರುದ್ದ ಎಫ್‌ಐಆರ್ ದಾಖಲಿಸಿದ್ದರು.
ಈ ಎಫೈ ಆರ್ ವಿರುದ್ದ ಆಕ್ರೋಶ ಹೊರಹಾಕಿರುವ ಹರೀಶ್ ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ತಮ್ಮ ಹಕ್ಕಿಗೆ ಚ್ಯುತಿ ತರಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಎಫ್‌ಐಆರ್ ದಾಖಲು ಮಾಡಿದ ಅಧಿಕಾರಿಗಳ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ್ದಾರೆ.
ವಿಧಾನಸಭಾ ಕಲಾಪದಲ್ಲಿ ವಿರೋಧ ಪಕ್ಷದ ಸದಸ್ಯರು ಹಕ್ಕು ಚ್ಯುತಿ ಮಂಡಿಸಲು ಅವಕಾಶ ನೀಡುವಂತೆ ಕೋರಿದರು. ಇದಕ್ಕೆ ಜೆಡಿಎಸ್ ಸದಸ್ಯರು ಬೆಂಬಲ ನೀಡಿದ್ದಾರೆ . ಈ ಬಗ್ಗೆ ಸುನೀಲ್ ಕುಮಾರ್ ಮಾತನಾಡಿ ಬೆಳ್ತಂಗಡಿ ಶಾಸಕರ ಹಕ್ಕುಚ್ಯುತಿ ಮಂಡನೆ ಮಾಡಬೇಕಿದೆ. ಅರಣ್ಯ ಇಲಾಖೆಯವರು ಮನೆ ತೆರವು ಮಾಡಲು ಹೋಗಿದ್ದರು. ಈ ವೇಳೆ ಶಾಸಕರಿಗೆ ಹಕ್ಕುಚ್ಯುತಿ ಆಗಿದೆ. ಸದನದಲ್ಲಿ ಮಾತನಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಆದರೆ, ಅವಕಾಶ ಕೊಡದಿದ್ದಕ್ಕೆ ಸದನದಲ್ಲಿ ಗದ್ದಲ ಮುಂದುವರಿದಿತ್ತು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಮಧ್ಯ ಪ್ರವೇಶ ಮಾಡಿ, ನಾನು ಬರಗಾಲ ಬಗ್ಗೆ ತಡವಾಗಿ ಚರ್ಚೆ ಮಾಡುತ್ತೇನೆ. ಈಗ ಶಾಸಕರಿಗೆ ಹಕ್ಕುಚ್ಯುತಿ ಮಂಡನೆ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು
. ಆದರೆ ಈ ಮನವಿಯನ್ನು ನಿರಾಕರಿಸಿದ ಸ್ಪೀಕರ್ ಯು.ಟಿ. ಖಾದರ್, ನಾಳೆ ಬೆಳಗ್ಗೆ ಅವಕಾಶ ನೀಡುತ್ತೇನೆ. ಈಗ ಬರಗಾಲ ಬಗ್ಗೆ ಚರ್ಚೆ ನಡೆಯಲಿ ಎಂದು ಮನವಿ ಮಾಡಿದರು. ಆದರೂ ಬಿಜೆಪಿ ಸದಸ್ಯರು ಪಟ್ಟು ಬಿಡದೆ ಈಗಲೇ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಶಾಸಕನ ರಕ್ಷಣೆ ನಿಮ್ಮ ಜವಾಬ್ದಾರಿಯಾಗಿದೆ. ಹಕ್ಕು ಚ್ಯುತಿ ಪಡೆದುಕೊಂಡು ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಈಗಲೇ ಹಕ್ಕುಚ್ಯುತಿ ಸಮಿತಿಗೆ ರೆಫರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್ ರವರು ಕ್ಯಾಬಿನೆಟ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಕೇಸ್ ಅನ್ನು ವಾಪಸ್ ತೆಗೆದುಕೊಳ್ಳುತ್ತೀರಿ. ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲು ಮಾಡಿಕೊಳ್ಳುತ್ತೀರಿ. ಇದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರ ಒತ್ತಡಕ್ಕೆ ಮಣಿದ ಸ್ಪೀಕರ್ ಯು.ಟಿ. ಖಾದರ್, ಹಕ್ಕುಚ್ಯುತಿ ಮಂಡನೆ ಪ್ರಸ್ತಾಪಕ್ಕೆ ಅವಕಾಶ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಧರಣಿ ವಾಪಸ್ ಪಡೆದುಕೊಂಡರು.
ಆದರೆ ಹಕ್ಕುಚ್ಯುತಿಗೆ ಪ್ರಸ್ತಾಪಕ್ಕೆ ಅವಕಾಶ ಕೊಟ್ಟಿದ್ದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬರದ ಚರ್ಚೆ ನಡುವೆ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಅವಕಾಶ ಏಕೆ ಎಂದು ಪ್ರಶ್ನೆ ಮಾಡಿದರು. ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಲಿಂಗೇಗೌಡ ಆಕ್ಷೇಪ ವ್ಯಕ್ತಪಡಿಸಿದರು.
ಈ ವೇಳೆ ಶಾಸಕರ ಹಕ್ಕಿಗೆ ಚ್ಯುತಿ ಮಾಡಲು ಬಿಜೆಪಿ ಮುಂದಾದಾಗ ಅರಣ್ಯ ಅಧಿಕಾರಿಗಳ ಪರವಾಗಿ ಈಶ್ವರ್ ಖಂಡ್ರೆ ನಿಂತುಕೊಂಡರು. ಇದರಿಂದ ಬಿಜೆಪಿ ಶಾಸಕರು ಕೆರಳಿ ಕೆಂಡವಾದರು. “ಇದು ಅಧಿಕಾರಿಗಳ ರಾಜ್ಯವೇ? ಒಬ್ಬ ಶಾಸಕನ ಬಳಿ ಡಿಎಫ್‌ಒ ಮುಚ್ಚಳಿಕೆ ಬರಿಸಿಕೊಳ್ಳುತ್ತಾನೆ ಎಂದರೆ ಈ ವಿಧಾನಸಭೆ, ಶಾಸಕರು ಯಾಕೆ ಇರಬೇಕು? ಇದು ಅಧಿಕಾರಿಗಳ ರಾಜ್ಯವೇ?” ಎಂದು ಆರ್. ಅಶೋಕ್ ಆಕ್ರೋಶ ಹೊರಹಾಕಿದರು
ಈ ವಿಚಾರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ :ಮಾನವ – ಕಾಡು ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ. ನಗರಕ್ಕೆ ಕಾಡು ಪ್ರಾಣಿಗಳು ಬರುತ್ತಿವೆ. ಇದಕ್ಕೆ ಯಾರು ಹೊಣೆ? ಅರಣ್ಯ ಅತಿಕ್ರಮಣವಾದರೆ ಈ ಸಮಸ್ಯೆ ಸೃಷ್ಟಿಯಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅತಿಕ್ರಮಣ ಸಮರ್ಥನೆ ಮಾಡಿದರೆ ಅರಣ್ಯ ನಾಶವಾಗುತ್ತದೆ ಎಂದು ಹೇಳಿದರು.
ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್. ಅಶೋಕ್ ಅರಣ್ಯ ರಕ್ಷಣೆ ಮಾಡುವುದರ ಪರವಾಗಿ ನಾವೂ ಇದ್ದೇವೆ. ಮಾನವ ಕಾಡು ಪ್ರಾಣಿ ಸಂಘರ್ಷ ಸಾಮಾನ್ಯವಾಗಿದೆ. ಅರಣ್ಯ ಒತ್ತುವರಿ ಜಮೀನು ರೈತರಿಗೆ ಕೊಡಬೇಕು ಎಂದು ಸಾಕಷ್ಟು ಹೋರಾಟ ನಡೆದಿದೆ. ಸಂಗಮೇಶ್ ವಿರುದ್ಧ ಹಕ್ಕುಚ್ಯುತಿ ಆಗಿದೆ ಎಂದು ಆರೋಪ ಬಂದಿತ್ತು. ನಾವು ಕೂಡಲೇ ಹಕ್ಕು ಬಾಧ್ಯತಾ ಸಮಿತಿಗೆ ನೀಡಿದ್ದೇವೆ. ಅಧಿಕಾರಿಗಳನ್ನು ಕೇಳುವವರು ಹೇಳುವವರು ಯಾರೂ ಇಲ್ಲದಂತಾಗಿದೆ. ಶಾಸಕರ ಮೇಲೆ ಎಫ್ಐಆರ್ ಹಾಕುತ್ತಾರೆ ಎಂದರೆ ಏನು ಅರ್ಥ ಬರುತ್ತದೆ? ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಹಾಗೂ ಕೇಸ್ ವಾಪಸ್ ಪಡೆಯಿರಿ ಎಂದು ಆಗ್ರಹಿಸಿದರು.
ಬಳಿಕ ಸ್ಪೀಕರ್ ಯು.ಟಿ. ಖಾದರ್, ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ನಿರ್ಣಯವನ್ನು ರವಾನಿಸಿದ್ದಾರೆ.
ಉದ್ಯೋಗ
Colse Road Side Nonveg Hotel: ರಸ್ತೆ ಬದಿಯಿರುವ ನಾನ್ ವೆಜ್ ಹೋಟೆಲ್ಗಳನ್ನು ಮುಚ್ಚಿ : ಚುನಾವಣೆಯಲ್ಲಿ ಗೆಲ್ಲುತ್ತಲೇ ನೂತನ ಬಿಜೆಪಿ ಶಾಸಕನ ಆದೇಶ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿದಿದೆ. ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸೋಲನ್ನು ಕಂಡಿದೆ.
ತಾನು ಚುನಾವಣೆಯಲ್ಲಿ ಗೆದ್ದ ಬೆನ್ನಲೆ , ಜೈಪುರದ ಹವಾ ಮಹಾಲ್ ಕ್ಷೇತ್ರದ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ತಮ್ಮ ಕ್ಷೇತ್ರದ ರಸ್ತೆಯ ಬದಿಗಳಲ್ಲಿರುವ ನಾನ್ ವೆಜ್ ಹೋಟೆಲ್ಗಳನ್ನು ಮುಚ್ಚುವಂತೆ ಆದೇಶ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ವೈರಲ್ ಆಗಿರುವ ಈ ವಿಡಿಯೋದಲ್ಲಿ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ಅಧಿಕಾರಿಯೊಬ್ಬರಿಗೆ ಕರೆ ಮಾಡಿ, ರಸ್ತೆ ಬದಿಯಲ್ಲಿರುವ ನಾನ್ ವೆಜ್ ಹೋಟೆಲ್ಗಳನ್ನು ಸಂಜೆ ಒಳಗೆ ಮುಚ್ಚಿಸುವಂತೆ ಸೂಚನೆ ನೀಡಿದ್ದಾರೆ.
ನಾನ್ ವೆಜ್ ಅನ್ನು ರಸ್ತೆಯಲ್ಲಿ ಬಹಿರಂಗವಾಗಿ ಮಾರಾಟ ಮಾಡಬಹುದೇ? ಹೌದೋ ಅಥವಾ ಇಲ್ಲವೋ ಉತ್ತರಿಸಿ. ಹಾಗಾದ್ರೆ ನೀವು ಇದನ್ನು ಬೆಂಬಲಿಸುತ್ತೀರಿ. ಕೂಡಲೇ ರಸ್ತೆ ಬದಿಯ ಎಲ್ಲ ಮಾಂಸಾಹಾರಿ ಅಂಗಡಿಗಳನ್ನು ಮುಚ್ಚಬೇಕು. ಸಂಜೆ ನಿಮ್ಮಿಂದ ವರದಿ ತರಿಸಿಕೊಳ್ಳುತ್ತೇನೆ. ಅಧಿಕಾರಿ ಯಾರೆಂಬುದನ್ನು ಸಹ ನಾನು ನೋಡುವುದಿಲ್ಲ ಎಂದು ಬಾಲಮುಕುಂದ್ ಆಚಾರ್ಯ ಎಚ್ಚರಿಕೆ ನೀಡಿದ್ದಾರೆ.
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯೆ:
ಈ ಬಗ್ಗೆ ಪ್ರತಿಕ್ರಿಯಿಸಿದ ಅಸಾದುದ್ದೀನ್ ಓವೈಸಿ ಈ ಆದೇಶ ಸರಿಯಲ್ಲ ,ನಾನ್ವೆಜ್ ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಯಾರಾದರೂ ಮಾಂಸಾಹಾರಿ ಆಹಾರದ ಮಳಿಗೆ ಸ್ಥಾಪಿಸಲು ಬಯಸಿದರೆ ಅದನ್ನು ತಡೆಯುವುದು ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ರವರು ರಾಜಸ್ಥಾನದ ಹವಾ ಮಹಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಆರ್ಆರ್ ತಿವಾರಿ ಅವರನ್ನು 600 ಮತಗಳಿಂದ ಸೋಲಿಸುವ ಮೂಲಕ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದರೆ, ಕಾಂಗ್ರೆಸ್ 69 ಸ್ಥಾನಗಳನ್ನು ಗಳಿಸುವ ಮೂಲಕ ಎರಡನೇ ಸ್ಥಾನಕ್ಕೆ ಕುಸಿಯಿತು
ರಾಜಕೀಯ
captain Pranjal: ಟ್ರೋಲ್ ಬಳಿಕ ಎಚ್ಚೆತ್ತ ಸಿಎಂ -ಪ್ರಾಂಜಲ್ ಕುಟುಂಬಕ್ಕೆ 50 ಲ. ರೂ ಪರಿಹಾರದ ಚೆಕ್ ಇಂದು ವಿತರಣೆ – ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನ ಮಂಜೂರು ಮಾಡಿ ಸಿಎಂ ಸಿದ್ದರಾಮಯ್ಯ ಆದೆಶ ಹೊರಡಿಸಿದ್ದಾರೆ. ಈ ವಿಷಯವನ್ನು ಅವರು ತನ್ ಎಕ್ಸ ಖಾತೆಯಲ್ಲಿ ಘೊಷಿಸಿಕೊಂಡಿದ್ದಾರೆ. ನವೆಂಬರ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಇತರ ಮೂರು ಭಾರತೀಯ ಸೈನಿಕರೊಂದಿಗೆ ಪ್ರಾಂಜಲ್ ಹತರಾಗಿದ್ದರು.
ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ.50,00,000 ( ಐವತ್ತು ಲಕ್ಷ ) ಪರಿಹಾರ ಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ
ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ( ನ 5ರಂದು) ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದು ನಿನ್ನೆ ಅವರು ಎಕ್ಸ್ ನಲ್ಲಿ ಹಾಕಿದ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಟ್ರೋಲ್
ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಹೆಸರನ್ನು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸಂದರ್ಶನವೊಂದರಲ್ಲಿ ಮರೆತ ಹಾಗೆ ಮಾತನಾಡಿದ್ದರು. ಅಲ್ಲದೇ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಕುಟುಂಬಕ್ಕೆ ಪರಿಹಾರದ ಕಾಲಮಿತಿ ಕುರಿತು ಪತ್ರಕರ್ತರು ಕೇಳಿದಾಗ, ಪರಿಹಾರವನ್ನು ಯಾರು, ಯಾವಾಗ ಘೋಷಿಸಿದರು ಎಂದು ಸಿದ್ದರಾಮಯ್ಯ ಉಡಾಫೆಯಾಗಿ ಪ್ರಶ್ನಿಸಿದರು. ಇದಕ್ಕೆ ಬಿಜೆಪಿ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಇದೀಗ ಎಲ್ಲಾ ಗೊಂದಲಗಳಿಗೆ ತೆರೆಬಿದ್ದಿದೆ
-
ಅಪರಾಧ8 hours ago
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ
-
ಬಿಗ್ ನ್ಯೂಸ್13 hours ago
ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ಚೆಕ್ ವಿತರಣೆ : ಮೊತ್ತ ತಾಯಿ-ಪತ್ನಿಗೆ ಸಮಪಾಲು ಮಾಡಿದ ಸರ್ಕಾರ
-
ಕ್ರೀಡೆ12 hours ago
Bomb Threat ಪ್ರಿಯಕರ ಕೊಟ್ಟ ಐಡಿಯಾ ನಂಬಿ ಗಂಡನ ಜೈಲಿಗೆ ಕಳುಹಿಸಲು ಆತನ ಮೊಬೈಲ್ʼನಿಂದ ಹೆಂಡತಿ ಕಳುಹಿಸಿದಳು ಬೆದರಿಕೆ ಮೆಸೇಜ್ – ಆದರೇ ಮುಂದೇನಾಯಿತು ?
-
ಕ್ರೀಡೆ9 hours ago
Jay shah: ಜಯ್ ಶಾಗೆ ಸ್ಪೋರ್ಟ್ಸ್ ಬ್ಯುಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಯ ಗರಿ – ಬಿಸಿಸಿಐ ಕಾರ್ಯದರ್ಶಿಗೆ ಈ ಗೌರವ ಸಿಕ್ಕಿದ್ದು ಯಾಕೆ ಗೊತ್ತೆ ?
-
ರಾಜಕೀಯ10 hours ago
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?
-
ಸಾಮಾಜಿಕ ಮಾಧ್ಯಮ17 hours ago
Dasara Elephant Arjun Dies ಅರ್ಜುನ ಸಾವಿನ ಸುತ್ತ ಹಲವು ಅನುಮಾನ – ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ – ಅದರಲ್ಲಿದೆ ಗುಂಡೇಟಿನ ವಿಚಾರ
-
ಸಿನೆಮಾ1 day ago
Animal Box Office collection ರಣ್ ಬೀರ್ – ರಶ್ಮಿಕಾ ಜೋಡಿ ಕಮಾಲ್ : ಅನಿಮಲ್ ಬಾಕ್ಸ್ ಆಫೀಸ್ನಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?
-
ಚಿನ್ನ-ಬೆಳ್ಳಿ ದರ18 hours ago
Gold Rate Hike:ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ : ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ದರ ಸಾರ್ವಕಾಲಿಕ ಜಿಗಿತ – ಮುಂದಿನ ದಿನಗಳಲ್ಲಿ ರೇಟ್ ಹೇಗಿರಲಿದೆ?