ದಕ್ಷಿಣ ಕನ್ನಡ
Smruti Irani | ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನ ಉದ್ಘಾಟಿಸಿದ ಕೇಂದ್ರ ಸರ್ಕಾರದ ಸಚಿವೆ ಸ್ಮೃತಿ ಇರಾನಿ

ಉಜಿರೆ: ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧದಾನ ಮತ್ತು ಅಭಯದಾನ ಎಂಬ ಚತುರ್ವಿಧ ದಾನಗಳು ನಿತ್ಯೋತ್ಸವವಾಗಿದ್ದು ಇಲ್ಲಿ. ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ನೆಲೆ ನಿಂತಿದೆ. ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮದ ಸಾಕಾರ ಮೂರ್ತಿಯಾಗಿದ್ದು ಅವರ ಶಿಸ್ತು, ಸಮಯಪ್ರಜ್ಞೆ, ವಿನಯ, ಸೌಜನ್ಯ ಸರಳ ಹಾಗೂ ಉದಾತ್ತ ಚಿಂತನೆಗಳು ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ (Smruti Irani) ಹೇಳಿದರು.
ಅವರು ಮಂಗಳವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂದರ್ಭದಲ್ಲಿ ಸರ್ವಧರ್ಮ ಸಮ್ಮೇಳನದ (Sarva Darma Sammelana) 90ನೇ ಅಧಿವೇಶವನ್ನು ಉದ್ಘಾಟಿಸಿ ಮಾತನಾಡಿದರು.
“ಎಲ್ಲರಿಗೂ ನಮಸ್ಕಾರ” ಎಂದು ಕನ್ನಡದಲ್ಲಿಯೇ ಭಾಷಣ ಪ್ರಾರಂಭಿಸಿದ ಸ್ಮೃತಿ ಇರಾನಿ ಸಭಾಸದರಲ್ಲಿ ಅಚ್ಚರಿ ಮೂಡಿಸಿದರು.

ಜನತಾ ಸೇವೆಯೇ ಜನಾರ್ದನ ಸೇವೆ ಎಂದು ನಿರಂತರ ಲೋಕಕಲ್ಯಾಣದ ಸೇವಾ ಕಾರ್ಯಗಳಲ್ಲಿ ನಿರತರಾದ ಹೆಗ್ಗಡೆಯವರ ಜೀವನವೇ ಧರ್ಮದ ಪ್ರತಿರೂಪವಾಗಿದೆ. ಜನಹಿತವೇ ರಾಷ್ಟ್ರದ ಹಿತ ಎಂಬ ನಿಸ್ವಾರ್ಥ ಭಾವನೆಯಿಂದ ಅವರು ಸೇವೆ ಮಾಡುತ್ತಿದ್ದಾರೆ. ದೇವರನ್ನು ನಾವು ಯಾರೂ ನೋಡದಿದ್ದರೂ ಸಹ ದೇವರ ಭಯ ಮತ್ತು ಭಕ್ತಿಯಿಂದ ನಾವು ಧರ್ಮದ ಮರ್ಮವನ್ನರಿತು ಸನ್ಮಾರ್ಗದಲ್ಲಿ ಸಾಗಲು ಪ್ರೇರಣೆ ಸಿಗುತ್ತದೆ. ಲಕ್ಷ್ಮೀ ಸದಾ ಚಂಚಲೆಯಾಗಿದ್ದು ನಾವು ಧನದಾಹ ಹಾಗೂ ಲೌಕಿಕ ಸುಖ-ಭೋಗಕ್ಕೆ ಬಲಿಯಾಗಬಾರದು. ಉತ್ತಮ ಸಂಸ್ಕಾರವೇ ನೈಜ ಧರ್ಮವಾಗಿದೆ. ಸರ್ವಧರ್ಮಗಳ ಸಾರವೂ ಒಂದೇ ಆಗಿದ್ದು ನಾವು ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸಬೇಕು, ಪ್ರೀತಿಸಬೇಕು ಎಂದು ಅವರು ಸಲಹೆ ನೀಡಿದರು.
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸ್ವ-ಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ನೀಡಿದ ಕೊಡುಗೆಯನ್ನು ಅವರು ಶ್ಲಾಘಿಸಿ ಅಭಿನಂದಿಸಿದರು.
ಧರ್ಮಸ್ಥಳದ ಸೇವಾಕಾಯಕ ವಿಶ್ವಕ್ಕೆ ಮಾದರಿ ಹಾಗೂ ಅನುಕರಣೀಯವಾಗಿದ್ದು ಇದರಿಂದ ಇಂದಿನ ಯುವಜನತೆ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸುವಂತಾಗಲಿ ಎಂದು ಸಚಿವರು ಹಾರೈಸಿದರು.

ರಾಷ್ಟ್ರ ನಿರ್ಮಾಣದಲ್ಲಿ ಮಾನವೀಯ ಮೌಲ್ಯಗಳ ಪಾತ್ರ ಮುಖ್ಯವಾಗಿದೆ: ಡಿ. ವೀರೇಂದ್ರ ಹೆಗ್ಗಡೆ
ಆರಂಭದಲ್ಲಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮವು ಶಾಶ್ವತವಾಗಿದ್ದು, ಸುಖ-ದುಖಃಗಳು ತಾತ್ಕಾಲಿಕವಾಗಿವೆ. ಮಾನವೀಯತೆ ಮತ್ತು ಸಮನ್ವಯತೆ ಧರ್ಮದ ಮೂಲ ಉದ್ದೇಶವಾಗಿದ್ದು ನಮ್ಮ ಸಾರ್ಥಕ ಬದುಕಿಗೆ ಪ್ರೇರಣೆ ನೀಡುವ ಸಾಧನವಾಗಿದೆ. ಜ್ಞಾನ ಸಂಗ್ರಹವೇ ನಮ್ಮ ಬದುಕಿನ ಗುರಿಯಾಗಬೇಕು.
ಧರ್ಮ ಮತ್ತು ನೈತಿಕತೆ ಮೂಲಕ ಚಾರಿತ್ರ್ಯ ನಿರ್ಮಾಣವಾಗಬೇಕು ಎಂದು ಸಲಹೆ ನೀಡಿದ ಅವರು ರಾಷ್ಟ್ರ ನಿರ್ಮಾಣದಲ್ಲಿ ಮಾನವೀಯ ಮೌಲ್ಯಗಳ ಪಾತ್ರ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಧರ್ಮ ಮತ್ತು ನೈತಿಕತೆಯ ನೆಲೆಯಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಧರ್ಮದ ಮರ್ಮವನ್ನರಿತು ಬಾಳಿದಾಗ, ಸಕಲ ಸಂಕಷ್ಟಗಳಿಂದ ಮುಕ್ತಿ ದೊರಕಿ ಜೀವನ ಪಾವನವಾಗುತ್ತದೆ. ವಿವಿಧ ಧರ್ಮಗಳ ಸಾರ ಮತ್ತು ಸಂದೇಶವನ್ನು ಅರಿತು ಸರ್ವಧರ್ಮ ಸಮನ್ವಯದೊಂದಿಗೆ ಸಾಮರಸ್ಯವನ್ನು ಸಾಧಿಸುವುದೇ ಸರ್ವಧರ್ಮ ಸಮ್ಮೇಳನದ ಉದ್ದೇಶವಾಗಿದೆ.
ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ನಿತ್ಯೋತ್ಸವವಾಗಿದೆ. ಶ್ರೀ ಮಂಜುನಾಥ ಸ್ವಾಮಿಯ ಸೇವೆ ಮಾಡುವುದು ತನ್ನ ಪ್ರಮುಖ ಕರ್ತವ್ಯವಾದರೂ ಸಾನ್ನಿಧ್ಯ ಸೇವೆ ಮತ್ತು ಸಾನ್ನಿಧ್ಯ ರಕ್ಷಣೆಯೊಂದಿಗೆ, ಲೋಕಕಲ್ಯಾಣಕ್ಕಾಗಿ ಅನೇಕ ಸೇವಾಕಾರ್ಯಗಳನ್ನು ಅನುಷ್ಠಾನಗೊಳಿಸಿರುವುದಾಗಿ ಹೆಗ್ಗಡೆಯವರು ಹೇಳಿದರು.
ಕ್ರೈ ಧರ್ಮದಲ್ಲಿ ಧರ್ಮ ಸಮನ್ವಯದ ಬಗ್ಗೆ ಧರ್ಮಗುರು ಮಾರ್ಸೆಲ್ ಪಿಂಟೊ, ಇಸ್ಲಾಂ ಮತ್ತು ಭಾರತೀಯ ಭಾವೈಕ್ಯದ ಬಗ್ಯೆ ಹಾಸಿಂಪೀರ ಇ ವಾಲೀಕರ ಮತ್ತು ಜೈನಧರ್ಮದಲ್ಲಿ ಸಾಮರಸ್ಯ ಎಂಬ ವಿಷಯದ ಬಗ್ಯೆ ಮೂಡಬಿದ್ರೆಯ ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಉಪನ್ಯಾಸ ನೀಡಿದರು.

ಅಧ್ಯಕ್ಷತೆ ವಹಿಸಿದ ಶಿವಮೊಗ್ಗದ ಖ್ಯಾತ ವಕೀಲ ಎಂ.ಆರ್. ಸತ್ಯನಾರಾಯಣ ಮಾತನಾಡಿ, ನಮ್ಮ ಧರ್ಮದ ಮರ್ಮವನ್ನರಿತು ಇತರ ಧರ್ಮಗಳನ್ನೂ ಸಮಾನವಾಗಿ ಗೌರವಿಸಬೇಕು ಎಂದು ಹೇಳಿದರು. ಧರ್ಮಸ್ಥಳವು ಸರ್ವಧರ್ಮಗಳ ಸಮನ್ವಯ ಮತ್ತು ಸಾಮರಸ್ಯದ ಕೇಂದ್ರವಾಗಿದೆ. ಜೈನಧರ್ಮದ ಅನೇಕಾಂತವಾದ, ಅಹಿಂಸೆ ಹಾಗೂ ಪಂಚಾಣುವ್ರತಗಳು, ಧರ್ಮಸ್ಥಳದ ನ್ಯಾಯದಾನ ಪದ್ಧತಿ ವಿಶಿಷ್ಟವಾಗಿದೆ.

ನಮ್ಮ ಪುರಾತನ ಇತಿಹಾಸ, ನಾಗರಿಕತೆ ಮತ್ತು ಸಂಸ್ಕೃತಿ ಬಗ್ಗೆ ನಮಗೆ ಗೌರವ ಹಾಗೂ ಅಭಿಮಾನ ಇರಬೇಕು. ಪುರಾಣಗಳ ಅಧ್ಯಯನ ಮತ್ತು ಮನನ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಸಂಕುಚಿತ ಭಾವನೆ ತ್ಯಜಿಸಿ ವಿಶಾಲ ಮನೋಭಾವದಿಂದ ವಿಶ್ವದ ಎಲ್ಲಾ ಕಡೆಗಳಿಂದಲೂ ಬರುವ ಉತ್ತಮ ವಿಚಾರಗಳನ್ನು ನಾವು ಸ್ವೀಕರಿಸಿ ವಿಶ್ವಮಾನವರಾಗಬೇಕು ಎಂದು ಹೇಳಿದರು.
ಧರ್ಮಸ್ಥಳ ಗ್ರಾಮ ಪಂಚಾಯಿತಿ ಪಿ.ಡಿ.ಒ. ಉಮೇಶ್ ಗೌಡ ಧನ್ಯವಾದವಿತ್ತರು. ಎಸ್.ಡಿ.ಎಂ. ಕಾಲೇಜಿನ ಉಪನ್ಯಾಸಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರ್ವಹಿಸಿದರು.
ಬಳಿಕ ಕಂಚಿಮಾರು ಕಟ್ಟೆ ಉತ್ಸವ ನಡೆಯಿತು.
ಅಪರಾಧ
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ

ಪುತ್ತೂರು: ಕೆದಿಲದಲ್ಲಿ ನವೆಂಬರ್ 22 ರಂದು ನಡೆದ ಸರಣಿ ಕಳ್ಳತನದ ಆರೋಪಿಯನ್ನು ಸ್ಥಳೀಯರು ಡಿ 4 ರಂದು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು , ಇಂದು(ಮಂಗಳವಾರ) ಬಂಧಿಸಿರುವ ಬಗ್ಗೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.ಮೂಲತಃ ವಿಟ್ಲ ಸಮೀಪದ ಕಡಂಬು ನಿವಾಸಿ ಹಾಲಿ ಚಿಕ್ಕಮಂಗಳೂರು ಉಪ್ಪಳ್ಳಿ ನಿವಾಸಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬ್ಬಕರ್ ಬಂಧಿತ. ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಡಿ.19ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಕೆದಿಲದ ರಮ್ಲ ಕುಂಞಿ ಮನೆಯಲ್ಲಿ ಕಳ್ಳತನಗೈದಿದ್ದ ಆರೋಪಿ ಕೋಡಿ ನಿವಾಸಿ ಉಮ್ಮರ್ ಫಾರೂಕ್ ಅವರ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವುಗೈದಿದ್ದ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ ಸಂಖ್ಯೆ 112 ಮತ್ತು 113ರಂತೆ ಪ್ರಕರಣ ದಾಖಲಾಗಿತ್ತು.
ಸಿಕ್ಕಿಬಿದ್ದದ್ದು ಹೀಗೆ
ಈ ಪೈಕಿ ಆರೋಪಿಯು ಕಳವು ಗೈದ ದ್ವಿಚಕ್ರವಾಹನ ಗುಡ್ಡ ಪ್ರದೇಶದಲ್ಲಿ ಅಡಗಿಸಿಟ್ಟಿದ್ದ. ಅದನ್ನು ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಸೋಮವಾರ ಅಬೂಬ್ಬಕರ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಖರೀದಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರಿಗೆ ಅನುಮಾನ ಉಂಟಾಗಿದೆ. ಅವರು ಆತನ ಬೆನ್ನ ಹಿಂದೆ ಬಿದ್ದಿದ್ದಾರೆ ಎನ್ನಲಾಗಿದೆ.
ಈತ ಅಲ್ಲಿಂದ ತಾನು ಬೈಕ್ ಅಡಗಿಸಿಟ್ಟಿದ್ದ ಗುಡ್ಡಕ್ಕೆ ತೆರಳಿದ್ದು ಈ ವೇಳೆ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ವಿಚಾರಿಸಿದ್ದಾರೆ. ಈವೇಳೆ ಆತ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಬಳಿಕ ಸ್ಥಳೀಯರು ಆತನನ್ನು ಠಾಣೆಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
ಒಂದೇ ದಿನ ಎರಡು ಕಳ್ಳತನ
ರಮ್ಲ ಕುಂಞಿ ಬೆಂಗಳೂರು ಕಂಬಳಕ್ಕೆ ವ್ಯಾಪಾರಕ್ಕೆಂದು ನ.22ರಂದು ರಾತ್ರಿ 8 ಗಂಟೆಗೆ ಮನೆಗೆ ಬೀಗ ಹಾಕಿ ತೆರಳಿದ್ದು, ಕೆದಿಲ ಮಿತ್ತಪಡ್ಪು ನಿವಾಸಿ ಹಮೀದ್ ನ.23 ರಂದು ಬೆಳಗ್ಗೆ ಹೋಗಿ ನೋಡುವ ಸಂದರ್ಭದಲ್ಲಿ ಬೀಗ ಮುರಿದಿದ್ದು ಪತ್ತೆಯಾಗಿತ್ತು, ಕಪಾಟಿನಲ್ಲಿದ್ದ ಸುಮಾರು ೨ಲಕ್ಷ ಕಳವಾಗಿತ್ತು. ಇದರ ಜತೆಗೆ ಕೋಡಿ ನಿವಾಸಿ ಉಮ್ಮರ್ ಫಾರೂಕ್ ಅವರಿಗೆ ಸೇರಿದ ದ್ವಿಚಕ್ರವಾಹನ ಮನೆಯ ಅಂಗಳದಿಂದ ಕಳವಾಗಿತ್ತು. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು.
ಇತ್ತೆ ಬರ್ಪೆ ಹೆಸರು ಬಂದದ್ದು ಹೇಗೆ :
ಟ್ಲದಲ್ಲಿ ಅಟೋ ರಿಕ್ಷಾ ಹೊಂದಿದ್ದ ಅಬೂಬಕ್ಕರ್ ರಿಕ್ಷಾ ಹಿಂಭಾಗದಲ್ಲಿ ಇತ್ತೆ ಬರ್ಪೆ ಎಂದು ಬರೆದಿಕೊಂಡಿದ್ದರು. ಇದರಿಂದ ಆ ಹೆಸರಿನಲ್ಲೇ ಜನರಿಗೆ ಚಿರಪರಿಚಿತರಾಗಿದ್ದರು. ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಉಡುಪಿ, ಸುರತ್ಕಲ್, ಚಿಕ್ಕಮಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಸುಮಾರು 80 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿತ್ತು.
ರಾಜಕೀಯ
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?

ಬೆಳಗಾವಿ: ತನ್ನ ಮೇಲೆ ಎಫ್‌ಐಆರ್ ಹಾಕಿದ ಅರಣ್ಯಾಧಿಕಾರಿಗಳ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Belthangady MLA Harish Poonja) ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ಹಕ್ಕು ಚ್ಯುತಿ ಮಂಡಿಸಿದ್ದಾರೆ. ಇದನ್ನು ಸ್ಪೀಕರ್ ಯು.ಟಿ. ಖಾದರ್ ಅವರು ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ವರ್ಗಾಯಿಸಿದ್ದಾರೆ.
2 ತಿಂಗಳ ಹಿಂದೆ ಬೆಳ್ತಂಗಡಿಯ ಕಳೆಂಜ ಗ್ರಾಮದ ಅಮ್ಮಿನಡ್ಕದಲ್ಲಿ ರೈತರೊಬ್ಬರ ಮನೆಯನ್ನು ಕಿತ್ತು ಹಾಕಲು ಮುಂದಾದಾಗ ಅರಣ್ಯ ಅಧಿಕಾರಿಗಳ ಕ್ರಮವನ್ನು ಶಾಸಕ ಹರೀಶ್ ಪೂಂಜಾ ರೈತರ ಪರ ನಿಂತಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೂಂಜಾ ಮದ್ಯೆ ಮಾತಿನ ಚಕಮಕಿ ನಡೆದಿತ್ತು.ಇದನ್ನೆ ಮುಂದಿಟ್ಟು ಅರಣ್ಯ ಅಧಿಕಾರಿಗಳು ಪುಂಜಾ ವಿರುದ್ದ ಎಫ್‌ಐಆರ್ ದಾಖಲಿಸಿದ್ದರು.
ಈ ಎಫೈ ಆರ್ ವಿರುದ್ದ ಆಕ್ರೋಶ ಹೊರಹಾಕಿರುವ ಹರೀಶ್ ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ತಮ್ಮ ಹಕ್ಕಿಗೆ ಚ್ಯುತಿ ತರಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಎಫ್‌ಐಆರ್ ದಾಖಲು ಮಾಡಿದ ಅಧಿಕಾರಿಗಳ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ್ದಾರೆ.
ವಿಧಾನಸಭಾ ಕಲಾಪದಲ್ಲಿ ವಿರೋಧ ಪಕ್ಷದ ಸದಸ್ಯರು ಹಕ್ಕು ಚ್ಯುತಿ ಮಂಡಿಸಲು ಅವಕಾಶ ನೀಡುವಂತೆ ಕೋರಿದರು. ಇದಕ್ಕೆ ಜೆಡಿಎಸ್ ಸದಸ್ಯರು ಬೆಂಬಲ ನೀಡಿದ್ದಾರೆ . ಈ ಬಗ್ಗೆ ಸುನೀಲ್ ಕುಮಾರ್ ಮಾತನಾಡಿ ಬೆಳ್ತಂಗಡಿ ಶಾಸಕರ ಹಕ್ಕುಚ್ಯುತಿ ಮಂಡನೆ ಮಾಡಬೇಕಿದೆ. ಅರಣ್ಯ ಇಲಾಖೆಯವರು ಮನೆ ತೆರವು ಮಾಡಲು ಹೋಗಿದ್ದರು. ಈ ವೇಳೆ ಶಾಸಕರಿಗೆ ಹಕ್ಕುಚ್ಯುತಿ ಆಗಿದೆ. ಸದನದಲ್ಲಿ ಮಾತನಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಆದರೆ, ಅವಕಾಶ ಕೊಡದಿದ್ದಕ್ಕೆ ಸದನದಲ್ಲಿ ಗದ್ದಲ ಮುಂದುವರಿದಿತ್ತು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಮಧ್ಯ ಪ್ರವೇಶ ಮಾಡಿ, ನಾನು ಬರಗಾಲ ಬಗ್ಗೆ ತಡವಾಗಿ ಚರ್ಚೆ ಮಾಡುತ್ತೇನೆ. ಈಗ ಶಾಸಕರಿಗೆ ಹಕ್ಕುಚ್ಯುತಿ ಮಂಡನೆ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು
. ಆದರೆ ಈ ಮನವಿಯನ್ನು ನಿರಾಕರಿಸಿದ ಸ್ಪೀಕರ್ ಯು.ಟಿ. ಖಾದರ್, ನಾಳೆ ಬೆಳಗ್ಗೆ ಅವಕಾಶ ನೀಡುತ್ತೇನೆ. ಈಗ ಬರಗಾಲ ಬಗ್ಗೆ ಚರ್ಚೆ ನಡೆಯಲಿ ಎಂದು ಮನವಿ ಮಾಡಿದರು. ಆದರೂ ಬಿಜೆಪಿ ಸದಸ್ಯರು ಪಟ್ಟು ಬಿಡದೆ ಈಗಲೇ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಶಾಸಕನ ರಕ್ಷಣೆ ನಿಮ್ಮ ಜವಾಬ್ದಾರಿಯಾಗಿದೆ. ಹಕ್ಕು ಚ್ಯುತಿ ಪಡೆದುಕೊಂಡು ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಈಗಲೇ ಹಕ್ಕುಚ್ಯುತಿ ಸಮಿತಿಗೆ ರೆಫರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್ ರವರು ಕ್ಯಾಬಿನೆಟ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಕೇಸ್ ಅನ್ನು ವಾಪಸ್ ತೆಗೆದುಕೊಳ್ಳುತ್ತೀರಿ. ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲು ಮಾಡಿಕೊಳ್ಳುತ್ತೀರಿ. ಇದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರ ಒತ್ತಡಕ್ಕೆ ಮಣಿದ ಸ್ಪೀಕರ್ ಯು.ಟಿ. ಖಾದರ್, ಹಕ್ಕುಚ್ಯುತಿ ಮಂಡನೆ ಪ್ರಸ್ತಾಪಕ್ಕೆ ಅವಕಾಶ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಧರಣಿ ವಾಪಸ್ ಪಡೆದುಕೊಂಡರು.
ಆದರೆ ಹಕ್ಕುಚ್ಯುತಿಗೆ ಪ್ರಸ್ತಾಪಕ್ಕೆ ಅವಕಾಶ ಕೊಟ್ಟಿದ್ದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬರದ ಚರ್ಚೆ ನಡುವೆ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಅವಕಾಶ ಏಕೆ ಎಂದು ಪ್ರಶ್ನೆ ಮಾಡಿದರು. ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಲಿಂಗೇಗೌಡ ಆಕ್ಷೇಪ ವ್ಯಕ್ತಪಡಿಸಿದರು.
ಈ ವೇಳೆ ಶಾಸಕರ ಹಕ್ಕಿಗೆ ಚ್ಯುತಿ ಮಾಡಲು ಬಿಜೆಪಿ ಮುಂದಾದಾಗ ಅರಣ್ಯ ಅಧಿಕಾರಿಗಳ ಪರವಾಗಿ ಈಶ್ವರ್ ಖಂಡ್ರೆ ನಿಂತುಕೊಂಡರು. ಇದರಿಂದ ಬಿಜೆಪಿ ಶಾಸಕರು ಕೆರಳಿ ಕೆಂಡವಾದರು. “ಇದು ಅಧಿಕಾರಿಗಳ ರಾಜ್ಯವೇ? ಒಬ್ಬ ಶಾಸಕನ ಬಳಿ ಡಿಎಫ್‌ಒ ಮುಚ್ಚಳಿಕೆ ಬರಿಸಿಕೊಳ್ಳುತ್ತಾನೆ ಎಂದರೆ ಈ ವಿಧಾನಸಭೆ, ಶಾಸಕರು ಯಾಕೆ ಇರಬೇಕು? ಇದು ಅಧಿಕಾರಿಗಳ ರಾಜ್ಯವೇ?” ಎಂದು ಆರ್. ಅಶೋಕ್ ಆಕ್ರೋಶ ಹೊರಹಾಕಿದರು
ಈ ವಿಚಾರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ :ಮಾನವ – ಕಾಡು ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ. ನಗರಕ್ಕೆ ಕಾಡು ಪ್ರಾಣಿಗಳು ಬರುತ್ತಿವೆ. ಇದಕ್ಕೆ ಯಾರು ಹೊಣೆ? ಅರಣ್ಯ ಅತಿಕ್ರಮಣವಾದರೆ ಈ ಸಮಸ್ಯೆ ಸೃಷ್ಟಿಯಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅತಿಕ್ರಮಣ ಸಮರ್ಥನೆ ಮಾಡಿದರೆ ಅರಣ್ಯ ನಾಶವಾಗುತ್ತದೆ ಎಂದು ಹೇಳಿದರು.
ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್. ಅಶೋಕ್ ಅರಣ್ಯ ರಕ್ಷಣೆ ಮಾಡುವುದರ ಪರವಾಗಿ ನಾವೂ ಇದ್ದೇವೆ. ಮಾನವ ಕಾಡು ಪ್ರಾಣಿ ಸಂಘರ್ಷ ಸಾಮಾನ್ಯವಾಗಿದೆ. ಅರಣ್ಯ ಒತ್ತುವರಿ ಜಮೀನು ರೈತರಿಗೆ ಕೊಡಬೇಕು ಎಂದು ಸಾಕಷ್ಟು ಹೋರಾಟ ನಡೆದಿದೆ. ಸಂಗಮೇಶ್ ವಿರುದ್ಧ ಹಕ್ಕುಚ್ಯುತಿ ಆಗಿದೆ ಎಂದು ಆರೋಪ ಬಂದಿತ್ತು. ನಾವು ಕೂಡಲೇ ಹಕ್ಕು ಬಾಧ್ಯತಾ ಸಮಿತಿಗೆ ನೀಡಿದ್ದೇವೆ. ಅಧಿಕಾರಿಗಳನ್ನು ಕೇಳುವವರು ಹೇಳುವವರು ಯಾರೂ ಇಲ್ಲದಂತಾಗಿದೆ. ಶಾಸಕರ ಮೇಲೆ ಎಫ್ಐಆರ್ ಹಾಕುತ್ತಾರೆ ಎಂದರೆ ಏನು ಅರ್ಥ ಬರುತ್ತದೆ? ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಹಾಗೂ ಕೇಸ್ ವಾಪಸ್ ಪಡೆಯಿರಿ ಎಂದು ಆಗ್ರಹಿಸಿದರು.
ಬಳಿಕ ಸ್ಪೀಕರ್ ಯು.ಟಿ. ಖಾದರ್, ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ನಿರ್ಣಯವನ್ನು ರವಾನಿಸಿದ್ದಾರೆ.
ಶಿಕ್ಷಣ
Philomina Pu College: ಫಿಲೋಮಿನಾ ಪ. ಪೂ ಕಾಲೇಜಿನ ವಿಂಧ್ಯಾಶ್ರೀ ರೈ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿಶ್ವಮಾನವ ಪದವಿ ಪೂರ್ವ ಕಾಲೇಜು ಕೊಮ್ಮೇರಹಳ್ಳಿ, ಮಂಡ್ಯ ಇಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಂಧ್ಯಾಶ್ರೀ ರೈ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇವರು ಶ್ರೀ ಮದ್ ಭಗವದ್ಗೀತಾ ಜಯಂತಿ ಪ್ರಯುಕ್ತ ನಡೆಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ಉಪ್ಪಿನಂಗಡಿ ಹೋಬಳಿ ಘಟಕ, ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ನೇತೃತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನಡೆದ ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ, ಹಾಗೂ ದೇಶಭಕ್ತಿಗೀತೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಇವರು ಕುರಿಯ ನಿವಾಸಿಯಾದ ಉಮೇಶ್ ರೈ ಮತ್ತು ಶೋಭಾವತಿ. ಯು.ರೈ ದಂಪತಿಗಳ ಪುತ್ರಿ . ಕಾಲೇಜಿನ ಪ್ರಾಂಶುಪಾಲರಾದ ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಯನ್ನೂ ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ನಿರ್ದೇಶಕರಾದ ಸುಮನ ರಾವ್, ರಶ್ಮಿ ಪಿ ಎಸ್, ಹಾಗೂ ಭರತ್ ಜಿ.ಪೈ ಉಪಸ್ಥಿತರಿದ್ದರು.
-
ಅಪರಾಧ9 hours ago
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ
-
ಬಿಗ್ ನ್ಯೂಸ್13 hours ago
ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ಚೆಕ್ ವಿತರಣೆ : ಮೊತ್ತ ತಾಯಿ-ಪತ್ನಿಗೆ ಸಮಪಾಲು ಮಾಡಿದ ಸರ್ಕಾರ
-
ಕ್ರೀಡೆ12 hours ago
Bomb Threat ಪ್ರಿಯಕರ ಕೊಟ್ಟ ಐಡಿಯಾ ನಂಬಿ ಗಂಡನ ಜೈಲಿಗೆ ಕಳುಹಿಸಲು ಆತನ ಮೊಬೈಲ್ʼನಿಂದ ಹೆಂಡತಿ ಕಳುಹಿಸಿದಳು ಬೆದರಿಕೆ ಮೆಸೇಜ್ – ಆದರೇ ಮುಂದೇನಾಯಿತು ?
-
ಕ್ರೀಡೆ10 hours ago
Jay shah: ಜಯ್ ಶಾಗೆ ಸ್ಪೋರ್ಟ್ಸ್ ಬ್ಯುಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಯ ಗರಿ – ಬಿಸಿಸಿಐ ಕಾರ್ಯದರ್ಶಿಗೆ ಈ ಗೌರವ ಸಿಕ್ಕಿದ್ದು ಯಾಕೆ ಗೊತ್ತೆ ?
-
ರಾಜಕೀಯ10 hours ago
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?
-
ಸಿನೆಮಾ1 day ago
Animal Box Office collection ರಣ್ ಬೀರ್ – ರಶ್ಮಿಕಾ ಜೋಡಿ ಕಮಾಲ್ : ಅನಿಮಲ್ ಬಾಕ್ಸ್ ಆಫೀಸ್ನಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?
-
ಸಾಮಾಜಿಕ ಮಾಧ್ಯಮ17 hours ago
Dasara Elephant Arjun Dies ಅರ್ಜುನ ಸಾವಿನ ಸುತ್ತ ಹಲವು ಅನುಮಾನ – ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ – ಅದರಲ್ಲಿದೆ ಗುಂಡೇಟಿನ ವಿಚಾರ
-
ಚಿನ್ನ-ಬೆಳ್ಳಿ ದರ19 hours ago
Gold Rate Hike:ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ : ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ದರ ಸಾರ್ವಕಾಲಿಕ ಜಿಗಿತ – ಮುಂದಿನ ದಿನಗಳಲ್ಲಿ ರೇಟ್ ಹೇಗಿರಲಿದೆ?