Ad Widget

ದುರ್ನಡತೆ ಹಾಗೂ ಕರ್ತವ್ಯ ಲೋಪ ಆರೋಪದಡಿ ಬೆಂಗಳೂರಿನಲ್ಲಿ ತಹಸೀಲ್ದಾರ್ ಆಗಿದ್ದ ಪುತ್ತೂರಿನ ಅಜಿತ್ ರೈ ಅಮಾನತು – ಗ್ರೇಡ್-1 ತಹಶೀಲ್ದಾರ್ ಹುದ್ದೆಯಿಂದ ಗ್ರೇಡ್-2 ಕ್ಕೆ ಡೀಪ್ರೋಮೋಷನ್

FB_IMG_1669294034313
Ad Widget

Ad Widget

Ad Widget

ಬೆಂಗಳೂರು, ನ. 24: ಇತ್ತೀಚಿಗೆ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾಗಿ ಮುಳುಗಡೆ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ‘ರೈನ್ ಬೋ ಲೇಔಟ್’ನ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳದ ಆರೋಪದಡಿ ತಹಶೀಲ್ದಾರ್‍ನನ್ನು ಅಮಾನತು ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಒತ್ತುವರಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ ಆರೋಪದಲ್ಲಿ ಬೆಂಗಳೂರು ಪೂರ್ವ ತಾಲೂಕು ಕೆಆರ್ ಪುರಂ ತಹಶೀಲ್ದಾರ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸೊರಕೆ ನಿವಾಸಿ ಎಸ್.ಅಜಿತ್ ಕುಮಾರ್ ರೈ ಅವರನ್ನು ಅಮಾನತು ಮಾಡಲಾಗಿದೆ.

Ad Widget

Ad Widget

Ad Widget

Ad Widget

ಸರಿಯಾದ ರೀತಿಯಲ್ಲಿ ವಿಚಾರಣೆ ಮಾಡದೇ ಒತ್ತುವರಿದಾರರಿಗೆ ಸಹಕರಿಸಿದ್ದು, ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅವರನ್ನು ಅಮಾನತು ಮಾಡಿ ಕ್ರಮ ಕೈಗೊಂಡಿದೆ ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಜಿ.ಎನ್.ಸುಶೀಲಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿಗೆ ಮಳೆಯಿಂದ ಸರ್ಜಾಪುರ ರಸ್ತೆಯಲ್ಲಿರುವ ರೈನ್ ಬೋ ಡ್ರೈವ್ ಲೇಔಟ್ ಜಲಾವೃತಗೊಂಡಿತ್ತು. ರೈನ್‍ಬೋಡ್ರೈವ್ ಲೇಔಟ್‍ನಲ್ಲಿ ಜಿಲ್ಲಾಡಳಿತಸರ್ವೇನಡೆಸಿದ್ದು, ಕಾಲುವೆ ಒತ್ತುವರಿ ಮಾಡಿ ವಿಲ್ಲಾಗಳನ್ನು ನಿರ್ಮಾಣ ಮಾಡಿರುವುದು ಬೆಳಕಿಗೆ ಬಂದಿತ್ತು. ಆನಂತರ ವಿಲ್ಲಾಗಳನ್ನು ತೆರವುಗೊಳಿಸುವಂತೆ ಮಾಲಕರಿಗೆ ನೋಟಿಸ್ ನೀಡಲಾಗಿತ್ತು. ಬಳಿಕ, ಈ ಬಗ್ಗೆ ಕ್ರಮ ಜರುಗಿಸಲು ತಹಶೀಲ್ದಾರ್ ವಿಫಲರಾಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget
Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: