Ad Widget

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಬಂಟ್ವಾಳದ ಪ್ರತಿಭಾ ಪೂಜಾರಿ ಆಯ್ಕೆ

WhatsApp Image 2022-11-25 at 11.23.46
Ad Widget

Ad Widget

Ad Widget

ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.
ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು.

Ad Widget

Ad Widget

Ad Widget

Ad Widget

ಈ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಸೂರಂಡೆ ನಿವಾಸಿಗಳಾದ ನಾರಾಯಣ ಪೂಜಾರಿ ಮತ್ತು ಶ್ರೀಮತಿ ದಂಪತಿಗಳ‌ ಪುತ್ರಿಯಾದ ಪ್ರತಿಭಾ ಅವರು ವಾಮದಪದವು ಸಮೀಪದ ಕುಡಂಬೆಟ್ಟು ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರನ್ನು ವಿವಾಹವಾಗಿದ್ದು, ಸಂಸಾರ ಸಹಿತ ಕಳೆದ ಕೆಲವು ವರ್ಷಗಳಿಂದ ದೋಹಾ ಕತಾರಿನಲ್ಲಿ ನೆಲೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪ್ರತಿಭಾ ಎನ್.ದರ್ಖಾಸು ಅವರು ಕತಾರಿನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಕೊರೊನಾ ಸಹಿತ ಇತರ ಸಂದರ್ಭದಲ್ಲಿನ ಇವರ ವಿಶೇಷ ಸೇವೆಯನ್ನು ಗುರುತಿಸಿ ಈಗಾಗಲೇ ಗೌರವಿಸಲಾಗಿತ್ತು.

ಇದೀಗ ಇವರು ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಯನ್ನು ಪರಿಗಣಿಸಿ ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಆಯ್ಕೆ ಮಾಡಲಾಗಿದೆ. ಈ ಅಪೂರ್ವ ಸೇವೆಗೆ ಆಯ್ಕೆಯಾದ ಪ್ರತಿಭಾ ಎನ್.ದರ್ಖಾಸು ಅವರಿಗೆ ತುಳುನಾಡಿನಾದ್ಯಾಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Ad Widget

Ad Widget
Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: