Ad Widget

Kantara : ದೈವ ಕುರಿತು ಅಮೋಘ ಸಿನಿಮಾ – ರಿಷಬ್​ ಶೆಟ್ಟಿಗೆ  ಪ್ರತಿಷ್ಠಿತ ರಾಷ್ಟ್ರಮಟ್ಟದ ಸಿದ್ಧಶ್ರೀ ಪ್ರಶಸ್ತಿ   

WhatsApp Image 2022-11-26 at 18.55.50
Ad Widget

Ad Widget

Ad Widget

ಕಲಬುರಗಿ: ಜಿಡಗಾ-ಮುಗಳಖೋಡ-ಕೋಟನೂರ ಮಠದಿಂದ ಕೊಡಮಾಡುವ ಪ್ರತಿಷ್ಠಿತ ರಾಷ್ಟ್ರಮಟ್ಟದ ಸಿದ್ಧಶ್ರೀ ಪ್ರಶಸ್ತಿಗೆ ಕಾಂತಾರ ಸಿನಿಮಾ ನಿರ್ದೇಶಕ ಮತ್ತು ನಟ ರಿಷಬ್​ ಶೆಟ್ಟಿ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಆಳಂದ ತಾಲೂಕಿನ ಜಿಡಗಾ ನವಕಲ್ಯಾಣ ಮಠದಲ್ಲಿ ಡಿ.2ರಂದು ನಡೆಯುವ ಶ್ರೀ ಷಡಕ್ಷರಿ ಶಿವಯೋಗಿ ಡಾ.ಮುರುರಾಜೇಂದ್ರ ಮಹಾಸ್ವಾಮಿಗಳ 38ನೇ ಗುರುವಂದನೆ ಕಾರ್ಯಕ್ರಮದಲ್ಲಿ ರಿಷಬ್​ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ಮಾದನಹಿಪ್ಪರಗಾ ವಿರಕ್ತಮಠದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮೀಜಿ ಮತ್ತು ಅಧ್ಯಕ್ಷರಾದ ಚಿನ್ಮಯಗಿರಿ ಮಹಾಂತೇಶ್ವರ ಮಠದ ಶ್ರೀ ವೀರಮಹಾಂತ ಶಿವಾಚಾರ್ಯರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Ad Widget

Ad Widget

Ad Widget

Ad Widget

Ad Widget

ಪ್ರಶಸ್ತಿಯು ಒಂದು ಲಕ್ಷ ನಗದು, 20 ಗ್ರಾಂ ಚಿನ್ನದ ಪದಕ ಹೊಂದಿದೆ. ಕಳೆದ ವರ್ಷ ಕರ್ನಾಟಕ ರತ್ನ ಪುನೀತ್​ ರಾಜಕುಮಾರ್​ ಅವರಿಗೆ ಮರಣೋತ್ತರವಾಗಿ ಸಿದ್ಧಶ್ರೀ ಪ್ರಶಸ್ತಿ ನೀಡಲಾಗಿತ್ತು. ಇದುವರೆಗೆ ಸಿದ್ಧಗಂಗಾದ ಲಿಂಗೈಕ್ಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿ, ಪಂಡಿತ ಪುಟ್ಟರಾಜ ಗವಾಯಿ ಇತರರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದೈವ ಕುರಿತು ಅಮೋಘವಾಗಿರುವ ಸಿನಿಮಾ ನಿರ್ದೇಶಿಸಿ ಇಡೀ ಭಾರತ ಕರ್ನಾಟಕದ ಕಡೆಗೆ ನೋಡುವಂತೆ ಮಾಡಿರುವ ರಿಷಬ್​ ಶೆಟ್ಟಿ ಅವರನ್ನು ಈ ಸಲದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕೆಪಿಎಸ್​ಸಿ ಅಧ್ಯಕ್ಷ ಶಿವಶಂಕ್ರಪ್ಪ ಸಾಹುಕಾರ ಮತ್ತು ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ವಿ.ನಾಗೇಂದ್ರ ಪ್ರಸಾದ್​ ಅವರನ್ನೂ ಗೌರವಿಸಲಾಗುತ್ತದೆ. ಗಾಯಕರಾದ ವಿಜಯಪ್ರಕಾಶ್​, ಅನುರಾಧಾ ಭಟ್​, ನಟಿ ಅನುಶ್ರೀ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

Ad Widget

Ad Widget

Ad Widget

Ad Widget
Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: