IUIDAI Recruitment 2022: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(Unique Identification Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳು ಅದರಲ್ಲಿ ಸೇರಿವೆ. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಜನವರಿ 08, 2023ರೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಯ ಕುರಿತು ಮಾಹಿತಿ,
ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ : ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಹುದ್ದೆಯ ಹೆಸರು : ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್
ಒಟ್ಟು ಹುದ್ದೆ :10
ವೇತನ: ನಿಯಮಾನುಸಾರ
ಉದ್ಯೋಗದ ಸ್ಥಳ : ಬೆಂಗಳೂರು
ಹುದ್ದೆಯ ಮಾಹಿತಿ:
ಡೆಪ್ಯುಟಿ ಡೈರೆಕ್ಟರ್ -2
ಟೆಕ್ನಿಕಲ್ ಆಫೀಸರ್- 3
ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್- 5
ವಿದ್ಯಾರ್ಹತೆ ಏನಿರಬೇಕು?
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್/ ಟೆಕ್ನಾಲಜಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ ಎಷ್ಟಿರಬೇಕು?
ಅಭ್ಯರ್ಥಿಗಳ ಗರಿಷ್ಠ ವಯಸ್ಸು ಜನವರಿ 8, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬೇಕು.
ನಿರ್ದೇಶಕರು (HR),
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಆಧಾರ್ ಕಾಂಪ್ಲೆಕ್ಸ್
NTI ಲೇಔಟ್,
ಟಾಟಾ ನಗರ
ಕೊಡಿಗೇಹಳ್ಳಿ
ಟೆಕ್ನಾಲಜಿ ಸೆಂಟರ್
ಬೆಂಗಳೂರು- 560092
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/11/2022
ಆರ್ಜಿ ಸಲ್ಲಿಸಲು ಕೊನೆ ದಿನ: 08/01/2023