ಬಿಗ್ ನ್ಯೂಸ್
Modi Road Show : ದೇಶದ ಇತಿಹಾಸದಲ್ಲೇ ರಾಜಕೀಯ ನಾಯಕರೊಬ್ಬರ ಅತ್ಯಂತ ಬೃಹತ್ ರೋಡ್ ಶೋ ಗೆ ಸಾಕ್ಷಿಯಾಯಿತು ಗುಜಾರತ್ – ಪ್ರಧಾನಿ ಮೋದಿ ಗೆ ದೊರೆಯಿತು ಭವ್ಯ ಸ್ವಾಗತ

ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು (ಡಿ.01-ಗುರುವಾರ) ಅಹಮದಾಬಾದ್‌ನಲ್ಲಿ ಇಂದು ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಒಟ್ಟು 50 ಕಿ.ಮೀ ದೂರ ಕ್ರಮಿಸಲಿರುವ ಈ ‘ಮೆಗಾ ರೋಡ್ ಶೋ’, ದೇಶದ ರಾಜಕೀಯ ಇತಿಹಾಸದಲ್ಲೇ ನಾಯಕರೊಬ್ಬರು ಕೈಗೊಂಡ ಅತ್ಯಂತ ಬೃಹತ್ ರೋಡ್ ಶೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ.
ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಇಂದು (ಡಿ.01-ಗುರುವಾರ) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು, ಡಿ.05(ಸೋಮವಾರ)ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈ ಮಧ್ಯೆ ಪ್ರಧಾನಿ ಮೋದಿ ಅವರ ಅಹಮದಾಬಾದ್‌ನಲ್ಲಿ ಇಂದು ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಒಟ್ಟು 50 ಕಿ.ಮೀ ದೂರ ಕ್ರಮಿಸಲಿರುವ ಈ ‘ಮೆಗಾ ರೋಡ್ ಶೋ’, ದೇಶದ ರಾಜಕೀಯ ಇತಿಹಾಸದಲ್ಲೇ ನಾಯಕರೊಬ್ಬರು ಕೈಗೊಂಡ ಅತ್ಯಂತ ಬೃಹತ್ ರೋಡ್ ಶೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಪ್ರಧಾನಿ ಮೋದಿ ಕೈಗೊಂಡ ‘ಮೆಗಾ ರೋಡ್ ಶೋ’ನಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯುವ 16 ಕ್ಷೇತ್ರಗಳು ಬರುತ್ತವೆ. ನರೋಡಾ ಗಾಮ್‌ನಿಂದ ಆರಂಭವಾದ ಈ ‘ಮೆಗಾ ರೋಡ್ ಶೋ’, ಥಕ್ಕರ್‌ಬಾಪನಗರ, ಬಾಪುನಗರ್, ನಿಕೋಲ್, ಅಮರೈವಾಡಿ, ಮಣಿನಗರ, ಡ್ಯಾನಿಲಿಂಬ್ಡಾ, ಜಮಾಲ್‌ಪುರ್ ಖಾಡಿಯಾ, ಎಲಿಸ್‌ಬ್ರಿಡ್ಜ್, ವೆಜಲ್‌ಪುರ್, ಘಟ್ಲೋಡಿಯಾ, ನರನ್‌ಪುರ್ ಮತ್ತು ಸಬರಮತಿ ಸೇರಿದಂತೆ ಒಟ್ಟು 16 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದೆ. ಈ ‘ಮೆಗಾ ರೋಡ್ ಶೋ’ ದಕ್ಷಿಣ ಗಾಂಧಿನಗರದಲ್ಲಿ ಮುಕ್ತಾಯಗೊಳ್ಳಲಿದೆ.
ಪ್ರಧಾನಿ ಮೋದಿ ಈ ಸುದೀರ್ಘ ಮಾರ್ಗವನ್ನು ಕ್ರಮಿಸಲು ಸರಿಸುಮಾರು 3.5 ಗಂಟೆಗಳನ್ನು ತೆಗೆದುಕೊಳ್ಳಲಿದ್ದು, ಈ ‘ಮೆಗಾ ರೋಡ್ ಶೋ’ ಈ ಬಾರಿಯ ಚುನಾವಣೆಯಲಿ ಬಿಜೆಪಿ ಹಮ್ಮಿಕೊಂಡ ಅತಿದೊಡ್ಡ ರಾಜಕೀಯ ಕಾರ್ಯಕ್ರಮವಾಗಿದೆ. ಹೂಮಾಲೆಗಳಿಂದ ಅಲಂಕರಿಸಲ್ಪಟ್ಟ ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ಈ ಸುದೀರ್ಘ ಯಾತ್ರೆಯಲ್ಲಿ ಸಂಚರಿಸುತ್ತಿದ್ದಾರೆ. ಸಾವಿರಾರು ಬಿಜೆಪಿ ಖಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ಈ ರೋಡ್‌ನಲ್ಲಿ ಭಾಗವಹಿಸಿದ್ದಾರೆ.
ಇದು ಭಾರತೀಯ ರಾಜಕೀಯ ನಾಯಕರೊಬ್ಬರು ಹಮ್ಮಿಕೊಂಡ ಅತ್ಯಂತ ಬೃಹತ್ ರೋಡ್ ಶೋ ಎಂದು ಬಿಜೆಪಿ ಹೇಳಿದ್ದು, ದಾರಿಯಲ್ಲಿ ಸಿಗುವ ಪಂಡಿತ್ ದೀನದಯಾಳ್ ಉಪಾಧ್ಯಾಯ, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗಳಿಗೆ ಪ್ರಧಾನಿ ಮೋದಿ ಮಾಲಾರ್ಪಣೆ ಮಾಡಿದ್ದಾರೆ.
ಬಿಜೆಪಿ ಸತತ 27 ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ, ಪ್ರತಿಬಾರಿಯ ಚುನಾವಣೆಯಲ್ಲೂ ಅದರ ಒಟ್ಟು ಸೀಟುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ವಿಧಾನಸಭೆಯ ಒಟ್ಟು 182 ಸ್ಥಾನಗಳ ಪೈಕಿ ಈ ಬಾರಿ 140 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಈ ಬಾರಿ ಕಣಕ್ಕಿಳಿದಿದೆ. 2017ರಲ್ಲಿ ಬಿಜೆಪಿ 99 ಸ್ಥಾನಗಳನ್ನು ಪಡೆದು ಅಧಿಕಾರಕ್ಕೇರಿದ್ದರೆ, ಕಾಂಗ್ರೆಸ್ 77 ಸ್ಥಾನಗಳನ್ನು ಪಡೆದು ಪ್ರತಿಪಕ್ಷ ಸ್ಥಾನಕ್ಕೆ ಸಮಾಧಾನಪಟ್ಟುಕೊಂಡಿತ್ತು.

ಪ್ರಧಾನಿ ಮೋದಿ ಅವರು ರಾಜ್ಯದ ಅತ್ಯಂತ ಜನಪ್ರಿಯ ಮತ್ತು ದೀರ್ಘಾವಧಿಯ ಮುಖ್ಯಮಂತ್ರಿಯಾಗಿದ್ದು, ೨೦೧೪ರಲ್ಲಿ ದೇಶದ ಪ್ರಧಾನಿಯಾಗುವ ಮೊದಲು ಅವರು, ಒಟ್ಟು ಮೂರು ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು
.

ಪ್ರಧಾನಿ ಮೋದಿ ಇದುವರೆಗೆ ಗುಜರಾತ್‌ನಲ್ಲಿ 20 ಬಿಜೆಪಿ ಚುನಾವಣಾ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಎರಡನೇ ಹಂತದ ಮತದಾನಕ್ಕೂ ಮುಂಚೆ ಪ್ರಧಾನಿ ಮೋದಿ ಏಳು ಕಡೆ ಬಿಜೆಪಿ ಚುನಾವಣಾ ಸಭೆಗಳನ್ನು ನಡೆಸಲಿದ್ದಾರೆ

ರಾಜ್ಯ
Arecanut price ಚೇತರಿಕೆ ಕಾಣದ ಅಡಿಕೆ ಧಾರಣೆ -ದರ ಕುಸಿತದ ಹಿಂದಿದೆ ಈ ಕಾರಣಗಳು – ಡೋಲಾಯಮಾನ ಸ್ಥಿತಿಯಲ್ಲಿ ಅಡಿಕೆ ಭವಿಷ್ಯ

ಕಳೆದ ಕೆಲ ವರ್ಷಗಳಿಗೆ ಹೋಲಿಸಿದರೇ ಇತ್ತೀಚಿಗಿನ ಕೆಲ ತಿಂಗಳುಗಳಿಂದ ಅಡಿಕೆ ಧಾರಣೆಯಲ್ಲಿ ಭಾರೀ ಕುಸಿತ ಕಂಡಿದೆ ಹಾಗು ಚೇತರಿಸುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಈ ನಡುವೆ ಅಡಿಕೆಯ ಉತ್ಪಾದನ ವೆಚ್ಚ ಪ್ರತಿ ವರ್ಷ ಹೆಚ್ಚಳವಾಗುತ್ತಲೇ ಇದೆ.ಹೀಗಾಗಿ ಅಡಿಕೆಯನ್ನೆ ನಂಬಿ ಜೀವನ ನಡೆಸುವ ಸಾಂಪ್ರದಾಯಿಕ ಬೆಳೆಗಾರನ ಸ್ತಿತಿ ಅಡಕತ್ತರಿಯಲ್ಲಿ ಸಿಕ್ಕಮತಾಗಿದೆ.
ಕಳೆದ ಪೆಭ್ರವರಿ ತಿಂಗಳಿನಲ್ಲಿ ಕೇಂದ್ರ ಸರ್ಕಾರ ಅಡಿಕೆಯ ಕನಿಷ್ಠ ಆಮದು ದರವನ್ನು ಪ್ರತಿ ಕೆ.ಜಿ.ಗೆ ₹ 100ರಷ್ಟು ಏರಿಸಿತ್ತು. . ಈ ಬಳಿಕ ಅಡಿಕೆ ಧಾರಣೆ ಜಾಸ್ತಿ ಆಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಅದು ಸುಳ್ಳಾಗಿದೆ ,ಕಳೆದ ವರ್ಷದ ಈ ಅವಧಿಗೆ ಹೋಲಿಸಿದರೆ ಈ ವರ್ಷ ಪ್ರತಿ ಕೆ.ಜಿ. ಹಳೆ ಅಡಿಕೆ ದರ ಸುಮಾರು ₹ 100ರಷ್ಟು ಕಡಿಮೆ ಇದೆ.
ಕೇಂದ್ರೀಯ ಅಡಿಕೆ ಮತ್ತು ಕೊಕ್ಕೊ ಮಾರುಕಟ್ಟೆ ಮತ್ತು ಸಂಸ್ಕರಣಾ ಸಹಕಾರಿ ಸಂಸ್ಥೆಯು (ಕ್ಯಾಂಪ್ಕೊ) ಬೆಳೆಗಾರರ ಹಿತ ಕಾಯುವ ಉದ್ದೇಶದಿಂದ ಕನಿಷ್ಠ ಆಮದು ಬೆಳೆ ಹೆಚ್ಚಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿತು. ಪರಿಣಾಮ ಕೇಂದ್ರ ಸರ್ಕಾರ 2023ರ ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸುವುದರ ಮೂಲಕ ಅಡಿಕೆ ಆಮದಿನ ಕನಿಷ್ಠ ದರವನ್ನು ಪ್ರತಿ ಕೆ.ಜಿ.ಗೆ ₹251ರಿಂದ ₹351ಕ್ಕೆ ಹೆಚ್ಚಳ ಮಾಡಿತ್ತು . ಆದರೆ ಇದರಿಂದ ನಿರೀಕ್ಷಿತ ಲಾಭ ದೊರೆತಂತೆ ಕಾಣುವುದಿಲ್ಲ. ಆ ಬಳಿಕವು ಅಡಿಕೆ ರೇಟ್ ಇಳಿಮುಖವಾಗುತ್ತಲೇ ಸಾಗಿದೆ.
2022ರ ನವೆಂಬರ್ ವೇಳೆಗೆ ಹಳೆ ಅಡಿಕೆ ದರವು ಪ್ರತಿ ಕೆ.ಜಿ.ಗೆ ₹540ರವರೆಗೂ ತಲುಪಿತ್ತು. ಪ್ರಸ್ತುತ ವರ್ತಕರು ಹಳೆ ಅಡಿಕೆಯನ್ನು ಪ್ರತಿ ಕೆ.ಜಿಗೆ ₹430ರಿಂದ ₹440ಕ್ಕೆ ಖರೀದಿಸುತ್ತಿದ್ದಾರೆ. ಹೊಸ ಅಡಿಕೆ ₹ 360ಕ್ಕೆ ಮಾರಾಟ ಆದರೆ ಹೆಚ್ಚು ಎಂಬ ಸ್ಥಿತಿ ಇದೆ. ಮೂರು ತಿಂಗಳಿಂದ ಹೆಚ್ಚೂ ಕಡಿಮೆ ಇದೇ ದರ ಇದೆ. ದೀಪಾವಳಿ ಬಳಿಕ ಹಾಗು ಪಂಚ ರಾಜ್ಯಗಳ ಚುನಾವಣೆಯ ಬಳಿಕ ರೇಟ್ ಹೆಚ್ಚಾಗಬಹುದು ಎಂಬ ನಿರೀಕ್ಷೆ ಎಲ್ಲಡೆ ಇತ್ತು. ಆದರೆ ಅದೆಲ್ಲವು ಹುಸಿಯಾಗಿದೆ.
ಕಳ್ಳ ಸಾಗಾಣಿಕೆಗೆ ಕಡಿವಾಣ ಹಾಕಬೇಕಿದೆ
ಕೊವೀಡ್ ಬಳಿಕ ಅಡಿಕೆಯ ಕಳ್ಳಸಾಗಣೆಗೆ ಕಡಿವಾಣ ಬೀಳದ ಪರಿಣಾಮ ಕನಿಷ್ಟ ಆಮದು ದರ ಹೆಚ್ಚಿಸಿದ ಲಾಭ ಬೆಳೆಗಾರರಿಗೆ ಸಿಕ್ಕಿಲ್ಲ. ಬರ್ಮಾ, ನೇಪಾಳ ಇತ್ಯಾದಿ ದೇಶಗಳಿಂದ ಭಾರತದೊಳಗೆ ಅಡಿಕೆ ಅವ್ಯಾಹತವಾಗಿ ಕಳ್ಳಸಾಗಣೆ ಆಗುತ್ತಿದೆ. ಇದನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕ್ರಮವಹಿಸಿದಲ್ಲಿ ಆಗ ಅಡಿಕೆ ಧಾರಣೆ ಹೆಚ್ಚಳವಾಗಬಹುದು ‘ ಎನ್ನುತ್ತಾರೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ ಪುಚ್ಚಪಾಡಿ.
Winter Health ಚಳಿಗಾಲದಲ್ಲಿ ಪ್ರತಿದಿನ ತುಪ್ಪ ಸೇವಿಸುವುದು ತಪ್ಪಾ ?
ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ. ಎಚ್.ಎಂ.ಕೃಷ್ಣಕುಮಾರ್ ಪ್ರಕಾರ ಮೂರು ತಿಂಗಳುಗಳಿಂದ ಅಡಿಕೆ ಧಾರಣೆ ಸ್ಥಿರವಾಗಿದೆ. ಪ್ರತಿ ಕೆ.ಜಿಗೆ ₹ 5ರಿಂದ ₹ 10ರಷ್ಟು ಮಾತ್ರ ದರ ವ್ಯತ್ಯಯವಾಗುತ್ತಿದೆ. ಸದ್ಯಕ್ಕೆ ಧಾರಣೆ ಹೆಚ್ಚಳವಾಗುವ ಲಕ್ಷಣ ಇಲ್ಲ.
ಮಾರುಕಟ್ಟೆ ತಜ್ಞರು ಏನು ಹೇಳುತ್ತಾರೆ?
ಇನ್ನು. ಮಾರುಕಟ್ಟೆ ತಜ್ಞರ ಅನುಸಾರ ಕೋವಿಡ್ ಕಾಲಘಟ್ಟದಲ್ಲಿ ಇದ್ದಕ್ಕಿದ್ದಂತ ಅಡಿಕೆ ಧಾರಣೆಯಲ್ಲಿ ಹೆಚ್ಚಳ ಕಂಡು ಬಂದಿತ್ತು. ಆ ವೇಳೆ ದೇಶದ ಗಡಿ ಭಾಗದಲ್ಲಿ ಮೈಯೆಲ್ಲ ಕಣ್ಣಾಗಿ ಕಾವಲು ಕಾಯುತ್ತಿದ್ದುದರಿಂದ ವಿದೇಶಿ ಅಡಿಕೆ ದೇಶದೊಳಗೆ ಬರುತ್ತಿರಲಿಲ್ಲ. ಇದು ಧಾರಣೆ ಏರಿಕೆ ಆಗುವಲ್ಲಿ ಮಹತ್ತರ ಪಾತ್ರ ವಹಿಸಿತ್ತು. ತತ್ಪರಿಣಾಮ ಅಡಿಕೆ ಬೆಳೆ ವಿಸ್ತರಣೆಯಾಗಿದೆ.
ಅನೇಕ ಬೆಳೆಗಾರರು ತಮ್ಮಲಿದ್ದ ಜಮೀನಿನಲ್ಲಿ ಅಡಿಕೆ ಸಸಿಗಳನ್ನು ನೆಟ್ಟಿದ್ದಾರೆ. ಪಾರಂಪರಿಕವಾಗಿ ಈ ಹಿಂದೆ ಅಡಿಕೆ ಬೆಳೆಯದ ಪ್ರದೇಶದಲ್ಲೂ ಕಳೆದ 3 ವರ್ಷಗಳಿಂದ ಅಡಿಕೆ . ಮುಂದಿನ ವರ್ಷದಿಂದ ಹೊಸ ಗಿಡಗಳಲ್ಲು ಫಸಲು ಬರಲು ಆರಂಭವಾಗುತ್ತದೆ. ಆಗ ಅಡಿಕೆಯ ಬೇಡಿಕೆ ಇನ್ನಷ್ಟು ಕುಸಿದು ದರ ದರ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎಂಬ ಕಳವಳವನ್ನು ಮಾರುಕಟ್ಟೆ ತಜ್ಞರು ವ್ಯಕ್ತ ಪಡಿಸುತ್ತಿದ್ದಾರೆ
ರಾಜಕೀಯ
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?

ಬೆಳಗಾವಿ: ತನ್ನ ಮೇಲೆ ಎಫ್‌ಐಆರ್ ಹಾಕಿದ ಅರಣ್ಯಾಧಿಕಾರಿಗಳ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Belthangady MLA Harish Poonja) ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ಹಕ್ಕು ಚ್ಯುತಿ ಮಂಡಿಸಿದ್ದಾರೆ. ಇದನ್ನು ಸ್ಪೀಕರ್ ಯು.ಟಿ. ಖಾದರ್ ಅವರು ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ವರ್ಗಾಯಿಸಿದ್ದಾರೆ.
2 ತಿಂಗಳ ಹಿಂದೆ ಬೆಳ್ತಂಗಡಿಯ ಕಳೆಂಜ ಗ್ರಾಮದ ಅಮ್ಮಿನಡ್ಕದಲ್ಲಿ ರೈತರೊಬ್ಬರ ಮನೆಯನ್ನು ಕಿತ್ತು ಹಾಕಲು ಮುಂದಾದಾಗ ಅರಣ್ಯ ಅಧಿಕಾರಿಗಳ ಕ್ರಮವನ್ನು ಶಾಸಕ ಹರೀಶ್ ಪೂಂಜಾ ರೈತರ ಪರ ನಿಂತಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೂಂಜಾ ಮದ್ಯೆ ಮಾತಿನ ಚಕಮಕಿ ನಡೆದಿತ್ತು.ಇದನ್ನೆ ಮುಂದಿಟ್ಟು ಅರಣ್ಯ ಅಧಿಕಾರಿಗಳು ಪುಂಜಾ ವಿರುದ್ದ ಎಫ್‌ಐಆರ್ ದಾಖಲಿಸಿದ್ದರು.
ಈ ಎಫೈ ಆರ್ ವಿರುದ್ದ ಆಕ್ರೋಶ ಹೊರಹಾಕಿರುವ ಹರೀಶ್ ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ತಮ್ಮ ಹಕ್ಕಿಗೆ ಚ್ಯುತಿ ತರಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಎಫ್‌ಐಆರ್ ದಾಖಲು ಮಾಡಿದ ಅಧಿಕಾರಿಗಳ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ್ದಾರೆ.
ವಿಧಾನಸಭಾ ಕಲಾಪದಲ್ಲಿ ವಿರೋಧ ಪಕ್ಷದ ಸದಸ್ಯರು ಹಕ್ಕು ಚ್ಯುತಿ ಮಂಡಿಸಲು ಅವಕಾಶ ನೀಡುವಂತೆ ಕೋರಿದರು. ಇದಕ್ಕೆ ಜೆಡಿಎಸ್ ಸದಸ್ಯರು ಬೆಂಬಲ ನೀಡಿದ್ದಾರೆ . ಈ ಬಗ್ಗೆ ಸುನೀಲ್ ಕುಮಾರ್ ಮಾತನಾಡಿ ಬೆಳ್ತಂಗಡಿ ಶಾಸಕರ ಹಕ್ಕುಚ್ಯುತಿ ಮಂಡನೆ ಮಾಡಬೇಕಿದೆ. ಅರಣ್ಯ ಇಲಾಖೆಯವರು ಮನೆ ತೆರವು ಮಾಡಲು ಹೋಗಿದ್ದರು. ಈ ವೇಳೆ ಶಾಸಕರಿಗೆ ಹಕ್ಕುಚ್ಯುತಿ ಆಗಿದೆ. ಸದನದಲ್ಲಿ ಮಾತನಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಆದರೆ, ಅವಕಾಶ ಕೊಡದಿದ್ದಕ್ಕೆ ಸದನದಲ್ಲಿ ಗದ್ದಲ ಮುಂದುವರಿದಿತ್ತು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಮಧ್ಯ ಪ್ರವೇಶ ಮಾಡಿ, ನಾನು ಬರಗಾಲ ಬಗ್ಗೆ ತಡವಾಗಿ ಚರ್ಚೆ ಮಾಡುತ್ತೇನೆ. ಈಗ ಶಾಸಕರಿಗೆ ಹಕ್ಕುಚ್ಯುತಿ ಮಂಡನೆ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು
. ಆದರೆ ಈ ಮನವಿಯನ್ನು ನಿರಾಕರಿಸಿದ ಸ್ಪೀಕರ್ ಯು.ಟಿ. ಖಾದರ್, ನಾಳೆ ಬೆಳಗ್ಗೆ ಅವಕಾಶ ನೀಡುತ್ತೇನೆ. ಈಗ ಬರಗಾಲ ಬಗ್ಗೆ ಚರ್ಚೆ ನಡೆಯಲಿ ಎಂದು ಮನವಿ ಮಾಡಿದರು. ಆದರೂ ಬಿಜೆಪಿ ಸದಸ್ಯರು ಪಟ್ಟು ಬಿಡದೆ ಈಗಲೇ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಶಾಸಕನ ರಕ್ಷಣೆ ನಿಮ್ಮ ಜವಾಬ್ದಾರಿಯಾಗಿದೆ. ಹಕ್ಕು ಚ್ಯುತಿ ಪಡೆದುಕೊಂಡು ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಈಗಲೇ ಹಕ್ಕುಚ್ಯುತಿ ಸಮಿತಿಗೆ ರೆಫರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್ ರವರು ಕ್ಯಾಬಿನೆಟ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಕೇಸ್ ಅನ್ನು ವಾಪಸ್ ತೆಗೆದುಕೊಳ್ಳುತ್ತೀರಿ. ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲು ಮಾಡಿಕೊಳ್ಳುತ್ತೀರಿ. ಇದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರ ಒತ್ತಡಕ್ಕೆ ಮಣಿದ ಸ್ಪೀಕರ್ ಯು.ಟಿ. ಖಾದರ್, ಹಕ್ಕುಚ್ಯುತಿ ಮಂಡನೆ ಪ್ರಸ್ತಾಪಕ್ಕೆ ಅವಕಾಶ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಧರಣಿ ವಾಪಸ್ ಪಡೆದುಕೊಂಡರು.
ಆದರೆ ಹಕ್ಕುಚ್ಯುತಿಗೆ ಪ್ರಸ್ತಾಪಕ್ಕೆ ಅವಕಾಶ ಕೊಟ್ಟಿದ್ದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬರದ ಚರ್ಚೆ ನಡುವೆ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಅವಕಾಶ ಏಕೆ ಎಂದು ಪ್ರಶ್ನೆ ಮಾಡಿದರು. ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಲಿಂಗೇಗೌಡ ಆಕ್ಷೇಪ ವ್ಯಕ್ತಪಡಿಸಿದರು.
ಈ ವೇಳೆ ಶಾಸಕರ ಹಕ್ಕಿಗೆ ಚ್ಯುತಿ ಮಾಡಲು ಬಿಜೆಪಿ ಮುಂದಾದಾಗ ಅರಣ್ಯ ಅಧಿಕಾರಿಗಳ ಪರವಾಗಿ ಈಶ್ವರ್ ಖಂಡ್ರೆ ನಿಂತುಕೊಂಡರು. ಇದರಿಂದ ಬಿಜೆಪಿ ಶಾಸಕರು ಕೆರಳಿ ಕೆಂಡವಾದರು. “ಇದು ಅಧಿಕಾರಿಗಳ ರಾಜ್ಯವೇ? ಒಬ್ಬ ಶಾಸಕನ ಬಳಿ ಡಿಎಫ್‌ಒ ಮುಚ್ಚಳಿಕೆ ಬರಿಸಿಕೊಳ್ಳುತ್ತಾನೆ ಎಂದರೆ ಈ ವಿಧಾನಸಭೆ, ಶಾಸಕರು ಯಾಕೆ ಇರಬೇಕು? ಇದು ಅಧಿಕಾರಿಗಳ ರಾಜ್ಯವೇ?” ಎಂದು ಆರ್. ಅಶೋಕ್ ಆಕ್ರೋಶ ಹೊರಹಾಕಿದರು
ಈ ವಿಚಾರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ :ಮಾನವ – ಕಾಡು ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ. ನಗರಕ್ಕೆ ಕಾಡು ಪ್ರಾಣಿಗಳು ಬರುತ್ತಿವೆ. ಇದಕ್ಕೆ ಯಾರು ಹೊಣೆ? ಅರಣ್ಯ ಅತಿಕ್ರಮಣವಾದರೆ ಈ ಸಮಸ್ಯೆ ಸೃಷ್ಟಿಯಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅತಿಕ್ರಮಣ ಸಮರ್ಥನೆ ಮಾಡಿದರೆ ಅರಣ್ಯ ನಾಶವಾಗುತ್ತದೆ ಎಂದು ಹೇಳಿದರು.
ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್. ಅಶೋಕ್ ಅರಣ್ಯ ರಕ್ಷಣೆ ಮಾಡುವುದರ ಪರವಾಗಿ ನಾವೂ ಇದ್ದೇವೆ. ಮಾನವ ಕಾಡು ಪ್ರಾಣಿ ಸಂಘರ್ಷ ಸಾಮಾನ್ಯವಾಗಿದೆ. ಅರಣ್ಯ ಒತ್ತುವರಿ ಜಮೀನು ರೈತರಿಗೆ ಕೊಡಬೇಕು ಎಂದು ಸಾಕಷ್ಟು ಹೋರಾಟ ನಡೆದಿದೆ. ಸಂಗಮೇಶ್ ವಿರುದ್ಧ ಹಕ್ಕುಚ್ಯುತಿ ಆಗಿದೆ ಎಂದು ಆರೋಪ ಬಂದಿತ್ತು. ನಾವು ಕೂಡಲೇ ಹಕ್ಕು ಬಾಧ್ಯತಾ ಸಮಿತಿಗೆ ನೀಡಿದ್ದೇವೆ. ಅಧಿಕಾರಿಗಳನ್ನು ಕೇಳುವವರು ಹೇಳುವವರು ಯಾರೂ ಇಲ್ಲದಂತಾಗಿದೆ. ಶಾಸಕರ ಮೇಲೆ ಎಫ್ಐಆರ್ ಹಾಕುತ್ತಾರೆ ಎಂದರೆ ಏನು ಅರ್ಥ ಬರುತ್ತದೆ? ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಹಾಗೂ ಕೇಸ್ ವಾಪಸ್ ಪಡೆಯಿರಿ ಎಂದು ಆಗ್ರಹಿಸಿದರು.
ಬಳಿಕ ಸ್ಪೀಕರ್ ಯು.ಟಿ. ಖಾದರ್, ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ನಿರ್ಣಯವನ್ನು ರವಾನಿಸಿದ್ದಾರೆ.
ಬಿಗ್ ನ್ಯೂಸ್
ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ಚೆಕ್ ವಿತರಣೆ : ಮೊತ್ತ ತಾಯಿ-ಪತ್ನಿಗೆ ಸಮಪಾಲು ಮಾಡಿದ ಸರ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದಂತೆ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ಅವರ ಕುಟುಂಬದ ಸದಸ್ಯರಿಗೆ ತಲಾ 25 ಲಕ್ಷದಂತೆ ವಿಭಾಗ ಮಾಡಿ ನೀಡಿದರು. 25 ಲಕ್ಷ ತಾಯಿಗೆ ಹಾಗೂ 25 ಲಕ್ಷ ಪತ್ನಿ ಹೆಸರಿಗೆ ನೀಡಿದರು.
ಜಿಲ್ಲಾಧಿಕಾರಿ ದಯಾನಂದ್ ಅವರು ಚೆಕ್ ವಿತರಿಸಿದರು.ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ನಿರ್ದೇಶಕರಾದ ಶಶಿಧರ್ ಅವರು ಉಪಸ್ಥಿತರಿದ್ದರು. ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಎನ್ಕೌಂಟರ್ ಸಂದರ್ಭ ಮಂಗಳೂರಿನಲ್ಲಿ ವಿದ್ಯಾಭ್ಯಾಸ ಪೂರೈಸಿದ ಎಂ.ಆರ್.ಪಿ.ಎಲ್ ನಿವೃತ್ತ ಎಂಡಿ ಪುತ್ರ ವೆಂಕಟೇಶ್ ಪುತ್ರ ಕ್ಯಾ.ಪ್ರಾಂಜಲ್ ಹುತಾತ್ಮರಾಗಿದ್ದರು.
ನಿನ್ನೆಯಷ್ಟೇ ಚೆಕ್ ವಿಷಯದಲ್ಲಿ ಟ್ರೋಲ್ ಗೆ ಒಳಗಾದ ಸಿದ್ದರಾಮಯ್ಯನವರು ಇಂದೇ ಚೆಕ್ ವಿತರಿಸುವ ವ್ಯವಸ್ಥೆ ಮಾಡಿದ್ದರು.
ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ.ಯೋಧರ ಸಾವು – ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ.
ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದರು.
-
ಅಪರಾಧ9 hours ago
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ
-
ಬಿಗ್ ನ್ಯೂಸ್14 hours ago
ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ಚೆಕ್ ವಿತರಣೆ : ಮೊತ್ತ ತಾಯಿ-ಪತ್ನಿಗೆ ಸಮಪಾಲು ಮಾಡಿದ ಸರ್ಕಾರ
-
ಕ್ರೀಡೆ13 hours ago
Bomb Threat ಪ್ರಿಯಕರ ಕೊಟ್ಟ ಐಡಿಯಾ ನಂಬಿ ಗಂಡನ ಜೈಲಿಗೆ ಕಳುಹಿಸಲು ಆತನ ಮೊಬೈಲ್ʼನಿಂದ ಹೆಂಡತಿ ಕಳುಹಿಸಿದಳು ಬೆದರಿಕೆ ಮೆಸೇಜ್ – ಆದರೇ ಮುಂದೇನಾಯಿತು ?
-
ಕ್ರೀಡೆ11 hours ago
Jay shah: ಜಯ್ ಶಾಗೆ ಸ್ಪೋರ್ಟ್ಸ್ ಬ್ಯುಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಯ ಗರಿ – ಬಿಸಿಸಿಐ ಕಾರ್ಯದರ್ಶಿಗೆ ಈ ಗೌರವ ಸಿಕ್ಕಿದ್ದು ಯಾಕೆ ಗೊತ್ತೆ ?
-
ರಾಜಕೀಯ11 hours ago
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?
-
ಸಾಮಾಜಿಕ ಮಾಧ್ಯಮ18 hours ago
Dasara Elephant Arjun Dies ಅರ್ಜುನ ಸಾವಿನ ಸುತ್ತ ಹಲವು ಅನುಮಾನ – ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ – ಅದರಲ್ಲಿದೆ ಗುಂಡೇಟಿನ ವಿಚಾರ
-
ಸಿನೆಮಾ1 day ago
Animal Box Office collection ರಣ್ ಬೀರ್ – ರಶ್ಮಿಕಾ ಜೋಡಿ ಕಮಾಲ್ : ಅನಿಮಲ್ ಬಾಕ್ಸ್ ಆಫೀಸ್ನಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?
-
ಚಿನ್ನ-ಬೆಳ್ಳಿ ದರ19 hours ago
Gold Rate Hike:ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ : ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ದರ ಸಾರ್ವಕಾಲಿಕ ಜಿಗಿತ – ಮುಂದಿನ ದಿನಗಳಲ್ಲಿ ರೇಟ್ ಹೇಗಿರಲಿದೆ?