ಬೆಂಗಳೂರು: ‘ಬಾಬಾ ಸಾಹೇಬ್ ಅಂಬೇಡ್ಕರ್ ( Ambedkar) ಅವರನ್ನು ಕಾಂಗ್ರೆಸ್ ನವರು ಚುನಾವಣೆಯಲ್ಲಿ ಸೋಲಿಸಿದರು’ ಎಂದು ಬಿಜೆಪಿ (@BJP4Karnataka) ವಾಗ್ದಾಳಿ ನಡೆಸಿದೆ. ಇದಕ್ಕೆ ಕಾಂಗ್ರೇಸ್ ನಾಯಕ ಬಿ.ಕೆ ಹರಿಪ್ರಸಾದ್, ಅಂಬೇಡ್ಕರ್ ನ್ನು ಹಿಂದೂ ವಿರೋಧಿ ಎಂದು ಬಿಂಬಿಸಿದ್ದು ಸುಳ್ಳಾ..? ಎಂದು ಪ್ರಶ್ನಿಸಿದ ಅವರು, ಅಂಬೇಡ್ಕರ್ ಮನುಷ್ಯ ವಿರೋಧಿ ಮನುಸ್ಮೃತಿ ಸುಟ್ಟ ಸಿಟ್ಟಿಗೆ ಇಂದು ಅಂಬೇಡ್ಕರ್ ಕೊಟ್ಟ ಸಂವಿಧಾನ ವಿರೋಧಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ಬಿಜೆಪಿ, ‘ಬಾಬಾ ಸಾಹೇಬರಿಗೆ ಕಾಂಗ್ರೆಸ್ ಮಾಡಿದ ಅನ್ಯಾಯದ ಇತಿಹಾಸವೇ ಇದೆ’ ಎಂದು ಕಿಡಿಕಾರಿದೆ.
”ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು. ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೆ ಭೂಮಿ ನೀಡಲು ನಿರಾಕರಿಸಿದರು. ಅಂಬೇಡ್ಕರ್ ಅವರನ್ನು ಬಿಟ್ಟು, ತಮಗೆ ತಾವೇ ಭಾರತ ರತ್ನ ಘೋಷಿಸಿದರು. ತುರ್ತುಪರಿಸ್ಥಿತಿ ಹೇರಿ ಸಂವಿಧಾನ ಆಶಯಕ್ಕೆ ಕೊಳ್ಳಿ ಇಟ್ಟರು’ ಎಂದು ಬಿಜೆಪಿ ಆರೋಪ ಮಾಡಿದೆ.
”ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರ ವಿಧಿ ತೆಗೆಯಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅಂದೇ ಹೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷ ಅವರ ಆಶಯವನ್ನು ಗೌರವಿಸದೇ ಆರ್ಟಿಕಲ್ 370 ರ ವಿಧಿಯನ್ನು 70 ವರ್ಷ ಮುಂದುವರಿಸಿದರು. ಬಾಬಾ ಸಾಹೇಬರ ಆ ಆಶಯವನ್ನು ನನಸು ಮಾಡಿದ್ದು ಮೋದಿ ಸರ್ಕಾರ” ಎಂದು ಹೇಳಿದೆ.
”ಕಾಂಗ್ರೆಸ್ ಸಂವಿಧಾನ ವಿರೋಧಿ ಎಂಬ ಕಾರಣಕ್ಕೇ ಅಂಬೇಡ್ಕರ್ ಕಾಂಗ್ರೆಸ್‌ನ್ನು ತ್ಯಜಿಸಿದ್ದು. “ಕಾಂಗ್ರೆಸ್ ಸೇರುವುದೆಂದರೆ, ಅದು ಆತ್ಮಹತ್ಯೆ ಮಾಡಿಕೊಂಡಂತೆ” ಎಂಬ ಅಂಬೇಡ್ಕರ್ ಮಾತು ಇಲ್ಲಿ ಉಲ್ಲೇಖಾರ್ಹ. ನಮ್ಮನ್ನೇ ಬಿಟ್ಟ ನಿಮಗೆ ಸೋಲೇ ಖಚಿತ ಎಂದು ಸಂವಿಧಾನ ಶಿಲ್ಪಿಯ ವಿರುದ್ಧ ಕಾಂಗ್ರೆಸ್ ಕುತಂತ್ರ ಮಾಡಿತ್ತು” ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
”ನೆಹರೂ ಸಮಾಧಿಗೆ 52 ಎಕರೆಗೂ ಹೆಚ್ಚು ಜಾಗ ಕೊಟ್ಟ ಕಾಂಗ್ರೆಸ್‌ಗೆ ಡಾ||ಅಂಬೇಡ್ಕರ್ ಅವರ ಶವಸಂಸ್ಕಾರಕ್ಕೂ 6 ಅಡಿ ಜಾಗವನ್ನು ದೆಹಲಿಯಲ್ಲಿ ಬೇಕಂತಲೇ ಕೊಡಲಿಲ್ಲ. ದೇಶದ ಬಡವರಿಗೆ ಬದುಕುವ ಹಕ್ಕು ಕೊಟ್ಟ ಅಂಬೇಡ್ಕರರಿಗೆ ಕಾಂಗ್ರೆಸ್ ಅಂತಿಮ ಸಂಸ್ಕಾರವನ್ನು ಗೌರವದಿಂದ ನಡೆಸಲೂ ಬಿಡದೆ ಅವಮಾನಿಸಿದ್ದನ್ನು ಜನ ಮರೆತಿಲ್ಲ” ಎಂದು ಹೇಳಿದೆ.
ಬಿ.ಕೆ ಹರಿಪ್ರಸಾದ್ ಟ್ವೀಟ್ ಮಾಡಿ , ಬಾಬಾ ಸಾಹೇಬರ ಹೆಸರಿನಲ್ಲಿ ಬಿಜೆಪಿ ಮತ್ತು ಸಂಘಪರಿವಾರ ಇತಿಹಾಸದ ಸತ್ಯಗಳನ್ನ ಮರೆಮಾಚಿ, ಮೊಸಳೆ ಕಣ್ಣೀರು ಸುರಿಸುತ್ತಿರುವುದು ನಾಚಿಕೆಗೇಡು.
ವಾಟ್ಸಪ್ ಯೂನಿವರ್ಸಿಟಿಯಲ್ಲಿ ಉತ್ಪಾದಿಸಿದ ಸುಳ್ಳುಗಳನ್ನ ಹರಿ ಬಿಟ್ಟಿರುವುದು, ಅಂಬೇಡ್ಕರ್ ಪರಿನಿರ್ವಾಣ ದಿನದಂದು ಬಾಬಾ ಸಾಹೇಬರಿಗೆ ಮಾಡಿದ ಅವಮಾನವಲ್ಲವೇ BJP Karnataka ?
ಜಗತ್ತಿಗೆ ಶ್ರೇಷ್ಠವಾದ ಸಂವಿಧಾನವನ್ನ ಕೊಡಲು ಬಾಬಾ ಸಾಹೇಬರಿಗೆ ಅವಕಾಶ ಮಾಡಿಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ.
ಒಂದಿಷ್ಟು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಪ್ರಧಾನಿ ನೆಹರೂ ಸಂಪುಟದಲ್ಲಿ ಕಾನೂನು ಸಚಿವರಾಗಲು ಅವಕಾಶ ಮಾಡಿಕೊಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಮೊಸಳೆ ಕಣ್ಣೀರು ಸುರಿಸುತ್ತಿರುವ ಬಿಜೆಪಿಯಲ್ಲ.
ಸಾರ್ವತ್ರಿಕ ಚುನಾವಣೆಯಲ್ಲಿ ಬಾಬಾ ಸಾಹೇಬರ ವಿರುದ್ಧ ಕಾಂಗ್ರೆಸ್ ಪಕ್ಷ ಸ್ಪರ್ಧಿಸಿದ್ದು ನಿಜಾ.ಅದೊಂದು ಚುನಾವಣಾ ಪ್ರಕ್ರಿಯೆ.
ಆದ್ರೆ ಇಂದಿನ Bharatiya Janata Party (BJP) ಯ ಮುಖವಾಡವೇ ಆಗಿದ್ದ ಹಿಂದೂ ಮಹಾಸಭಾ,ಬಾಬಾ ಸಾಹೇಬರ ವಿರುದ್ಧ ಸ್ಪರ್ಧಿಸಿದ್ದು ಸುಳ್ಳಾ?
ಬಾಬಾ ಸಾಹೇಬರಿಗೆ ಮತ ನೀಡಬೇಡಿ,ಹಿಂದೂ ವಿರೋಧಿಯೆಂದು ಪ್ರಚಾರ ಮಾಡಿದ್ದು ಸುಳ್ಳಾ?
ಮನುವಾದಿ ಬಿಜೆಪಿಯ ಮುಖವಾಡವನ್ನ ಬಾಬಾ ಸಾಹೇಬರು ಅಂದೇ ಮನುಸ್ಮೃತಿಯನ್ನ ಸುಡುವ ಮೂಲಕ ದೇಶಕ್ಕೆ ಸಾರಿದ್ದು ಸುಳ್ಳಾ?
ಮನುಷ್ಯ ವಿರೋಧಿ ಮನುಸ್ಮೃತಿಯನ್ನ ಸುಟ್ಟ ಸಿಟ್ಟಿಗೆ ಬಿಜೆಪಿ ಇಂದು ಸಂವಿಧಾನವನ್ನೇ ಬದಲಾವಣೆ ಮಾಡಲು ಬಂದಿದ್ದೇವೆ ಎಂದು ಬಹಿರಂಗವಾಗಿ ಹೇಳುತ್ತಿರುವುದು ನಿಜಾ ಅಲ್ವಾ BJP KARNATAKA ?
ಬಾಬಾ ಸಾಹೇಬರ ಮಾನವೀಯ ಸಿದ್ದಾಂತಕ್ಕೂ ಬಿಜೆಪಿ ಮನುವಾದಿ ಸಿದ್ದಾಂತಕ್ಕೆ ಎತ್ತಿಂದೆತ್ತಣ ಸಂಬಂಧ?
ಇತಿಹಾಸದ ಸತ್ಯಗಳನ್ನ ಮರೆಮಾಚಿ, ಬಾಬಾ ಸಾಹೇಬರ ಹೆಸರಿಗೆ ಮಸಿ ಬಳಿಯುವುದನ್ನ ಬಿಜೆಪಿ ನಿಲ್ಲಿಸದಿದ್ದರೆ, ಜನರು ತಕ್ಕ ಪಾಠ ಕಲಿಸುವುದು ಗ್ಯಾರೆಂಟಿ ಎಂದು ಬಿ.ಕೆ ಹರಿಪ್ರಸಾದ್ ಟ್ವೀಟ್ ಮಾಡಿದ್ದಾರೆ.