ಕಾಸರಗೋಡು: ಡಿ 6 : ಕಾಲೇಜು ವಿದ್ಯಾರ್ಥಿನಿ ರೈಲು ಹಳಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್-ಶ್ಯಾಮಲ ದಂಪತಿ ಪುತ್ರಿ, ಮಂಗಳೂರು ಅಲೋಶಿಯಸ್ ಕಾಲೇಜಿನ ಬಯೋ ಕೆಮಿಸ್ಟ್ರಿ ಎಂಎಸ್ಸಿ ವಿದ್ಯಾರ್ಥಿನಿ ಅಂಜನ .ಎಸ್ (22) ಸಾವನ್ನಪ್ಪಿದ ದುರ್ದೈವಿ.
ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದವಳು, ಬೆಳಿಗ್ಗೆ ಎದ್ದು ನೋಡಿದಾಗ ಮನೆಯಲ್ಲಿರಲಿಲ್ಲ ಎನ್ನಲಾಗಿದೆ. ಬಳಿಕ ಮನೆಯವರು ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರವಿರುವ ರೈಲು ಹಳಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಮೊಬೈಲ್ ಫೋನ್ ಕೂಡಾ ಅಲ್ಲೇ ಪಕ್ಕ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಾಹಿತಿ ಪಡೆದ ಕಾಸರಗೋಡು ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದರು. ಮೃತದೇಹವನ್ನು ಬಳಿಕ ಜನರಲ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆಗೊಳಪಡಿಸಲಾಯಿತು. ಮೃತಳು ಹೆತ್ತವರ ಹೊರತಾಗಿಸಹೋದರ ವಿಶ್ಲೇಶ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾಳೆ.