Ad Widget

Burkha dance ಮಂಗಳೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರಿಂದ ಬುರ್ಖಾ ಧರಿಸಿ ಐಟಂ ಸಾಂಗ್‌ಗೆ ನೃತ್ಯ – ಆಕ್ರೋಶದ ಬಳಿಕ ವಿದ್ಯಾರ್ಥಿಗಳು ಸಸ್ಪೆಂಡ್‌

WhatsApp Image 2022-12-09 at 11.31.25
Ad Widget

Ad Widget

Ad Widget

ಮಂಗಳೂರು:   ಮಂಗಳೂರಿನ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್‌ಗೆ ನರ್ತಿಸಿದ್ದಾರೆಂಬ  ಆರೋಪದಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.ಮಂಗಳೂರಿನ ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿತ್ತು.

Ad Widget

Ad Widget

Ad Widget

Ad Widget

Ad Widget

  ಕಾಲೇಜಿನಲ್ಲಿ ಬುಧವಾರ ಸಂಜೆ ಕಾಲೇಜಿನ ವಿದ್ಯಾರ್ಥಿ ಘಟಕ   ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಾದ ಬಳಿಕ ಬುರ್ಖಾ ಧರಿಸಿ ಹಿಂದಿ ಐಟಂ ಸಾಂಗ್ ಗೆ ಮುಸ್ಲಿಂ ವಿದ್ಯಾರ್ಥಿನಿಯರ ಡ್ಯಾನ್ಸ್‌ ಮಾಡಿದ್ದರು. ಈ  ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಡ್ಯಾನ್ಸ್ ಗೆ ಅವರದೇ ಸಮುದಾಯದವರಿಂದ ತೀವ್ರ ಆಕ್ರೋಶ ಎದುರಾಗಿತ್ತು ಎನ್ನಲಾಗಿದೆ.

Ad Widget

Ad Widget

Ad Widget

Ad Widget

Ad Widget

 ಇದನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳನ್ನು  ಸಸ್ಪೆಂಡ್ ಗೊಳಿಸಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ಸುಧೀರ್ ಆದೇಶ ಮಾಡಿದ್ದಾರೆ.

ಕಾಲೇಜಿನ ಪ್ರಭಾರ ಪ್ರಾಂಶುಪಾಲರು ಪ್ರತಿಕ್ರಿಯೆ ನೀಡಿ, ಕಾಲೇಜಿನ ಅಧಿಕೃತ ಕಾರ್ಯಕ್ರಮದ ಬಳಿಕ ನೃತ್ಯ ಮಾಡಿದ್ದಾರೆ. ಕಾಲೇಜು ಆವರಣದಲ್ಲಿ ಯಾವುದೇ ರೀತಿ ಆಕ್ಷೇಪಾರ್ಹ ಹಾಗೂ ಸಮುದಾಯಗಳ ನಡುವೆ ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ ಎಂದು ಪ್ರತಿಕ್ರಿಯಿಸಿರುವುದಾಗಿ ವರದಿಯಾಗಿದೆ.

Ad Widget

Ad Widget

Ad Widget

Ad Widget
Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: