ಸುಬ್ರಹ್ಮಣ್ಯ: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ನಾಯಕ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj Kumar) ಡಿ.9ರಂದು ಭೇಟಿ ನೀಡಿದರು.
ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ಶಿವರಾಜ್ ಕುಮಾರ್ ಅವರನ್ನು ಬರಮಾಡಿಕೊಳ್ಳಲಾಯಿತು. ದೇವಳದ ಸಮಿತಿಯವರು, ಅಧಿಕಾರಿಗಳು, ಸಿಬಂದಿಗಳು ಉಪಸ್ಥಿತರಿದ್ದರು.
ಬಳಿಕ ನಟ ಶಿವರಾಜ್ ಕುಮಾರ್ ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ, ಮಠಾಧೀಶ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು. ಶ್ರೀಗಳು ಶಿವರಾಜ್ ಕುಮಾರ್ ಅವರನ್ನು ಗೌರವಿಸಿದರು. ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ ರಾಜ್‌ಕುಮಾರ್, ನಿವೇದಿತ ರಾಜ್‌ಕುಮಾರ್ ಜತೆಗಿದ್ದರು.