Ad Widget

Lokayuktha Ride | ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆಯಲ್ಲಿ ರಾಜಕೀಯ ಪ್ರಭಾವಿತ ಅಕ್ರಮ ಮರಳು ದಂಧೆ : ಲೋಕಾಯುಕ್ತ ಮೊರೆ ಹೋದ ಜನತೆ : ಮೂರು ಕಡೆ ಏಕಕಾಲದಲ್ಲಿ ದಾಳಿ – 40 ಲಕ್ಷದ ವಸ್ತಗಳು ವಶಕ್ಕೆ : ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸೂಕ್ತ ಕ್ರಮ ಎಂದ ಲೋಕಾಯುಕ್ತ

InShot_20221209_214136525
Ad Widget

Ad Widget

ಬೆಳ್ತಂಗಡಿ : ರಾಜಕೀಯ ಪ್ರಭಾವಿತ ಅಕ್ರಮ ಮರಳು ದಂಧೆಕೋರರ ಜೊತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಣ ಪಡೆದು ಶಾಮಿಲಾಗಿದ್ದಾರೆ ಎಂಬ ದೂರು ಮಂಗಳೂರು ಲೋಕಾಯುಕ್ತ ಇಲಾಖೆಗೆ ಬಂದ ಮೇರೆಗೆ ಲೋಕಾಯುಕ್ತ ಪೊಲೀಸರ ತಂಡ ಡಿ. 8 ರಂದು ಜಿಲ್ಲೆಯ ಮೂರು ತಾಲೂಕಿನ ಮರಳು ಅಡ್ಡೆ ಮೇಲೆ ದಾಳಿ (Lokayuktha Ride) ನಡೆಸಿದೆ.

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು, ಮೂಡಬಿದಿರೆ ತಾಲೂಕು, ಬೆಳ್ತಂಗಡಿ ತಾಲೂಕಿನಲ್ಲಿ ಮೂರು ತಂಡಗಳಾಗಿ ಮಾಡಿಕೊಂಡು ದಾಳಿ ಮಾಡಿದ್ದು ಈ ವೇಳೆ 40 ಲಕ್ಷ ರೂಪಾಯಿ ವೆಚ್ಚದ ಟಿಪ್ಪರ್, ದೋಣಿ ವಶಪಡಿಸಿಕೊಂಡು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ, ಪುದುವೆಟ್ಟು, ಕಕ್ಕಿಂಜೆ ಮುಂಡಾಜೆ ,ವೇಣೂರು ಕಡೆಗಳಲ್ಲಿ ಲೋಕಾಯಕ್ತ ಡಿವೈಎಸ್ಪಿ ಚೆಲುವರಾಜ್ ಮತ್ತು ತಂಡ ದಾಳಿ ಮಾಡಿದ್ದು. ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯ ಹೊಳೆ ಬದಿ ಮರಳು ದಂಧೆ ನಡೆಸುತ್ತಿದ್ದಾಗ ಮರಳು ತುಂಬಿದ್ದ ಎರಡು ಟಿಪ್ಪರ್ ವಾಹನ ಮತ್ತು ಒಂದು ದೋಣಿ ವಶಕ್ಕೆ ಪಡೆದು ಧರ್ಮಸ್ಥಳ ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ.

ಮೂಡಬಿದಿರೆ ತಾಲೂಕಿನ ಎಡಪದವು, ಕೈಕಂಬ, ಅಡ್ಯಾರು ಸೇರಿದಂತೆ ವಿವಿಧೆಡೆ ಲೋಕಾಯಕ್ತ ಡಿವೈಎಸ್ಪಿ ಕಲಾವತಿ ಮತ್ತು ತಂಡ ದಾಳಿ ಮಾಡಿದ್ದಾರೆ.

Ad Widget

Ad Widget

ಲೋಕಾಯಕ್ತ ದಾಳಿ ವಿಚಾರ ತಿಳಿದು ಹಲವು ಕಡೆಗಳಲ್ಲಿ ಮರಳು ದಂಧೆಕೊರರು ಅಲರ್ಟ್ ಅಗಿ ಮರಳು ಟಿಪ್ಪರ್ ಸಮೇತ ದೋಣಿಗಳನ್ನು ಖಾಲಿ ಮಾಡಿ ಪರಾರಿಯಾಗಿದ್ದು ಅಂತಹ ಅಡ್ಡೆಗಳ ಮೇಲೆ ನಿಗಾ ಇಡಲಾಗುವುದು. ಮುಂದೆ ಮರಳುಗಾರಿಕೆ ಬಗ್ಗೆ ಮಾಹಿತಿ ಬಂದರೆ ಮುಲಾಜಿಲ್ಲದೆ ದಾಳಿ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಬಂಟ್ವಾಳ ತಾಲೂಕಿನ ತುಂಬೆ ಸೇರಿದಂತೆ ವಿವಿಧ ಕಡೆ ಲೋಕಾಯುಕ್ತ ಇನ್ಸೆಕ್ಟರ್ ಅಮಾನುಲ್ಲಾ ಮತ್ತು ತಂಡ ದಾಳಿ ಮಾಡಿದ್ದು ಈ ವೇಳೆ ಒಂದು ಮರಳು ತೆಗೆಯುತ್ತಿದ್ದ ದೋಣಿಯನ್ನು ವಶಕ್ಕೆ ಪಡೆದು ಬಂಟ್ವಾಳ ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ. ಮೂಡಬಿದಿರೆ ತಾಲೂಕಿನ ಎಡಪದವು, ಕೈಕಂಬ, ಅಡ್ಯಾರು ಸೇರಿದಂತೆ ವಿವಿಧೆಡೆ ಲೋಕಾಯಕ್ತ ಡಿವೈಎಸ್ಪಿ ಕಲಾವತಿ ಮತ್ತು ತಂಡ ದಾಳಿ ಮಾಡಿದ್ದಾರೆ.

ಲೋಕಾಯಕ್ತ ದಾಳಿ ವಿಚಾರ ತಿಳಿದು ಹಲವು ಕಡೆಗಳಲ್ಲಿ ಮರಳು ದಂಧೆಕೊರರು ಅಲರ್ಟ್ ಅಗಿ ಮರಳು ಟಿಪ್ಪರ್ ಸಮೇತ ದೋಣಿಗಳನ್ನು ಖಾಲಿ ಮಾಡಿ ಪರಾರಿಯಾಗಿದ್ದು ಅಂತಹ ಅಡ್ಡೆಗಳ ಮೇಲೆ ನಿಗಾ ಇಡಲಾಗುವುದು. ಮುಂದೆ ಮರಳುಗಾರಿಕೆ ಬಗ್ಗೆ ಮಾಹಿತಿ ಬಂದರೆ ಮುಲಾಜಿಲ್ಲದೆ ದಾಳಿ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೀಶ್ ನಿರ್ದೇಶನದಲ್ಲಿ ಡಿವೈಎಸ್ಪಿ ಕಲಾವತಿ, ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ ಅಮನುಲ್ಲಾ ಮತ್ತು ಸಿಬ್ಬಂದಿಗಳು ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Ad Widget

Leave a Reply

Recent Posts

error: Content is protected !!
%d bloggers like this: