ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ,ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್,ಮಂಗಳೂರು ಮಹಾನಗರ ಪಾಲಿಕೆ ,ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಶಾಖೆ ಮಂಗಳೂರು ಇವರ ಆಶ್ರಯದಲ್ಲಿ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಲಂಕಾರಿನ ಕೊಂಡಾಡಿಕೊಪ್ಪ ಶಾಲೆಯ ಶಿಕ್ಷಕ ಜಯಂತ್ ವೈ ಯವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು 800 ಮೀಟರ್ ಮತ್ತು 400 ಮೀಟರ್ ಓಟ ಹಾಗೂ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸರ್ಕಾರಿ ನೌಕರರ ಭವನ ಮಂಗಳೂರಿನಲ್ಲಿ ನಡೆದ ಸಾಂಸ್ಕ್ರತಿಕ ಸ್ಪರ್ಧೆಯಲ್ಲಿ ಜಾನಪದಗೀತೆ ವೈಯಕ್ತಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ,ಗುಂಪು ಸ್ಪರ್ಧೆಯಲ್ಲಿ ತೃತೀಯಾ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿಯಾಗಿದ್ದು,ಶಿಕ್ಷಣ ಇಲಾಖೆಯು ಕೊಡಮಾಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತರಾಗಿರುತ್ತಾರೆ.