ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election) ಹಿನ್ನೆಲೆಯಲ್ಲಿ ಜೆಡಿಎಸ್ 93 ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಇದರಲ್ಲಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಗೆ ಟಿಕೇಟ್
ಘೋಷಣೆಯಾಗಿದೆ.
ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಅನುಮೋದನೆ ಮೇರೆಗೆ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಹೀಗಿದೆ.




2023ನೇ ವಿಧಾನಸಭೆ ಚುನಾವಣೆಯ @JanataDal_S ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪಕ್ಷದ ರಾಜ್ಯ ಅಧ್ಯಕ್ಷರಾದ ಶ್ರೀ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 19, 2022
ಪಕ್ಷದ ಸಂಸದೀಯ ಮಂಡಳಿ ಹಾಗೂ ರಾಷ್ಟೀಯ ಅಧ್ಯಕ್ಷರಾದ ಶ್ರೀ @H_D_Devegowda ಅವರ ಅನುಮೋದನೆ ಮೇರೆಗೆ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. pic.twitter.com/LC1JUel5JX