ಮೂಡುಬಿದ್ರೆ, ಡಿ.24: ಮಂಗಳೂರು: ಮನೆಯೊಂದರಲ್ಲಿ ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡಲಾಗುತ್ತಿರುವ ಮಾಹಿತಿಯನ್ನು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ನೀಡಿದ ಮೇರೆಗೆ ಬೆಳ್ಳಂಬೆಳಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಅಲ್ಲದೇ ವಧೆ ಮಾಡಲು ತಂದಿದ್ದ ನಾಲ್ಕು ಗೋವುಗಳನ್ನು ಹಾಗೂ ಭಾರೀ ಪ್ರಮಾಣದ ದನದ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಆಲಂಗಾರು ಬಳಿ ಡಿ 24 ರಂದು ನಡೆದಿದೆ.
ಆಲಂಗಾರು ನಿವಾಸಿಗಳಾದ ಕ್ಲಾರಿನ್ ಆಲ್ವಿನ್ ಮತ್ತು ಗಿಲ್ಬರ್ಟ್ ಮಿರಾಂಡ ಬಂಧಿತರು. ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬಾತನಿಗೆ ಸೇರಿದ್ದ ಅಕ್ರಮ ಕಸಾಯಿ ಖಾನೆಗೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮುಂಜಾನೆ ನಾಲ್ಕು ಗಂಟೆಯ ಸುಮಾರಿಗೆ ದಾಳಿ ಮಾಡಿದ್ದಾರೆ. ಕಾರ್ಯಕರ್ತರು ತೋಟವನ್ನೆಲ್ಲಾ ಪರಿಶೀಲಿಸಿ ಅಗೆದು ನೋಡಿದಾಗ ದನದ ತಲೆಯ ಭಾಗಗಳು ಪತ್ತೆಯಾಗಿವೆ.
ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಆರೋಪಿಗಳಾದ ಕ್ಲಾರಿನ್ ಅಲ್ವಿನ್ ಹಾಗೂ ಗಿಲ್ಬರ್ಟ್ ಮಿರಾಂದನನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ. ಅಕ್ರಮ ಕಸಾಯಿಖಾನೆಯಲ್ಲಿದ್ದ ಅಪಾರ ಪ್ರಮಾಣದ ದನದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.