ಪುತ್ತೂರು: ಏಕಾಏಕಿ ಬೈಕ್ ಸವಾರ ರಸ್ತೆಗೆ ನುಗ್ಗಿಸಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಡಿ.25ರಂದು ನಡೆದಿದೆ.
ಕಾಣಿಯೂರು-ಸುಬ್ರಹ್ಮಣ್ಯ ರಸ್ತೆಯ ಮುಕ್ವೆ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಕಾಣಿಯೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ರಿಕ್ಷಾಕ್ಕೆ ಮುಕ್ವೆಯಲ್ಲಿ ಮತ್ತೊಂದು ರಸ್ತೆಯಿಂದ ಬಂದ ಬೈಕ್ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ರಿಕ್ಷಾವೂ ಪಲ್ಟಿಯಾಗಿದೆ. ಬೈಕ್ ಸವಾರ ಚಿತ್ರದುರ್ಗ ಮೂಲದ ವೀರೇಶ್ (38 ವ.) ಎಂಬವರು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಿಕ್ಷಾ ಚಾಲಕ ಚಾರ್ವಾಕ ನಿವಾಸಿ ಗಣೇಶ್ ಗಾಯಗೊಂಡು ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪುತ್ತೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.