Ad Widget

Mangalore | ಮಂಗಳೂರು: ಕತ್ತಲಲ್ಲಿ ಸ್ಕೂಟಿ ಇಟ್ಟು ಬಂದ ದುಷ್ಕರ್ಮಿಗಳಿಂದ ಅಂಗಡಿ ಮಾಲಕನಿಗೆ ಚೂರಿ ಇರಿತ – ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು : ಮಂಗಳೂರು ಸುತ್ತಮುತ್ತ ನಿಷೇದಾಜ್ಞೆ : ಮಧ್ಯಮಾರಟ, ಸಭೆ, ಮೆರವಣಿಗೆಗೆ ಬ್ರೇಕ್

IMG-20221225-WA0008
Ad Widget

Ad Widget

Ad Widget

ಸುರತ್ಕಲ್: ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ನಡೆದಿದೆ. ಆದರೆ ಆಸ್ಪತ್ರೆಗೆ ತಲುಪಿದಾಗ ವ್ಯಕ್ತಿ ಮೃತಪಟ್ಟಿದ್ದಾರೆ. ಇರಿತಕ್ಕೊಳಗಾದವರನ್ನು ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ. ಇದೀಗ ಮಂಗಳೂರಿನ (Mangalore) ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

ಮೃತ ಜಲೀಲ್ ಅವರು ನೈತಂಗಡಿಯಲ್ಲಿ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿ ನಡೆಸುತ್ತಿದ್ದಾರೆ. ಅಂಗಡಿಯಲ್ಲಿ ಕುಳಿತಿದ್ದ ಸಂದರ್ಭ ಅಂಗಡಿಯ ಪಕ್ಕದ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಬಂದ ಇಬ್ಬರಿದ್ದ ತಂಡ ಅಂಗಡಿಯ ಪಕ್ಕದ ಕತ್ತಲಿನ ಪ್ರದೇಶದಲ್ಲಿ ಸ್ಕೂಟಿ ಇಟ್ಟು ಬಂದು ಏಕಾಏಕಿ ಚೂರಿ ಇರಿದು ಪರಾರಿಯಾಗಿದ್ದಾರೆ. ಈ ವೇಳೆ ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅವರ ಅಂಗಡಿಯ ಪಕ್ಕದ ದಿನಸಿ ಅಂಗಡಿಯ ಫಾರೂಕ್ (ಉಮರಬ್ಬ) ಎಂಬವರ ಅಂಗಡಿಯ ಬಳಿಗೆ ಓಡಿ ಬಂದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

Ad Widget

ದುಷ್ಕರ್ಮಿಗಳು ಜಲೀಲ್ ಅವರ ಎದೆಯ ಭಾಗ ಮತ್ತು ಬೆನ್ನಿಗೆ ಹರಿತವಾದ ಚೂರಿಯಿಂದ ಇರಿದಿದ್ದು, ಅವರ ಬೆನ್ನಿನಲ್ಲಿದ್ದ ಚೂರಿಯನ್ನು ತೆಗೆದ ಫಾರೂಕ್ ಅವರು ತಕ್ಷಣ ಕಾರಿನಲ್ಲಿ ಮುಕ್ಕದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ಜಲೀಲ್ ಮೃತಪಟ್ಟರೆಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಎಸಿಪಿಗಳು, ಸಿಸಿಬಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಘಟನೆಯ ಬಳಿಕ ಜಲೀಲ್ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮರಣೋತ್ತರ ಪರೀಕ್ಷೆಗಾಗಿ ನಗರದ ಎಜೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.

ಸೆಕ್ಷನ್ 144:

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಡಿ.27 ರ ಮುಂಜಾನೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಇರಲಿದೆ.

ಸುರತ್ಕಲ್, ಪಣಂಬೂರು, ಕಾವೂರು, ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಇರಲಿದೆ ಎಂದು ಮಂಗಳೂರು ನಗರ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭ ಮಧ್ಯ ಮಾರಾಟ , 5 ಜನಕ್ಕಿಂತ ಹೆಚ್ಚು ಜನ ಸೇರುವುದು, ಮೆರವಣಿಗೆ ಎಲ್ಲಾ ನಿಷೇಧಿಸಲಾಗಿದೆ.

ತಾರತಮ್ಯವಿಲ್ಲದೆ ಪರಿಹಾರ ಕೊಡಿ:
ಅನೈತಿಕ ಪೊಲೀಸ್ ಗಿರಿಯ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವಂತೆ ನಾವು ಒತ್ತಾಯಿಸಿದ್ದೆವು ಎಂದು ಹತ್ಯೆಯನ್ನು ಖಂಡಿಸಿ ಯು. ಟಿ. ಖಾದರ್ ಹೇಳಿದ್ದಾರೆ.

ಆರೋಪಿಗಳನ್ನ UAPA ಅಡಿಯಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕು. ಸರಕಾರ ಸ್ಪಷ್ಟವಾದ ನಿರ್ದೇಶನ ಪೊಲೀಸ್ ಇಲಾಖೆಗೆ ಕೊಡಲಿ ಎಂದರು.

ತಾರತಮ್ಯ ರಹಿತವಾಗಿ ಜಲೀಲ್, ಫಾಝಿಲ್, ಮಸೂದ್ ಗೂ ಪರಿಹಾರ ಕೊಡಬೇಕು ಎಂದು ಸುರತ್ಕಲ್ ಜಲೀಲ್ ಹತ್ಯೆ ಬಗ್ಗೆ ಯು.ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: