Ad Widget

Dakshina Kannada Covid | ಕೋವಿಡ್ ಮುನ್ನೆಚ್ಚರಿಕೆ : ದಕ್ಷಿಣ ಕನ್ನಡ ಜಿಲ್ಲೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ

InShot_20221226_184615480
Ad Widget

Ad Widget

Ad Widget

ಮಂಗಳೂರು: ಚೀನಾದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಈ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೆಲವು ಮಾರ್ಗಸೂಚಿಗಳನ್ನು (Dakshina Kannada Covid) ಪಾಲಿಸಲು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ಆದೇಶದಲ್ಲಿ ಸೂಚಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯ. ಅದರಲ್ಲೂ, ವಿಶೇಷವಾಗಿ ವೃದ್ಧರು ಹಾಗೂ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್‌ ಧರಿಸಬೇಕು ಎಂದು ಸೂಚಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

ಕೋವಿಡ್-19 ಲಸಿಕೆ ಪ್ರಿಕಾಶನರಿ ಡೋಸ್ ಪಡೆಯಲು ಅರ್ಹರಿರುವವರು ಶೀಘ್ರವಾಗಿ ಪಡೆದುಕೊಳ್ಳಬೇಕು ಎಂದಿದ್ದಾರೆ.ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ, ಪರೀಕ್ಷೆ ಮಾಡಿಸಿಕೊಳ್ಳಬೇಕು ಹಾಗೂ ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಟಾಚಾರದ ಅನ್ವಯ ಕ್ರಮಗಳನ್ನು ಪಾಲಿಸಬೇಕು. ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನವನ್ನು ಮಾಡಬಹುದು ಎಂದು ಸೂಚಿಸಲಾಗಿದೆ.

ಸಭೆ ಹಾಗೂ ಸಮಾರಂಭಗಳ ಆಯೋಜಕರು ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಅದಷ್ಟೂ ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ, ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಬೆಳಿಗ್ಗೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ ಹಾಗು ದೈಹಿಕ ಅಂತರ ಪಾಲಿಸುವುದು ಅಗತ್ಯ ಎಂದು ಸೂಚಿಸಲಾಗಿದೆ.

Ad Widget

Ad Widget

Ad Widget

Ad Widget

ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೇಂಟ್ಸ್ ಇತರೇ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಕಡ್ಡಾಯವಾಗಿ ದೈಹಿಕ ಅಂತರ ಮತ್ತು ಮಾಸ್ಕ್ ಧರಿಸಬೇಕು. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು.ಅಲ್ಲದೆ ಮುಂದಿನ ದಿನಗಳಲ್ಲಿ ಸರ್ಕಾರ ಹೊರಡಿಸುವ ಎಲ್ಲಾ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: