Ad Widget

Big Breaking: Heeraben Modi | ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ನಿಧನ

20221228_144757
Ad Widget

Ad Widget

Ad Widget

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು.

Ad Widget

Ad Widget

Ad Widget

Ad Widget

ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿ ಮೋದಿ ಸರಣಿ ಟ್ವೀಟ್‌ ಮಾಡಿ, ತಮ್ಮ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ.. ತಾಯಿಯಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ, ಅದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ ಅಂತ ಬರೆದುಕೊಂಡಿದ್ದಾರೆ. 

Ad Widget

Ad Widget

Ad Widget

Ad Widget

ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದಿದ್ದರು. ತಾಯಿಯ ಪಾದ ತೊಳೆದು ಪೂಜಿಸಿದ್ದರು.

ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ, ಅವರನ್ನು ಡಿ.28 ರಂದು ಗುಜರಾತ್‌ನ  ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶತಾಯುಷಿಯಾಗಿರುವ ಹೀರಾಬೆನ್ ಅವರನ್ನು ಈ ಹಿಂದೆಯೂ ಆಸ್ಪತ್ರೆಗೆ ದಾಖಲಿಸಲಾಗಿತ್ತು.   ಈ ಸಂದರ್ಭ ಮೋದಿ ತಾಯಿ ಆರೋಗ್ಯಕ್ಕಾಗಿ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ ಭಾರಿ ವೈರಲ್ ಆಗಿತ್ತು.

Ad Widget

Ad Widget
Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: