ತುಮಕೂರು, ಡಿ.30: ದೇವರಾಯನದುರ್ಗದ ಪ್ರವಾಸಿ ಮಂದಿರದಲ್ಲಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತ ಗುತ್ತಿಗೆದಾರನನ್ನು ತುಮಕೂರು ನಗರದ ಸಪ್ತಗಿರಿ ಬಡಾವಣೆ ಮೂಲದ ಟಿ.ಎನ್ ಪ್ರಸಾದ್ (50) ಎಂದು ಗುರುತಿಸಲಾಗಿದೆ.
ಪಿಡಬ್ಲ್ಯೂಡಿ ಇಲಾಖೆಯ ಸಿವಿಲ್ ಕಂಟ್ರಾಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಟಿ.ಎನ್ ಪ್ರಸಾದ್, ಸಾಲ ಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಮಾತನಾಡಿರುವ ತುಮಕೂರು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಲರಾಮ್, ಮೃತ ಟಿ.ಎನ್ ಪ್ರಸಾದ್ ಸಾಲದ ಸುಳಿಯಲ್ಲಿ ಸಿಲುಕಿದ್ದರು. ಸಾಲದ ಒತ್ತಡ ಜಾಸ್ತಿಯಾಗಿದ್ದು, ಕೆಲಸ ನಿರ್ವಹಿಸಿದ್ದ ಬಿಲ್ ಗಳು ಸಹ ಪಾವತಿ ಆಗಿರಲಿಲ್ಲ. ಅಲ್ಲದೆ, ಇತ್ತೀಚೆಗೆ ತಾನು ವಾಸವಾಗಿದ್ದ ಮನೆಯನ್ನು ಸಹ ಮಾರಾಟ ಮಾಡಿದ್ದಾರೆ. ರಾಜ್ಯದ ಭ್ರಷ್ಟ ಆಡಳಿತ ಹಾಗೂ ರಾಜಕಾರಣಿಗಳ ವ್ಯವಸ್ಥೆ ಈ ಸಾವಿಗೆ ಕಾರಣ ಎಂದು ಆರೋಪಿಸಿದರು.