ಗಾಂಧೀನಗರ: ಬಸ್ಸು ಚಾಲನೆ ಮಾಡುತ್ತಿರುವಾಗ ಚಾಲಕ ಹೃದಯಘಾತಕ್ಕೆ ತುತ್ತಾಗಿ, ನಿಯಂತ್ರಣ ಕಳಕೊಂಡ ವಾಹನ ಇನ್ನೊಂದು ವಾಹನಕ್ಕೆ ಢಿಕ್ಕಿ ಹೊಡೆದು ಭೀಕರ ಅಪಘಾತ (Accident) ಸಂಭವಿಸಿ 9 ಜನರು ಸಾವನ್ನಪ್ಪಿದ ಹಾಗೂ 28 ಜನರು ಗಾಯಗೊಂಡ ಘಟನೆ ಗುಜರಾತ್ನ (Gujarat) ರಾಜ್ಯದ ನವಸಾರಿ ಜಿಲ್ಲೆಯಲ್ಲಿ ನಿನ್ನೆ ತಡ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಸೂರತ್ನಿಂದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಒಂದು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಾಗುತ್ತಿದ್ದ ವೇಳೆ ಟೊಯೊಟಾ ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಗೂ ಮುನ್ನ ಚಾಲಕನಿಗೆ ಹೃದಯಾಘಾತವಾಗಿದ್ದು, ಇದರಿಂದ ವಾಹನ ನಿಯಂತ್ರಣ ಕಳೆದುಕೊಂಡು ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಬಸ್ಸಿನ ಚಾಲಕ ಹೃದಯಾಘಾತಕ್ಕೆ ತುತ್ತಾಗುತ್ತಲೇ ಬಸ್ಸು ಯದ್ವತದ್ವಾ ಚಲಿಸಿದ್ದು ಎದುರಿನಿಂದ ಬರುತ್ತಿದ್ದ ಎಸ್ ಯುವಿ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಕಾರಿನಲ್ಲಿದ್ದವರು ಎಲ್ಲರೂ ಸಾವನ್ನಪ್ಪಿದ್ದು, ಘಟನೆಯಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.8 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ 11 ಮಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಹೃದಯಾಘಾತವಾದ ಬಳಿಕ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಅಲ್ಲಿ ಅವರು ಮೃತಪಟ್ಟಿದ್ದಾರೆ.ಕಾರಿನಲ್ಲಿದ್ದವರು ಗುಜರಾತ್ ನ ಆಂಗಲೇಶ್ವರ ಪ್ರದೇಶದ ನಿವಾಸಿಗಳು. ವಿರುದ್ಧ ಧಿಕ್ಕಿನಿಂದ ಬರುತ್ತಿದ್ದರು. ಅಪಘಾತದ ಬಳಿಕ ಬಸ್ ಹಾಗೂ ಕಾರನ್ನು ಕ್ರೇನ್ ಮೂಲಕ ತೆರೆವು ಮಾಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.