ರಾಮನಗರ (ಜ.1): ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ (BY Raghavendra) ಅವರ ಪೋಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್ (Prasanna Bhat) ಎಂಬ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಉಡುಪಿ ಜಿಲ್ಲೆ ಕುಂದಾಪುರ ಮೂಲದ ಪ್ರಸನ್ನ ಭಟ್ ಎಂಬಾತ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಛಾಯಗ್ರಾಹಕನಾಗಿದ್ದು, ಮೃತ ಪ್ರಸನ್ನ ಅವರಿಗೆ 28 ವರ್ಷ ವಯಸ್ಸಾಗಿತ್ತು. ಇವರು ಸಂಘ ಪರಿವಾರದ ಸಂವಾದ ಆನ್ ಲೈನ್ ಪೋರ್ಟಲ್ ನಲ್ಲಿ ಈ ಹಿಂದೆ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದರು.
ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಮಾವತ್ತೂರು ಕೆರೆಗೆ ಹೊಸ ವರ್ಷಾಚರಣೆ ಮಾಡಲು ಸಹೋದರ ಕೌಶಿಕ್ ಸೇರಿ ಐವರು ಸ್ನೇಹಿತರ ಜೊತೆ ಪ್ರಸನ್ನ ಬಂದಿದ್ದರು. ಈ ವೇಳೆ ಕೆರೆಯಲ್ಲಿ ಈಜಾಡಲು ಹೋಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಮೃತ ಪ್ರಸನ್ನ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಹುಟುಕಾಟ ನಡೆಸುತ್ತಿದ್ದಾರೆ. ಶವ ಇದೀಗ ಪತ್ತೆಯಾಗಿದೆ ಎನ್ನಲಾಗಿದೆ.
ಸಂಸದ ಬಿವೈ ರಾಘವೇಂದ್ರ ಅವರು ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಇಲ್ಲದ ಕಾರಣ ಪ್ರಸನ್ನ ಅವರು ರಾಮನಗರಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.
ರಾಮೇಶ್ವರಕ್ಕೆ ಪ್ರವಾಸ ಹೊರಟಿದ್ದ ಅವರು ಇದರ ಮಧ್ಯೆ ಸಹೋದರನ ಮನೆ ರಾಮನಗರದ ಕನಕಗಿರಿಗೆ ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ.