ಸುಳ್ಯ, ಜ.1: ಸುಳ್ಯದ ಕಾಂಗ್ರೆಸ್ ಮುಖಂಡ ಸುಧೀರ್ ರೈ ಮೇನಾಲ(48) ಇಂದು ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಾಲಬಾಧೆಯಿಂದ ತಡೆಯಲಾರದೆ ಇತ್ತಿಚೆಗೆ ವಿಷ ಸೇವಿಸಿ ಅಸ್ವಸ್ಥರಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಸ್ಥಳೀಯ ಅಂಗಡಿಯಿಂದ ಕ್ರಿಮಿನಾಶಕ ಖರೀದಿಸಿದ್ದರು. ಇದನ್ನೆ ಮನೆಗೆ ತಲುಪುವಾಗ ಕುಡಿದಿದ್ದರು ಎನ್ನಲಾಗಿದೆ. ಮೃತರು ಇತ್ತಿಚೆಗೆಷ್ಟೇ ಹೊಸ ಮನೆ ಕಟ್ಟಿಸಿದ್ದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ಸುಧೀರ್ ರೈ ಮೇನಾಲ ಯುವ ಕಾಂಗ್ರೆಸ್ ಅಧ್ಯಕ್ಷತೆ ಸೇರಿ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಕಾಂಗ್ರೇಸ್ ಆಡಳಿತ ಅವಧಿಯಲ್ಲಿ ಅಕ್ರಮ-ಸಕ್ರಮ ಸಮಿತಿ ಸದಸ್ಯರಾಗಿದ್ದರು. ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದರು.
ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.