Ad Widget

Nandini – Amul merger ನಂದಿನಿ –ಅಮೂಲ್‌ ವಿಲೀನದ ಪ್ರಶ್ನೆಯೇ ಇಲ್ಲ – ಆ ರೀತಿ ಶಾ ಮಾತನಾಡಿಲ್ಲ  : ಕನ್ನಡಿಗರ ತೀವ್ರ ಆಕ್ರೋಶದ ಬಳಿಕ  ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ

WhatsApp Image 2023-01-02 at 11.08.23
Ad Widget

Ad Widget

Ad Widget

Nandini – Amul merger: ಬೆಂಗಳೂರು, ಜ. 1: ಕರ್ನಾಟಕ ಹಾಲು ಮಹಾ ಮಂಡಳ(ಕೆಎಂಎಫ್) ಮತ್ತು  ಗುಜರಾತ್‍ನ ಅಮೂಲ್ ವಿಲೀನದ ಪ್ರಶ್ನೆಯೇ ಇಲ್ಲ. ಕೆಎಂಎಫ್ ವಿಲೀನದ ಕುರಿತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮಾತನಾಡಿಲ್ಲ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೆಎಂಎಫ್ ಬಲಿಷ್ಠ ಸಂಸ್ಥೆ. 15 ಮಿಲ್ಕ್ ಯೂನಿಯನ್, 9 ಲಕ್ಷ ಮಹಿಳೆಯರು ಸೇರಿ 26 ಲಕ್ಷ ಮಂದಿ ಇದರಡಿಯಲ್ಲಿ ಬರುತ್ತಾರೆ. ಸಾವಿರಾರು ಕೋಟಿ ರೂ. ವಹಿವಾಟನ್ನು ನಡೆಸುತ್ತಿದೆ ಎಂದು ವಿವರಿಸಿದರು.

Ad Widget

Ad Widget

Ad Widget

Ad Widget

Ad Widget

ಇಲ್ಲಿನ ಮಿಲ್ಕ್ ಯೂನಿಯನ್ ಮತ್ತು ಫೆಡರೇಶನ್ ಗುಜರಾತ್‍ನಷ್ಟೇ ಪ್ರಬಲವಾಗಿ ಬೆಳೆದಿದೆ. ವಿಲೀನ ಪ್ರಸ್ತಾಪ ಇಲ್ಲವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮದಲ್ಲಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇದರ ಬಗ್ಗೆ ಸ್ಪಷ್ಟವಾಗಿ ತಿಳಿಸಿದ್ದಾರೆ. ಕರ್ನಾಟಕದ ಪ್ರತಿ ಗ್ರಾಮಗಳಲ್ಲೂ ಮಿಲ್ಕ್ ಡೈರಿ ಮಾಡಬೇಕು. ಪತ್ತಿನ ಸಹಕಾರ ಸಂಘಕ್ಕೆ ಹೊಸ ನಿಯಮಾವಳಿ ಮಾಡಬೇಕು. 3 ವರ್ಷಗಳೊಳಗೆ ಒಂದೇ ಸಾಫ್ಟ್‍ವೇರ್ ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸರಕಾರ ಸೂಚಿಸಿದೆ ಎಂದು ಅವರು ವಿವರಿಸಿದರು.

ಹೊಸ ಸಾಫ್ಟ್‍ವೇರ್ ಅಳವಡಿಸಲು ಶೇ.60ರಷ್ಟು ಹಣವನ್ನು ಕೇಂದ್ರ ಸರಕಾರ ಕೊಡಲಿದೆ. ಒಂದೆ ನಿಯಮಾವಳಿ, ಒಂದೆ ಸಾಫ್ಟ್ ವೇರ್ ಅಳವಡಿಕೆ ಆಗಲಿದೆ. ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ರೇಷನ್ ಡಿಪೊ, ಪೆಟ್ರೋಲ್ ಬಂಕ್ ನಿರ್ವಹಣೆ ಇನ್ನಿತರ ಅವಕಾಶಗಳಿದ್ದರೆ ಅನುಮತಿ ಕೊಡಲು ಯೋಜಿಸಿದೆ. ಇಂತಹ ಸಹಕಾರ ಸಂಘಗಳು ಮತ್ತು ಹಾಲಿನ ಸೊಸೈಟಿಗಳು ಶಕ್ತಿಶಾಲಿಯಾಗಿ ಕಾರ್ಯ ನಿರ್ವಹಿಸಬೇಕೆಂಬ ಚಿಂತನೆ ಮಾಡಿ ಅದರ ಅನುಷ್ಠಾನ  ಆಗುತ್ತಿದೆ ಎಂದು ಸೋಮಶೇಖರ್ ತಿಳಿಸಿದರು.

Ad Widget

Ad Widget

Ad Widget

Ad Widget

ಗುಜರಾತ್‌ನ ‘ಅಮುಲ್’ ಜತೆ ಕರ್ನಾಟಕದ ‘ನಂದಿನಿ ವಿಲೀನ : ಅಮಿತ್‌ ಶಾ – ಕನ್ನಡಿಗರ ಆಕ್ರೋಶ

ಈ ಕುರಿತಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮಾದರಿ ನಿಯಮಾವಳಿ ಜಾರಿಗೊಳಿಸುವ ಉದ್ದೇಶವಿದೆ. ಗೆಜ್ಜಲಗೆರೆಯಲ್ಲಿ ಅಮಿತ್ ಶಾ ಮಾತನಾಡುವ ವೇಳೆ ಗುಜರಾತ್‍ನಷ್ಟೇ ಪ್ರಬಲವಾಗಿ ಕೆಎಂಎಫ್ ಬೆಳೆಯುತ್ತಿದೆ. ಎರಡೂ ಒಟ್ಟಾಗಿ ಹೋದರೆ ಅಭಿವೃದ್ಧಿ ಸಾಧ್ಯ ಎಂದು ಅಮಿತ್ ಶಾ ಹೇಳಿದ್ದರು. ಆದರೆ, ವಿಲೀನದ ಚರ್ಚೆಯೂ ಆಗಿಲ್ಲ. ಅಂತಹ ಮಾತನ್ನೂ ಅವರು ಆಡಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.

ಎರಡೂ ದಿನವೂ ಅವರ ಜೊತೆಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಅಂತಹ ಪ್ರಸ್ತಾಪವೇ ಇಲ್ಲ. ಕಾಂಗ್ರೆಸ್-ಜೆಡಿಎಸ್‍ನವರು ಚುನಾವಣೆ ಹತ್ತಿರ ಬರುವ ಕಾರಣ ಗಿಮಿಕ್ ಮಾಡಿ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಯಾವುದೇ ಸಂದರ್ಭದಲ್ಲಿ ಕೆಎಂಎಫ್, ಅಮೂಲ್ ಜತೆ ವಿಲೀನದ ಪ್ರಸ್ತಾಪ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮಂಡ್ಯದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ನಂದಿನಿ ಹಾಗೂ ಅಮುಲ್‌ ನ್ನು ವಿಲೀನಗೊಳಿಸುವುದಾಗಿ ಹೇಳಿದ್ದಾರೆ ಎಂಬ ಮಾದ್ಯಮ ವರದಿಗಳ ಬಳಿಕ , ಕನ್ನಡಿಗರು ಈ ಪ್ರಸ್ತಾವಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ವಿಪಕ್ಷಗಳಾದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕೂಡ ಈ ಪ್ರಸ್ತಾಪವನ್ನು ತೀವ್ರವಾಗಿ ವಿರೋಧಿಸಿತ್ತು  

Amul Nandini | ನಮ್ಮ ಬ್ಯಾಂಕುಗಳನ್ನು ಕಿತ್ತುಕೊಂಡು ನಮ್ಮ ಆರ್ಥಿಕತೆಯನ್ನು ನಾಶಮಾಡಲೆತ್ನಿಸಿದ ಬಿಜೆಪಿಯವರು ಈಗ ನಮ್ಮ ಹಾಲಿನ ಮೂಲಕ್ಕೆ ಕೈ ಹಾಕುತ್ತಿದ್ದಾರೆ – ಈ ದುಷ್ಟ ಭಸ್ಮಾಸುರನ ಕೈಗೆ ಈಗಲೇ ಬರೆ ಹಾಕದಿದ್ದರೆ ನಮ್ಮ 25 ಲಕ್ಷ ರೈತ ಕುಟುಂಬಗಳನ್ನು ಬೀದಿಪಾಲು ಮಾಡುತ್ತಾರೆ : ‘ಅಮುಲ್-ನಂದಿನಿ’ ವಿಲೀನಕ್ಕೆ ಸಿದ್ದರಾಮಯ್ಯ ಆಕ್ರೋಶ

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: