ಮಂಗಳೂರು: ಶಿವಮೊಗ್ಗದ ಟ್ರಾಯಲ್ ಬ್ಲಾಸ್ಟ್ ಮತ್ತು ಉಗ್ರ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ (NIA Ride) ದಾಳಿ ಮಾಡಿ ಓರ್ವ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ ಮೂಲದ ರಿಹಾನ್ ಶೇಕ್ ಎಂಬಾತನನ್ನು ವಶಕ್ಕೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ಎನ್‌ಐಎ ಅಧಿಕಾರಿಗಳು ಪ್ರಕರಣವನ್ನು ತನಿಖೆಯನ್ನು ತೀವ್ರಗೊಳಿಸಿದ್ದಾರೆ.ಬಂಧಿತ ಶಂಕಿತ ಉಗ್ರ ಮಾಝ್ ಮುನೀರ್ ಪಿ.ಎ ಇಂಜಿನಿಯರಿಂಗ್ ಕಾಲೇಜು ಶಿಕ್ಷಣ ಪಡೆದಿದ್ದ.
ಟ್ರಾಯಲ್ ಬ್ಲಾಸ್ಟ್‌ನಲ್ಲಿ ಮಾಝ್ ಮುನೀರ್‌ನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದರು. ಇದೀಗ ಬೆಂಗಳೂರಿನಿಂದ ಏಳು ಮಂದಿ ಎನ್‌ಐಎ ಅಧಿಕಾರಿಗಳು ಆಗಮಿಸಿದ್ದು, ಕಾಲೇಜಿನಲ್ಲಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.ಶಂಕಿತ ಉಗ್ರ ಮಾಝ್ ಮುನೀರ್ ನಗರದ ಬಲ್ಮಠದಲ್ಲಿ ವಾಸವಾಗಿದ್ದುಕೊಂಡು ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ.
ಇದೀಗ ಮಾಝ್ ಜತೆ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿರುವ ಅನುಮಾನದಲ್ಲಿ ರಿಹಾನ್ ಶೇಖ್‌ನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಶಿವಮೊಗ್ಗ ಟ್ರಾಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಪಿ.ಎ ಕಾಲೇಜಿಗೆ ದಾಳಿ ಮಾಡಲಾಗಿದೆ.
ಶಂಕಿತ ಉಗ್ರ ಮಾಝ್ ಮುನೀರ್ ಜತೆಗೆ ಮಂಗಳೂರು ಕುಕ್ಕರ್ ಬ್ಲಾಸ್ಟ್ ರುವಾರಿ ಶಾರೀಕ್ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಈ ಹಿನ್ನೆಯಲ್ಲಿ ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟಕ್ಕೂ ಶಿವಮೊಗ್ಗದಲ್ಲಿ ಆದ ಸ್ಫೋಟಕ್ಕೂ ನಂಟು ಇರುವ ಸಾಧ್ಯತೆ ಎಂದು ಅಂದಾಜಿಸಲಾಗಿದೆ.