ನವದೆಹಲಿ:ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರವನ್ನು (Rama Mandira)ನೋಡುವ ಕೋಟ್ಯಂತರ ಭಾರತೀಯರ ಕನಸು ಸಾಕಾರಗೊಳ್ಳಲು ಇನ್ನೊಂದು ವರ್ಷ ಕಾದರೆ ಸಾಕು !
ಹೌದು, ರಾಮಮಂದಿರ ಲೋಕಾರ್ಪಣೆಗೊಳ್ಳುವ ದಿನಾಂಕ ನಿಗದಿಯಾಗಿದೆ. 2024ರ ಜನವರಿ 1 ಹೊಸ ವರ್ಷದಂದೆ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಸದ್ಯದಲ್ಲೇ ವಿಧಾನಸಭೆ ಚುನಾವಣೆ ಎದುರಿಸಲಿರುವ ತ್ರಿಪುರದಲ್ಲಿ ಸಾರ್ವಜನಿಕ ರ್‍ಯಾಲಿ ನಡೆಸಿ ಗುರುವಾರ ಮಾತನಾಡಿದ ಸಚಿವ ಶಾ, “ರಾಮಮಂದಿರ ನಿರ್ಮಾಣಕ್ಕೆ ಕೋರ್ಟ್‌ನಲ್ಲಿ ಕಾಂಗ್ರೆಸ್ ಅಡ್ಡಿಪಡಿಸಿತು. ಆದರೆ, ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದ ಕೂಡಲೇ, ಪ್ರಧಾನಿ ನರೇಂದ್ರ ಮೋದಿಯವರು ಮಂದಿರ ನಿರ್ಮಾಣದ ಕಾರ್ಯ ಆರಂಭಿಸಿದರು.
ಈಗ ಎಲ್ಲರೂ ಕೇಳಿಸಿಕೊಳ್ಳಿ- 2024ರ ಜನವರಿ 1ರಂದು ಬೃಹತ್ ಹಾಗೂ ಭವ್ಯವಾದ ರಾಮಮಂದಿರ ಲೋಕಾರ್ಪಣೆಯಾಗಲಿದೆ’ ಎಂದಿದ್ದಾರೆ.