ಮಡಿಕೇರಿ : ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ (Heart Attack) ಸಾವಿಗೀಡಾಗುತ್ತಿರುವ ಚಿಕ್ಕ ವಯಸ್ಸಿನ ಮಕ್ಕಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದೀಗ ಹೃದಯಾಘಾತದಿಂದ 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರಿನಲ್ಲಿ ನಡೆದಿದೆ.
12 ವರ್ಷದ ಬಾಲಕ ಕೀರ್ತನ್ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಪುತ್ರನನ್ನು ಕಳೆದುಕೊಂಡ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ. ಶನಿವಾರ ರಾತ್ರಿ ಮನೆಯಲ್ಲಿದ್ದ ವೇಳೆ ಬಾಲಕ ಕಿರುಚಿಕೊಂಡಿದ್ದಾನೆ.
ಆತಂಕಗೊಂಡ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ನಡುವೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ.
ಮೃತ ಕೀರ್ತನ್ ಓದುತ್ತಿದ್ದ ಅದೇ ಶಾಲೆಯ ಬಸ್ ಚಾಲಕನಾಗಿ ಬಾಲಕನ ತಂದೆ ಕರ್ತವ್ಯ ನಿರ್ವಹಿಸುತ್ತಿದ್ದರು.