ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ನ ಕಬ್ಬಿಣದ ರಾಡ್‌ಗಳು ದ್ವಿಚಕ್ರ ವಾಹನದ ಮೇಲೆ ಕುಸಿದು ಬಿದ್ದ (Bengaluru Metro) ಪರಿಣಾಮ ಮಹಿಳೆ ಮತ್ತು ಆಕೆಯ ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.
ಬೆಳಿಗ್ಗೆ 10:30 ರ ಸುಮಾರಿಗೆ ಘಟನೆ ನಡೆದಿದ್ದು, ತೇಜಸ್ವಿನಿ (28) ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಸಾವನ್ನಪ್ಪಿದ ದುರ್ದೈವಿಗಳು. ಗಂಭೀರ ಸ್ಥಿತಿಯಲ್ಲಿರುವ ಮತ್ತೊಂದು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಂದೆ ಪ್ರಾಣಾಪಾಯದಿಂದ ಪರಾಗಿದ್ದಾರೆ.
ಕಲ್ಯಾಣ್ ನಗರದಿಂದ ಹೆಚ್‌ಆರ್‌ಬಿಆರ್ ಲೇಔಟ್‌ಗೆ ಹೋಗುವ ರಸ್ತೆಯಲ್ಲಿ ನಿರ್ಮಿಸಲಾಗುತ್ತಿದ್ದ ಮೆಟ್ರೊ ರೈಲ್ವೆ ಪಿಲ್ಲರ್‌ನ ಲೋಹದ ರಾಡ್‌ಗಳು ರಸ್ತೆ ಮೇಲೆ ಕುಸಿದು ಬಿದ್ದಿದ್ದರಿಂದ ಘಟನೆ ನಡೆದಿದೆ.
ಬೆಂಗಳೂರಿನ ಕಲ್ಯಾಣ್‌ನಗರದಿಂದ ಎಚ್‌ಆರ್‌ಬಿಆರ್ ಲೇಔಟ್‌ಗೆ ಹೋಗುವ ರಸ್ತೆಯಲ್ಲಿ ನಿರ್ಮಾಣವಾಗುತ್ತಿದ್ದ ಮೆಟ್ರೊ ರೈಲು ಪಿಲ್ಲರ್ ಕುಸಿದು ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಲೋಹಿತ್ ಕುಮಾರ್, ಆತನ ಪತ್ನಿ ತೇಜಸ್ವಿನಿ ಹಾಗೂ ಅವರ ಇಬ್ಬರು ಪುತ್ರರು ಗಾಯಗೊಂಡಿದ್ದಾರೆ. ಕೂಡಲೇ ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ದುರಾದೃಷ್ಟವಶಾತ್ ತಾಯಿ ಮತ್ತು ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಧಾರವಾಡ ಮೂಲದ ಸಿವಿಲ್ ಇಂಜಿನಿಯರ್ ಲೋಹಿತ್ ಕುಮಾರ್ ಮತ್ತು ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ಮೋಟೋರೋಲಾ ಕಂಪನಿಯಲ್ಲಿ ವೃತ್ತಿ ಹೊಂದಿದ್ದ ತೇಜಸ್ವಿನಿ ನಾಗವಾರದಲ್ಲಿ ನೆಲೆಸಿದ್ದರು. ಅದರಂತೆ ಲೋಹಿತ್ ಅವರು ನಾಗವಾರದಿಂದ ಮಾನ್ಯತಾ ಟೆಕ್ ಪಾರ್ಕ್ ಬಳಿ ಪತ್ನಿಯನ್ನ ಬಿಟ್ಟು ನಂತರ ತನ್ನ ಇಬ್ಬರು ಮಕ್ಕಳನ್ನ ಬೇಬಿ ಸಿಟ್ಟಿಂಗ್ಗೆ ಬಿಡಲು ತೆರಳುತ್ತಿದ್ದಾಗ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಏಕಾ ಏಕಿಯಾಗಿ ಬಿದ್ದಿದ್ದು ಎಲ್ಲರಿಗೂ ಗಾಯಗಳಾಗಿದ್ದವು.
ಗಾಯಾಳುಗಳ ಪೈಕಿ ತೇಜಸ್ವಿನಿ ಮತ್ತು ಓರ್ವ ಪುತ್ರ ವಿಹಾನ್ ಗಂಭೀರವಾಗಿ ಗಾಯಗೊಂಡಿದ್ದರು. ಇವರಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಐಟಿ ಉದ್ಯಮಿ ಮೋಹನ್ ದಾಸ್ ಪೈ ಸಹಿತ ಹಲವು ಗಣ್ಯರು ಈ ಘಟನೆಯನ್ನು ಗಂಭೀರವಾಗಿ ಖಂಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘಟನೆಯ ಮಾಹಿತಿ ತಿಳಿದು ಈ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
A metro pillar which was under constriction collapsed in Nagavara, Outer Ring Road in #Bengaluru. #BMRCL yet to share more details on the incident. More details are awaited.@the_hindu @THBengaluru pic.twitter.com/mx0gT4zNGs
— Darshan Devaiah B P (@DarshanDevaiahB) January 10, 2023