Ad Widget

Ganga Kalyana | ಗಂಗಾ ಕಲ್ಯಾಣ ಯೋಜನೆಯಲ್ಲಿ ವ್ಯಾಪಕ ಹಗರಣ ಆರೋಪ- ಗುತ್ತಿಗೆ ಯೋಜನೆ ಕೈಬಿಟ್ಟು ಫಲಾನುಭವಿ ಖಾತೆಗೆ ನೇರ ಹಣ : ಸಚಿವ ಕೋಟ ಶ್ರೀನಿವಾಸ ಪೂಜಾರಿ

FB_IMG_1673318699052
Ad Widget

Ad Widget

Ad Widget

ಮೈಸೂರು: ಗಂಗಾ ಕಲ್ಯಾಣ ಯೋಜನೆಯಲ್ಲಿ ವ್ಯಾಪಕ ಹಗರಣ ನಡೆಯುತ್ತಿರುವ ಆರೋಪ ಕೇಳಿ ಬಂದ ಬೆನ್ನಲ್ಲೇ ಗಂಗಾ ಕಲ್ಯಾಣ ಯೋಜನೆಯಡಿ (Ganga Kalyana) ಕೊಳವೆ ಬಾವಿ ಕೊರೆಸಲು ಟೆಂಡರ್‌ ಪದ್ಧತಿ ಕೈಬಿಟ್ಟು, ಫ‌ಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಹಣ ಜಮಾವಣೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

Ad Widget

Ad Widget

Ad Widget

Ad Widget

ನಗರದ ಮಾನಸಗಂಗೋತ್ರಿಯ ಸೆನೆಟ್‌ ಭವನದಲ್ಲಿ ಸೋಮವಾರ ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಸಹಯೋಗದಲ್ಲಿ ಆಯೋಜಿಸಿದ್ದ ವಿಭಾಗೀಯ ಮಟ್ಟದ ಫ‌ಲಾನುಭವಿಗಳಿಗೆ ಅರಿವು ಕಾರ್ಯಾಗಾರ, ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

Ad Widget

Ad Widget

Ad Widget

Ad Widget

ಈವರೆಗೆ ಕೊಳವೆ ಬಾವಿ ಕೊರೆಸಲು, ವಿದ್ಯುತ್‌ ಸಂಪರ್ಕ, ಪಂಪ್‌ಸೆಟ್‌ ಇನ್ನಿತರ ಸೌಲಭ್ಯ ಕಲ್ಪಿಸಲು ಟೆಂಡರ್‌ ನೀಡಲಾಗುತ್ತಿತ್ತು. ಈ ಕುರಿತು ಅನೇಕ ದೂರುಗಳು ಬಂದಿವೆ. ಆದ್ದರಿಂದ ಟೆಂಡರ್‌ ಪದ್ಧತಿ ತೆಗೆದುಹಾಕಲಾಗಿದೆ. ಫ‌ಲಾನುಭವಿಗಳಿಗೆ ನೇರವಾಗಿ ಕೊಡುವ ಹಣದಲ್ಲಿ ಬೋರ್‌ವೆಲ್‌ ಕೊರೆಸುವುದು, ಪಂಪ್‌ಸೆಟ್‌ ಖರೀದಿ ಸೇರಿ ಎಲ್ಲ ಸೌಲಭ್ಯ ಪಡೆದುಕೊಳ್ಳಬೇಕು. ಇದರಿಂದ ಹಣ ದುರ್ಬಳಕೆ ತಡೆದು ವ್ಯವಸ್ಥೆಯಲ್ಲೂ ಪಾರದರ್ಶಕತೆ ಕಾಯ್ದುಕೊಳ್ಳಬಹುದಾಗಿದೆ ಎಂದರು.

ಕೊಳವೆ ಬಾವಿ ಸೌಲಭ್ಯ ಪಡೆದುಕೊಳ್ಳಲು ಅರ್ಜಿದಾರರ ವಯಸ್ಸು 60ರ ಮೇಲಿರಬೇಕೆಂಬ ನಿರ್ಬಂಧವನ್ನೂ ತೆಗೆದುಹಾಕಲಾಗಿದೆ. ಯಾವುದೇ ವಯಸ್ಸಿನ ಮಿತಿವಿಲ್ಲದೆ ಎಲ್ಲರೂ ಸಹ ಅರ್ಜಿ ಸಲ್ಲಿಸಬಹುದು. ಪ್ರಸಕ್ತ ವರ್ಷದಲ್ಲಿ 1,700 ಕೊಳವೆಬಾವಿ ಕೊರೆಸಲು ತೀರ್ಮಾನಿಸಲಾಗಿದೆ ಎಂದರು.

Ad Widget

Ad Widget
Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: