ಶಿವಮೊಗ್ಗ: ಹೃದಯಾಘಾತದಿಂದ (Heart Attack) ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ವರದಿಯಾಗಿದೆ.
ಕಳೆದೆರಡು ದಿನಗಳಿಂದ ಮಡಿಕೇರಿ, ಮಂಗಳೂರಿನಲ್ಲಿ ಶಾಲೆಗೆ ಹೊರಟಿದ್ದ ಸಣ್ಣ ಪ್ರಾಯದ ವಿದ್ಯಾರ್ಥಿಗಳೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಶಿವಮೊಗ್ಗದಲ್ಲೂ ಘಟನೆ ನಡೆದಿದೆ.
10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಬುಧವಾರ ಜಯಂತ್ ಎಂದಿನಂತೆ ಶಾಲೆಗೆ ಹೊರಡುತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ ನನ್ನು ಸಮೀಪದ ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಅಷ್ಟರಲ್ಲೇ ಜಯಂತ ಹೃದಯಾಘಾತದಿಂದ ಮೃತ ಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಸಣ್ಣ ಪ್ರಾಯದವರ ಹೃದಯಾಘಾತ ಪ್ರಕರಣ ತನಿಖೆಗೆ ಒತ್ತಾಯಿಸಿದ್ದ ಶಕುಂತಲ ಶೆಟ್ಟಿ